1 ಪೇತ್ರನು 5:3 - ಪರಿಶುದ್ದ ಬೈಬಲ್3 ನೀವು ಜವಾಬ್ದಾರರಾಗಿರುವ ಆ ಮಂದೆಯ ಮೇಲೆ ದಬ್ಬಾಳಿಕೆ ಮಾಡಬೇಡಿ. ನೀವು ಅವರಿಗೆ ಉತ್ತಮ ಮಾದರಿಯಾಗಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಿಮ್ಮ ಪಾಲನೆಗೆ ಒಳಗಾಗಿರುವವರ ಮೇಲೆ ದರ್ಪದಿಂದ ದೊರೆತನಮಾಡದೆ ದೇವರ ಮಂದೆಗೆ ಆದರ್ಶ ಮಾದರಿಗಳಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ದೇವರು ನಿಮ್ಮ ವಶದಲ್ಲಿಟ್ಟಿರುವ ಸಭೆಗಳ ಮೇಲೆ ದೊರೆತನ ಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದೇವರ ಸ್ವಾಸ್ತ್ಯದ ಮೇಲೆ ದೊರೆತನ ಮಾಡುವವರಂತೆ ನಡೆಯದೆ ಮಂದೆಗೆ ಆದರ್ಶವಾಗಿಯೇ ನಡೆದುಕೊಳ್ಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತುಮ್ಚ್ಯಾ ಜವಾಬ್ದಾರಿತ್ ಹೊತ್ತ್ಯಾಚ್ಯಾ ಹಿಂಡಾಚ್ಯಾ ವೈರ್ ಅದಿಕಾರ್ ಚಲ್ವುನಕಾಸಿ ಖರೆ ತ್ಯಾ ಹಿಂಡಾಕ್ ತುಮಿ ಎಕ್ ಉದಾರ್ ಹೊವ್ನ್ ರಾವಾ. ಅಧ್ಯಾಯವನ್ನು ನೋಡಿ |
ಆದರೆ ನೀವು ಬಲಹೀನ ಕುರಿಗಳನ್ನು ಬಲಪಡಿಸಲಿಲ್ಲ. ಕಾಯಿಲೆಯಲ್ಲಿರುವ ಕುರಿಗಳನ್ನು ನೀವು ಪರಾಂಬರಿಸಲಿಲ್ಲ. ಗಾಯಗೊಂಡ ಕುರಿಗಳಿಗೆ ಬಟ್ಟೆ ಸುತ್ತಲಿಲ್ಲ. ಕೆಲವು ಕುರಿಗಳು ದಾರಿತಪ್ಪಿ ದೂರ ಹೋದವು. ಆದರೆ ನೀವು ಅದರ ಬೆನ್ನ ಹಿಂದೆ ಹೋಗಿ ಹಿಂತಿರುಗಿ ಬರುವಂತೆ ಮಾಡಲಿಲ್ಲ. ತಪ್ಪಿಹೋದ ಕುರಿಗಳನ್ನು ನೀವು ಹುಡುಕಲಿಲ್ಲ. ನೀವು ಬಹಳ ಕ್ರೂರಿಗಳೂ ದಯೆ ಇಲ್ಲದವರೂ ಆಗಿದ್ದೀರಿ. ಆ ರೀತಿಯಾಗಿ ನೀವು ನಿಮ್ಮ ಕುರಿಗಳನ್ನು ನಡೆಸಿದಿರಿ.
ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”