1 ಯೋಹಾನನು 1:9 - ಪರಿಶುದ್ದ ಬೈಬಲ್9 ಆದರೆ ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ, ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿ ನಮ್ಮನ್ನು ಶುದ್ಧೀಕರಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಪ್ರತಿಯಾಗಿ, ನಮ್ಮ ಪಾಪಗಳನ್ನು ಒಪ್ಪಿಕೊಂಡರೆ, ಆಗ ನಂಬಿಕಸ್ಥರೂ ನೀತಿವಂತರೂ ಆದ ದೇವರು ನಮ್ಮ ಪಾಪಗಳನ್ನು ಕ್ಷಮಿಸಿ ಎಲ್ಲಾ ಅನೀತಿ - ಅಧರ್ಮಗಳಿಂದ ನಮ್ಮನ್ನು ಶುದ್ಧೀಕರಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷವಿುಸಿಬಿಟ್ಟು ಸಕಲ ಅನೀತಿಯನ್ನು ಪರಿಹರಿಸಿ ನಮ್ಮನ್ನು ಶುದ್ಧಿಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಖರೆ, ಅಮಿ ತೆಚ್ಯಾಕ್ಡೆ ಸಗ್ಳಿ ಪಾಪಾ ಸಾಂಗುನ್ ಘೆಟ್ಲಾಂವ್ ತರ್ ತೊ ಅಪ್ನಾಚಿ ಗೊಸ್ಟ್ ಸಂಬಾಳ್ತಾ ಅನಿ ಸಮಾ ಹೊತ್ತೆ ಕರ್ತಾ. ತೊ ಅಮ್ಚಿ ಪಾಪಾ ಮಾಪ್ ಕರ್ತಾ, ಅನಿ ಅಮ್ಚ್ಯಾ ಸಗ್ಳ್ಯಾ ಚುಕಾನಿತ್ನಾ ಅಮ್ಕಾ ನಿತಳ್ ಕರ್ತಾ. ಅಧ್ಯಾಯವನ್ನು ನೋಡಿ |
“ಹಗಲಿರುಳು ನಿನ್ನಲ್ಲಿ ಪ್ರಾರ್ಥಿಸುವ ನಿನ್ನ ಸೇವಕನನ್ನು ಕಣ್ತೆರೆದು ನೋಡು; ಅವನ ಪ್ರಾರ್ಥನೆಗೆ ಕಿವಿಗೊಟ್ಟು ಆಲಿಸು. ನಿನ್ನ ಸೇವಕರಾದ ಇಸ್ರೇಲರಿಗಾಗಿ ನಾನು ಪ್ರಾರ್ಥಿಸುತ್ತಿದ್ದೇನೆ. ಇಸ್ರೇಲರಾದ ನಾವು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ನಾನು ನಿನಗೆ ಅರಿಕೆ ಮಾಡುತ್ತೇನೆ. ನಾನೂ ನನ್ನ ತಂದೆಯ ಮನೆಯವರೂ ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ನಿನಗೆ ಅರಿಕೆ ಮಾಡುತ್ತೇವೆ.
“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.
ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!