Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 5:12 - ಪರಿಶುದ್ದ ಬೈಬಲ್‌

12 ನಾನು ಈ ಕಿರುಪತ್ರವನ್ನು ಸಿಲ್ವಾನನ ನೆರವಿನಿಂದ ಬರೆದೆನು. ಅವನು ಕ್ರಿಸ್ತನಲ್ಲಿ ನಂಬಿಗಸ್ತನಾದ ಸಹೋದರನೆಂಬುದು ನನಗೆ ತಿಳಿದಿದೆ. ನಾನು ನಿಮ್ಮನ್ನು ಸಂತೈಸಲು ಮತ್ತು ಪ್ರೋತ್ಸಾಹಿಸಲು ಈ ಪತ್ರವನ್ನು ಬರೆದೆನು. ಇದುವೇ ದೇವರ ನಿಜವಾದ ಕೃಪೆ ಎಂಬುದನ್ನು ನಿಮಗೆ ತಿಳಿಸಬೇಕೆಂಬುದೇ ನನ್ನ ಅಪೇಕ್ಷೆಯಾಗಿತ್ತು. ಆ ಕೃಪೆಯಲ್ಲಿ ಸ್ಥಿರತೆಯಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನನ್ನ ಈ ಪುಟ್ಟ ಪತ್ರವನ್ನು ನಂಬಿಕಸ್ಥ ಸಹೋದರನಾದ ಸಿಲ್ವಾನನ ಸಹಾಯದಿಂದ ನಿಮಗೆ ಬರೆದಿರುತ್ತೇನೆ. ನಿಮ್ಮನ್ನು ಪ್ರೋತ್ಸಾಹಿಸಲೆಂದು ಮತ್ತು ಇದುವೇ ದೇವರ ನಿಜವಾದ ಅನುಗ್ರಹವೆಂದು ಸ್ಪಷ್ಟೀಕರಿಸಲು ಬರೆದಿದ್ದೇನೆ. ಈ ಅನುಗ್ರಹದಲ್ಲಿ ನೀವು ದೃಢವಾಗಿ ನಿಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಾನು ಸಂಕ್ಷೇಪವಾಗಿ ಬರೆದು ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಿಮಗೆ ನಂಬಿಗಸ್ತ ಆಗಿರುವ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಸಹಾಯದಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹಿ ದೆವಾಚಿ ಕುರ್ಪಾ ಖರಿ ಮನುನ್ ತುಮ್ಕಾ ಸಾಕ್ಷಿ ದಿವ್ಚೆ ಅನಿ ತುಮ್ಕಾ ಉಮ್ಮೆದಿನ್ ಭರುಚೆ ಮನ್ತಲಿ ಮಾಜಿ ಆಶ್ಯಾ ಹೊತ್ತಿ, ಭಾವಾನು ತ್ಯಾತುರ್ ತುಮಿ ಘಟ್ ಇಬೆ ರಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 5:12
24 ತಿಳಿವುಗಳ ಹೋಲಿಕೆ  

ನನ್ನ ಸಹೋದರ ಸಹೋದರಿಯರೇ, ನಾನು ಹೇಳಿದ ಈ ಸಂಗತಿಗಳನ್ನು ನೀವು ತಾಳ್ಮೆಯಿಂದ ಆಲಿಸಬೇಕೆಂದು ನಿಮ್ಮಲ್ಲಿ ಬೇಡಿಕೊಳ್ಳುತ್ತೇನೆ. ನಿಮ್ಮನ್ನು ಬಲಪಡಿಸುವುದಕ್ಕಾಗಿ ಈ ಪತ್ರವನ್ನು ಬರೆದಿರುವೆನು. ಈ ಪತ್ರವು ಬಹುದೀರ್ಘವಾದದ್ದೇನೂ ಅಲ್ಲ.


ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.


ಸೀಲನು, ತಿಮೊಥೆಯನು ಮತ್ತು ನಾನು ನಿಮಗೆ ಬೋಧಿಸಿದ ದೇವರ ಮಗನಾದ ಯೇಸುಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಎರಡು ರೀತಿಯಲ್ಲಿರಲಿಲ್ಲ. ಕ್ರಿಸ್ತನಲ್ಲಿ ಯಾವಾಗಲೂ ಇರುವಂಥದ್ದು “ಹೌದು” ಎಂಬುದೇ.


ಸಹೋದರ ಸಹೋದರಿಯರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನೀವು ಜ್ಞಾಪಿಸಿಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿಕೊಂಡಿರಿ ಮತ್ತು ಅದರಲ್ಲಿ ದೃಢವಾಗಿದ್ದೀರಿ.


ನಾನು ನನ್ನ ಸ್ವಂತ ಪ್ರಾಣದ ಬಗ್ಗೆ ಚಿಂತಿಸುವುದಿಲ್ಲ. ಪ್ರಭುವಾದ ಯೇಸು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಅತ್ಯಂತ ಮುಖ್ಯವಾಗಿದೆ. ದೇವರ ಕೃಪೆಯ ವಿಷಯವಾದ ಸುವಾರ್ತೆಯ ಬಗ್ಗೆ ಸಾಕ್ಷಿ ನೀಡುವುದೇ ನನ್ನ ಕೆಲಸವಾಗಿದೆ. ಆ ಕೆಲಸವನ್ನು ಮಾಡಿ ಪೂರೈಸುವುದೇ ನನ್ನ ಅಪೇಕ್ಷೆಯಾಗಿದೆ.


ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲನು, ಸಿಲ್ವಾನನು ಮತ್ತು ತಿಮೊಥೆಯನು ಬರೆಯುವ ಪತ್ರ.


ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ ಮತ್ತು ತಿಮೊಥೆ ಬರೆಯುವ ಪತ್ರ. ದೇವರ ಕೃಪೆಯೂ ಶಾಂತಿಯೂ ನಿಮಗಿರಲಿ.


ಪ್ರಿಯ ಸ್ನೇಹಿತರೇ, ನಾವೆಲ್ಲರೂ ಹಂಚಿಕೊಳ್ಳುವ ರಕ್ಷಣೆಯನ್ನು ಕುರಿತು ನಿಮಗೆ ಬರೆಯಬೇಕೆಂದು ನಾನು ಬಹಳವಾಗಿ ಇಚ್ಛಿಸಿದ್ದೆನು. ಆದರೆ ಮತ್ತೊಂದು ವಿಷಯದ ಬಗ್ಗೆ ನಾನು ನಿಮಗೆ ಬರೆಯುವುದು ಅಗತ್ಯವೆನಿಸಿತು. ದೇವರು ತನ್ನ ಪರಿಶುದ್ಧ ಜನರಿಗೆ ದಯಪಾಲಿಸಿರುವ ನಂಬಿಕೆಗಾಗಿ ನೀವು ಪ್ರಯಾಸಪಟ್ಟು ಹೋರಾಡುವಂತೆ ನಾನು ನಿಮ್ಮನ್ನು ಪ್ರೋತ್ಸಾಹಿಸಲು ಇಚ್ಛಿಸುತ್ತೇನೆ. ದೇವರು ನಮಗೆ ಈ ನಂಬಿಕೆಯನ್ನು ಒಂದೇಸಲ ದಯಪಾಲಿಸಿದನು. ಅದು ಸರ್ವಕಾಲಗಳಲ್ಲಿಯೂ ಒಳ್ಳೆಯದಾಗಿದೆ.


ದೇಮೇತ್ರಿಯನ ಬಗ್ಗೆ ಜನರೆಲ್ಲರೂ ಒಳ್ಳೆಯ ಸಂಗತಿಗಳನ್ನು ಹೇಳುತ್ತಾರೆ. ಅವರು ಹೇಳುವುದನ್ನು ಸತ್ಯವೂ ಅಂಗೀಕರಿಸುತ್ತದೆ. ಅವನನ್ನು ಕುರಿತು ನಾವೂ ಸಹ ಒಳ್ಳೆಯದನ್ನು ಹೇಳುತ್ತೇವೆ. ನಾವು ಹೇಳುವುದು ನಿಜವೆಂಬುದು ನಿನಗೆ ತಿಳಿದಿದೆ.


ಈ ಸುಳ್ಳುಬೋಧಕರು ಸರಿಯಾದ ಮಾರ್ಗವನ್ನು ತೊರೆದು, ಕೆಟ್ಟಮಾರ್ಗವನ್ನು ಅನುಸರಿಸಿದ್ದಾರೆ. ಬಿಳಾಮನು ಬೆಯೋರನ ಮಗ. ಅವನು ಅಧರ್ಮದಿಂದ ದೊರೆಯುವ ಲಾಭವನ್ನು ಪ್ರೀತಿಸಿದನು.


ಇವೆಲ್ಲವೂ ನಿಮಗೆ ತಿಳಿದಿದೆ. ನಿಮ್ಮಲ್ಲಿರುವ ಸತ್ಯದಲ್ಲಿ ನೀವು ಸ್ಥಿರವಾಗಿದ್ದೀರಿ. ಆದರೆ ಇವುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳುವಂತೆ ನಾನು ನಿಮಗೆ ಯಾವಾಗಲೂ ಸಹಾಯ ಮಾಡುತ್ತೇನೆ.


ಒನೇಸಿಮನು ಕ್ರಿಸ್ತನಲ್ಲಿ ನಂಬಿಗಸ್ತನಾದ ಪ್ರೀತಿಯ ಸಹೋದರನಾಗಿದ್ದಾನೆ. ಅವನು ನಿಮ್ಮ ಊರಿನವನೇ. ಇಲ್ಲಿ ಸಂಭವಿಸಿದ್ದೆಲ್ಲವನ್ನು ಅವರು ನಿಮಗೆ ತಿಳಿಸುತ್ತಾರೆ.


ತುಖಿಕನು ಕ್ರಿಸ್ತನಲ್ಲಿ ನನ್ನ ಪ್ರೀತಿಯ ಸಹೋದರನಾಗಿದ್ದಾನೆ. ನನ್ನೊಡನೆ ಅವನೂ ಪ್ರಭುವಿನಲ್ಲಿ ನಂಬಿಗಸ್ತನಾದ ಸೇವಕನೂ ದಾಸನೂ ಆಗಿದ್ದಾನೆ. ನನಗೆ ಸಂಭವಿಸುತ್ತಿರುವುದನ್ನೆಲ್ಲ ಅವನು ನಿಮಗೆ ತಿಳಿಸುತ್ತಾನೆ.


ನೀವು ಎಪಫ್ರನಿಂದ ದೇವರ ಕೃಪೆಯ ಬಗ್ಗೆ ತಿಳಿದುಕೊಂಡಿರಿ. ಅವನು ನಮ್ಮ ಜೊತೆಯಲ್ಲಿಯೇ ಸೇವೆ ಮಾಡುತ್ತಿದ್ದಾನೆ. ನಾವು ಅವನನ್ನು ಪ್ರೀತಿಸುತ್ತೇವೆ. ಅವನು ನಮಗೋಸ್ಕರ ಕ್ರಿಸ್ತನ ನಂಬಿಗಸ್ತ ಸೇವಕನಾಗಿದ್ದಾನೆ.


ನಮ್ಮ ಪ್ರಿಯ ಸಹೋದರನಾದ ತುಖಿಕನನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ಅವನು ಪ್ರಭುವಿನ ಸೇವೆಯಲ್ಲಿ ನಂಬಿಗಸ್ತನಾದ ಸೇವಕನಾಗಿದ್ದಾನೆ. ಇಲ್ಲಿಯ ಸಂಗತಿಗಳನ್ನೆಲ್ಲಾ ಅವನು ನಿಮಗೆ ತಿಳಿಸುವನು. ನಾನು ಇಲ್ಲಿ ಹೇಗಿದ್ದೇನೆ ಮತ್ತು ಏನು ಮಾಡುತ್ತಿದ್ದೇನೆ ಎಂಬುದು ಆಗ ನಿಮಗೆ ಗೊತ್ತಾಗುವುದು.


ದೇವರು ತನ್ನ ರಹಸ್ಯವಾದ ಯೋಜನೆಯನ್ನು ನನಗೆ ತಿಳಿಸಿದನು ಮತ್ತು ತೋರಿಸಿದನು. ಇದರ ಬಗ್ಗೆ ನಾನು ಆಗಲೇ ನಿಮಗೆ ಸ್ವಲ್ಪ ಬರೆದಿದ್ದೇನೆ.


ನಿಮ್ಮ ನಂಬಿಕೆಯನ್ನು ಹತೋಟಿಯಲ್ಲಿಟ್ಟುಕೊಳ್ಳಲು ನಾವು ಪ್ರಯತ್ನಿಸುತ್ತಿದ್ದೇವೆಂದು ನಾನು ಹೇಳುತ್ತಿಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿದ್ದೀರಿ. ಆದರೆ ನಾವು ನಿಮ್ಮ ಸಂತೋಷಕ್ಕಾಗಿ ನಿಮ್ಮ ಜೊತೆಕೆಲಸದವರಾಗಿದ್ದೇವೆ.


ಈಗ ನಾವು ಆನಂದಿಸುತ್ತಿರುವ ದೇವರ ಕೃಪಾಶ್ರಯಕ್ಕೆ ಕ್ರಿಸ್ತನೇ ನಮ್ಮನ್ನು ನಮ್ಮ ನಂಬಿಕೆಯ ಮೂಲಕ ತಂದಿದ್ದಾನೆ. ದೇವರ ಮಹಿಮೆಯನ್ನು ಹೊಂದುವೆವು ಎಂಬ ನಿರೀಕ್ಷೆಯು ನಮಗಿರುವುದರಿಂದ ನಾವು ಬಹು ಸಂತೋಷವಾಗಿದ್ದೇವೆ.


ಪೇತ್ರನು ತಮ್ಮ ಹಿಂದೆ ಬರುತ್ತಿದ್ದ ಈ ಶಿಷ್ಯನನ್ನು ಕಂಡಾಗ ಯೇಸುವಿಗೆ, “ಪ್ರಭುವೇ, ಇವನ ವಿಷಯವೇನು?” ಎಂದು ಕೇಳಿದನು.


ಅಪೊಸ್ತಲರು, ಹಿರಿಯರು ಮತ್ತು ಇಡೀ ಸಭೆಯವರು ಪೌಲ ಬಾರ್ನಬರೊಂದಿಗೆ ಕೆಲವು ಜನರನ್ನು ಅಂತಿಯೋಕ್ಯಕ್ಕೆ ಕಳುಹಿಸಬಯಸಿದರು. ತಮ್ಮವರೇ ಆದ ಕೆಲವರನ್ನು ಆರಿಸಿಕೊಳ್ಳಲು ಸಭೆಯು ನಿರ್ಧರಿಸಿತು. ಅವರು ಯೂದನನ್ನು (ಬಾರ್ಸಬನೆಂದೂ ಕರೆಯುತ್ತಿದ್ದರು) ಮತ್ತು ಸೀಲನನ್ನು ಆರಿಸಿಕೊಂಡರು. ಇವರು ಜೆರುಸಲೇಮಿನ ಸಭೆಯವರಲ್ಲಿ ಪ್ರಮುಖರಾಗಿದ್ದರು.


ಆದ್ದರಿಂದ ನೀವು ನಿಮ್ಮ ಮನಸ್ಸುಗಳನ್ನು ಸೇವೆಗಾಗಿ ಸಿದ್ಧಪಡಿಸಿರಿ. ಅಲ್ಲದೆ ನಿಮ್ಮನ್ನು ಹತೋಟಿಯಲ್ಲಿಟ್ಟುಕೊಂಡಿರಿ. ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರೆಯುವ ಕೃಪಾವರದ ಮೇಲೆಯೇ ನಿಮ್ಮ ನಿರೀಕ್ಷೆಯೆಲ್ಲಾ ಇರಬೇಕು.


ನಿಮ್ಮಲ್ಲಿ ಪ್ರತಿಯೊಬ್ಬರೂ ದೇವರಿಂದ ಆತ್ಮಿಕ ವರವನ್ನು ಪಡೆದುಕೊಂಡಿರಿ. ದೇವರು ನಿಮಗೆ ಅನೇಕ ವಿಧಗಳಲ್ಲಿ ತನ್ನ ಕೃಪೆಯನ್ನು ದಯಪಾಲಿಸಿರುವನು. ನೀವು ದೇವರ ವರಗಳನ್ನು ಉಪಯೋಗಿಸುವ ಜವಾಬ್ದಾರಿಯುತರಾದ ಸೇವಕರಾಗಿದ್ದೀರಿ. ಆದ್ದರಿಂದ ಒಳ್ಳೆಯ ಸೇವಕರಾಗಿರಿ; ಪರಸ್ಪರ ಸೇವೆ ಮಾಡಲು ನಿಮ್ಮ ವರಗಳನ್ನು ಉಪಯೋಗಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು