1 ಪೇತ್ರನು 5:4 - ಪರಿಶುದ್ದ ಬೈಬಲ್4 ಪ್ರಧಾನ ಕುರುಬನು (ಕ್ರಿಸ್ತನು) ಪ್ರತ್ಯಕ್ಷನಾದಾಗ, ನಿಮಗೆ ಕಿರೀಟವು ಲಭಿಸುವುದು. ಮಹಾ ಪ್ರಭಾವವನ್ನು ಹೊಂದಿರುವ ಆ ಕಿರೀಟವು ತನ್ನ ಸೌಂದರ್ಯವನ್ನು ಕಳೆದುಕೊಳ್ಳುವುದೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಹಿರೀ ಕುರುಬನು ಪ್ರತ್ಯಕ್ಷನಾಗುವಾಗ ನೀವು ದೇವಪ್ರಭಾವವೆಂಬ ಎಂದಿಗೂ ಬಾಡದ ಜಯಮಾಲೆಯನ್ನು ಹೊಂದುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಪ್ರಧಾನ ಕುರುಬ ಆಗಿರುವವರು ಪ್ರತ್ಯಕ್ಷರಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಮೊಟೊ ಕುರ್ಬುರ್ ದಿಲ್ಲ್ಯಾ ತನ್ನಾ ತೊ ತುಮಿ ಮಹಿಮೆನ್ ಭರಲೊ ಮುಕುಟ್ ಜೊಡುನ್ಗೆತ್ಯಾಸಿ, ತೆಜೊ ಪ್ರಜ್ವಳ್ ಕನ್ನಾಚ್ ಕಮ್ಮಿ ಹೊಯ್ನಾ. ಅಧ್ಯಾಯವನ್ನು ನೋಡಿ |
ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.
ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.