1 ಯೋಹಾನನು 1:3 - ಪರಿಶುದ್ದ ಬೈಬಲ್3 ನಾವು ನೋಡಿದವುಗಳನ್ನೂ ಕೇಳಿದವುಗಳನ್ನೂ ಈಗ ನಿಮಗೆ ಹೇಳುತ್ತೇವೆ. ಏಕೆಂದರೆ ನೀವು ನಮ್ಮ ಅನ್ಯೋನ್ಯತೆಯಲ್ಲಿ ಪಾಲುಗಾರರಾಗಬೇಕೆಂಬುದು ನಮ್ಮ ಅಪೇಕ್ಷೆ. ನಮ್ಮ ಈ ಅನ್ಯೋನ್ಯತೆಯು ತಂದೆಯಾದ ದೇವರ ಮತ್ತು ಆತನ ಮಗನಾದ ಯೇಸು ಕ್ರಿಸ್ತನ ಸಂಗಡವಿರುವಂಥದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಪಿತನೊಡನೆಯೂ ಅವರ ಪುತ್ರ ಕ್ರಿಸ್ತಯೇಸುವಿನೊಡನೆಯೂ ನಮಗಿರುವಂಥ ಅನ್ಯೋನ್ಯತೆಯಲ್ಲಿ ನೀವು ಸಹ ಭಾಗಿಗಳಾಗುವಂತೆ ನಾವು ಕಂಡುಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾವು ಕಂಡು ಕೇಳಿದ್ದು ನಿಮಗೂ ಗೊತ್ತಾಗಿ ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ಅದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರಬೇಕೆಂದು, ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡವೂ ಅವರ ಮಗನಾದ ಕ್ರಿಸ್ತ ಯೇಸುವಿನ ಸಂಗಡವೂ ಇರುವಂಥದ್ದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಅಮಿ ಬಗಟಲ್ಲೆ ಅನಿ ಆಯ್ಕಲ್ಲೆ ಅತ್ತಾ ತುಮ್ಕಾ ಸಾಂಗ್ತಾಂವ್, ಅಸೆ ಕಶ್ಯಾಕ್ ಮಟ್ಲ್ಯಾರ್ ತುಮಿ ಅಮ್ಚ್ಯಾ ವಾಂಗ್ಡಾ ಮಿಳುನ್ ಭಾಗ್ ಘೆವ್ನ್ ರ್‍ಹಾವ್ಚೆ ಮನುನ್ ಅಮ್ಚಿ ಆಶಾ, ಅಮ್ಚ್ಯಾ ಬಾಬಾ ದೆವಾಚ್ಯಾ ಅನಿ ತೆಚ್ಯಾ ಲೆಕಾ ಜೆಜು ಕ್ರಿಸ್ತಾತ್ ಎಕ್ವಟ್ಟಾನ್ ವಾಂಗ್ಡಾ ರ್‍ಹಾವ್ಚೆ. ಅಧ್ಯಾಯವನ್ನು ನೋಡಿ |
ಕೆಲವರಿಗೆ ವಿಶ್ವಾಸಿಗಳಾದ ಯಜಮಾನರಿದ್ದಾರೆ. ಆದ್ದರಿಂದ ಆ ಗುಲಾಮರು ಮತ್ತು ಯಜಮಾನರು ಸಹೋದರರಾಗಿದ್ದಾರೆ. ಆದರೆ ಅವರು ತಮ್ಮ ಯಜಮಾನರಿಗೆ ಕಡಿಮೆ ಗೌರವ ಕೊಡದೆ ತಮ್ಮ ಯಜಮಾನರ ಸೇವೆಯನ್ನು ಇನ್ನೂ ಉತ್ತಮವಾಗಿ ಮಾಡಬೇಕು. ಏಕೆಂದರೆ ಅವರು ಒಳ್ಳೆಯ ಕೆಲಸಗಳಿಗಾಗಿ ತಮ್ಮನ್ನು ಪ್ರತಿಷ್ಠಿಸಿಕೊಳ್ಳುವ ವಿಶ್ವಾಸಿಗಳಾಗಿದ್ದಾರೆ ಮತ್ತು ಸ್ನೇಹಿತರಾಗಿದ್ದಾರೆ. ಈ ಕಾರ್ಯಗಳನ್ನು ಮಾಡುವಂತೆ ನೀನು ಜನರಿಗೆ ಉಪದೇಶಿಸಬೇಕು ಮತ್ತು ತಿಳಿಸಬೇಕು.
ನಿಮ್ಮೆಲ್ಲರ ವಿಷಯದಲ್ಲಿ ಈ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.
ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.