1 ಪೇತ್ರನು 5:6 - ಪರಿಶುದ್ದ ಬೈಬಲ್6 ಆದ್ದರಿಂದ ದೇವರ ಶಕ್ತಿಯುತವಾದ ಹಸ್ತದ ಕೆಳಗೆ ನಮ್ರತೆಯಿಂದಿರಿ. ಯೋಗ್ಯಕಾಲವು ಸಮೀಪಿಸಿದಾಗ ಆತನು ನಿಮ್ಮನ್ನು ಮೇಲೆತ್ತುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ದೇವರ ಪರಾಕ್ರಮಕ್ಕೆ ತಗ್ಗಿ ನಮ್ರರಾಗಿ ನಡೆದುಕೊಳ್ಳಿ. ಆಗ ಅವರು ನಿಮ್ಮನ್ನು ಸಕಾಲದಲ್ಲಿ ಮೇಲಕ್ಕೆತ್ತುವರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹೀಗಿರುವುದರಿಂದ ದೇವರ ಪರಾಕ್ರಮವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ, ಆಗ ದೇವರು ಸಕಾಲದಲ್ಲಿ ನಿಮ್ಮನ್ನು ಮೇಲಕ್ಕೆತ್ತುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತಸೆ ಮನುನ್ ತುಮ್ಕಾಚ್ ತುಮಿ ದೆವಾಚ್ಯಾ ಮೊಟ್ಯಾ ಹಾತಾಂಚ್ಯಾ ಖಾಯ್ಲ್ ಥವ್ನ್ ಘೆವಾ, ಅಸೆ ತೆಚೊ ಬರೊ ಎಳ್ ಯೆಲ್ಲ್ಯಾ ತನ್ನಾ ತೊ ತುಮ್ಕಾ ವೈರ್ ಉಕಲ್ತಾ. ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ.