Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:16 - ಪರಿಶುದ್ದ ಬೈಬಲ್‌

16 ಈ ಲೋಕದಲ್ಲಿರುವ ಕೆಟ್ಟವುಗಳು ಇಂತಿವೆ: ನಮ್ಮ ಪಾಪಸ್ವಭಾವವನ್ನು ತಣಿಸಲು ಮಾಡಲಿಚ್ಛಿಸುವ ಕಾರ್ಯಗಳು, ನಾವು ನೋಡುವ ಪಾಪಪೂರಿತವಾದದ್ದನ್ನು ಪಡೆಯಲಿಚ್ಛಿಸುವುದು, ಮತ್ತು ನಮ್ಮಲ್ಲಿರುವ ವಸ್ತುಗಳಲ್ಲಿಯೇ ದುರಹಂಕಾರಪಡುವುದು. ಆದರೆ ಇವುಗಳಲ್ಲಿ ಯಾವುದೂ ತಂದೆಯಿಂದ ಬರುವುದಿಲ್ಲ. ಇವುಗಳೆಲ್ಲ ಈ ಲೋಕದಿಂದ ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಲೋಕಸಂಬಂಧವಾದ ದೈಹಿಕ ದುರಿಚ್ಛೆ, ಕಣ್ಣಿನ ಕಾಮುಕತೆ, ಐಶ್ವರ್ಯದ ಅಹಂಭಾವ - ಇಂಥವು ಪಿತನಿಂದ ಬಂದುವಲ್ಲ, ಲೋಕದಿಂದಲೇ ಬಂದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಲೋಕದಲ್ಲಿರುವ ಶರೀರದಾಶೆ ಕಣ್ಣಿನಾಶೆ ಬದುಕುಬಾಳಿನ ಡಂಬ ಈ ಮೊದಲಾದವುಗಳೆಲ್ಲವು ತಂದೆಯಿಂದ ಹುಟ್ಟದೆ ಲೋಕದಿಂದ ಹುಟ್ಟಿದವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಯಿಂದ ಬಂದವುಗಳಲ್ಲ, ಲೋಕದಿಂದ ಬಂದವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಹ್ಯಾ ಜಗಾತ್ಲಿ ಬುರ್ಶಿ ಕಾಮಾ ಅಸಿ ಹಾತ್, ಲೊಕಾಕ್ನಿ ದಿಸ್ತಲೆ, ಅನಿ ಪಾಜೆ ಹೊಲ್ಲೆ, ಹ್ಯಾ ಜಗಾತ್ ಲೊಕಾ ಮೊಟೆಪಾನ್ ದಾಕ್ವುತಲೆ, ಸಗ್ಳೆ ಬಾಬಾಕ್ನಾ ಯೆಯ್ನಾ, ಹೆ ಸಗ್ಳೆ ಜಗಾಕ್ನಾ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:16
34 ತಿಳಿವುಗಳ ಹೋಲಿಕೆ  

ಪ್ರಭುವಾದ ಯೇಸು ಕ್ರಿಸ್ತನನ್ನೇ ಧರಿಸಿಕೊಳ್ಳಿರಿ. ನಿಮ್ಮ ಪಾಪಸ್ವಭಾವವನ್ನು ಹೇಗೆ ತೃಪ್ತಿಗೊಳಿಸಬೇಕೆಂದಾಗಲಿ ಕೆಟ್ಟಕಾರ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಹೇಗೆ ಪೂರೈಸಿಕೊಳ್ಳಬೇಕೆಂದಾಗಲಿ ಆಲೋಚಿಸಬೇಡಿ.


ನಮ್ಮ ಶರೀರಭಾವವು ದೇವರಾತ್ಮನಿಗೆ ವಿರುದ್ಧವಾದ ಸಂಗತಿಗಳನ್ನು ಬಯಸುತ್ತದೆ. ದೇವರಾತ್ಮನು ನಮ್ಮ ಶರೀರಭಾವಕ್ಕೆ ವಿರುದ್ಧವಾದ ಸಂಗತಿಗಳನ್ನು ಬಯಸುತ್ತಾನೆ. ಆದ್ದರಿಂದ ನೀವು ನಿಜವಾಗಿಯೂ ಬಯಸುವಂಥವುಗಳನ್ನು ಮಾಡಲಾಗದಂತೆ ಅವು ಒಂದಕ್ಕೊಂದು ಹೋರಾಡುತ್ತವೆ.


ಸ್ತ್ರೀಗೆ ಆ ಮರ ಸುಂದರವಾಗಿ ಕಂಡಿತು. ಅದರ ಹಣ್ಣು ಆಕೆಗೆ ತಿನ್ನಲು ಯೋಗ್ಯವಾಗಿ ಕಂಡಿತು. ಆ ಮರ ತನ್ನನ್ನು ಜ್ಞಾನಿಯನ್ನಾಗಿ ಮಾಡುತ್ತದೆಯೆಂದು ಆಕೆ ಉತ್ಸಾಹಗೊಂಡಳು. ಆದ್ದರಿಂದ ಸ್ತ್ರೀಯು ಆ ಮರದ ಹಣ್ಣನ್ನು ಕಿತ್ತುಕೊಂಡು ತಿಂದಳು; ತನ್ನೊಂದಿಗಿದ್ದ ಗಂಡನಿಗೂ ಸ್ವಲ್ಪ ಹಣ್ಣನ್ನು ಕೊಟ್ಟಳು. ಅವನು ಸಹ ಅದನ್ನು ತಿಂದನು.


ಮರಣಕ್ಕಾಗಲಿ ಸಮಾಧಿಗಾಗಲಿ ತೃಪ್ತಿಯೇ ಇಲ್ಲ. ಅಂತೆಯೇ ಮನುಷ್ಯನ ಬಯಕೆಗಳಿಗೂ ಕೊನೆಯಿಲ್ಲ.


ಮೊದಲು ನಾವೆಲ್ಲರೂ ಆ ಜನರಂತೆಯೇ ಜೀವಿಸುತ್ತಿದ್ದೆವು. ಶರೀರಭಾವದ ನಮ್ಮ ಇಚ್ಛೆಗಳನ್ನು ಪೂರೈಸಲು ನಾವು ಪ್ರಯತ್ನಿಸುತ್ತಿದ್ದೆವು. ನಮ್ಮ ದೇಹ, ಮನಸ್ಸುಗಳು ಬಯಸಿದ್ದನ್ನೆಲ್ಲಾ ನಾವು ಮಾಡಿದೆವು. ನಾವು ದುಷ್ಟಜನರಾಗಿದ್ದೆವು. ನಮ್ಮ ಆ ಜೀವಿತದ ದೆಸೆಯಿಂದ ನಾವು ಆಗಲೇ ದೇವರ ಕೋಪಕ್ಕೆ ಗುರಿಯಾಗಬೇಕಿತ್ತು. ನಮಗೂ ಇತರ ಜನರಿಗೂ ಯಾವ ವ್ಯತ್ಯಾಸವೂ ಇರಲಿಲ್ಲ.


ಇಂಥ “ಜ್ಞಾನ”ವು ದೇವರಿಂದ ಬರದೆ ಲೋಕದಿಂದ ಬರುತ್ತದೆ. ಅದು ಆತ್ಮ ಸಂಬಂಧವಾದುದಲ್ಲ. ಅದು ದೆವ್ವಗಳಿಂದ ಬಂದುದು.


ಪ್ರಿಯ ಸ್ನೇಹಿತರೇ, ನೀವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಪರದೇಶದವರಂತೆ ಇದ್ದೀರಿ. ಆದ್ದರಿಂದ ನಿಮ್ಮ ದೇಹಗಳಿಗೆ ಇಷ್ಟವಾದ ಕೆಟ್ಟಸಂಗತಿಗಳಿಂದ ದೂರವಾಗಿರಿ. ಇವು ನಿಮ್ಮ ಜೀವಾತ್ಮಕ್ಕೆ ವಿರುದ್ಧವಾಗಿ ಹೋರಾಡುತ್ತವೆ.


ಪ್ರಭುವಿನ ಅಧಿಕಾರವನ್ನು ದ್ವೇಷಿಸುವ ಜನರನ್ನು ಮತ್ತು ತಮ್ಮ ಪಾಪಸ್ವಭಾವದ ಇಚ್ಚೆಗನುಸಾರವಾಗಿ ಕೆಟ್ಟಕಾರ್ಯಗಳನ್ನು ಮಾಡುವ ಜನರನ್ನು ದೇವರು ಹೀಗೆ ದಂಡಿಸುತ್ತಾನೆ. ಈ ಸುಳ್ಳುಬೋಧಕರು ತಮಗೆ ಬೇಕಾದದ್ದನ್ನೆಲ್ಲಾ ಮಾಡುತ್ತಾರೆ ಮತ್ತು ತಮ್ಮ ಬಗ್ಗೆ ಹೊಗಳಿಕೊಳ್ಳುತ್ತಾರೆ. ಪ್ರಭಾವದಿಂದ ಕೂಡಿರುವ ದೇವದೂತರ ಬಗ್ಗೆ ಕೆಟ್ಟದ್ದನ್ನು ಹೇಳಲು ಅವರು ಹೆದರುವುದಿಲ್ಲ.


ನಾವು ಜೆರಿಕೊ ನಗರವನ್ನು ಮತ್ತು ಅದರಲ್ಲಿದ್ದ ಎಲ್ಲ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಕೊಳ್ಳೆ ಹೊಡೆಯುತ್ತಿದ್ದಾಗ, ಬಾಬಿಲೋನಿನ ಒಂದು ಸುಂದರವಾದ ನಿಲುವಂಗಿಯನ್ನೂ ಸುಮಾರು ಐದು ಪೌಂಡಿನಷ್ಟು ಬೆಳ್ಳಿಯನ್ನೂ ಒಂದು ಪೌಂಡಿಗಿಂತಲೂ ಹೆಚ್ಚು ಬಂಗಾರವನ್ನೂ ಕಂಡೆನು. ಈ ವಸ್ತುಗಳನ್ನು ನನಗಾಗಿ ಇಟ್ಟುಕೊಳ್ಳಬೇಕೆಂದು ತುಂಬ ಆಶೆಯಾಯಿತು. ಅದಕ್ಕಾಗಿ ನಾನು ಅವುಗಳನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದಲ್ಲಿ ಹುಗಿದಿಟ್ಟಿದ್ದೇನೆ. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇದೆ” ಎಂದು ಒಪ್ಪಿಕೊಂಡನು.


ನಾವು ದೇವರಿಗೆ ವಿರುದ್ಧವಾಗಿ ಜೀವಿಸದಂತೆಯೂ ಲೋಕದ ಜನರು ಮಾಡಲಪೇಕ್ಷಿಸುವ ಕೆಟ್ಟಕಾರ್ಯಗಳನ್ನು ಮಾಡದಂತೆಯೂ ಅದು ತಡೆಯುತ್ತದೆ. ನಾವು ದೇವರ ಸೇವೆಯನ್ನು ಮಾಡುತ್ತಿದ್ದೇವೆ ಎಂಬುದನ್ನು ತೋರಿಸುವುದಕ್ಕಾಗಿ ನೀತಿವಂತರಾಗಿಯೂ ಜ್ಞಾನಿಗಳಾಗಿಯೂ ಲೋಕದಲ್ಲಿ ಈಗ ಬಾಳಬೇಕೆಂದು ಅದು ಬೋಧಿಸುತ್ತದೆ.


ಬಳಿಕ ಅವರು ತಮ್ಮ ಆಸೆಯನ್ನು ಈಡೇರಿಸಿಕೊಳ್ಳಲು ಇಷ್ಟಪದಾರ್ಥವನ್ನು ಕೇಳಿ ದೇವರನ್ನೇ ಪರೀಕ್ಷೆಗೊಡ್ಡಿದರು.


ಅವರು ಅರ್ಥವಿಲ್ಲದ ಮಾತು ಗಳಿಂದ ಬಡಾಯಿಕೊಚ್ಚಿಕೊಳ್ಳುತ್ತಾರೆ; ಜನರನ್ನು ಪಾಪಗಳ ಬಲೆಗೆ ನಡೆಸುತ್ತಿದ್ದಾರೆ. ತಪ್ಪುಮಾರ್ಗದಲ್ಲಿ ನಡೆಯುವ ಜನರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡು ಬಂದ ಜನರನ್ನು ದಾರಿತಪ್ಪಿಸುತ್ತಾರೆ. ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಮಾಡಲು ಇಚ್ಛಿಸುವ ಕೆಟ್ಟಕಾರ್ಯಗಳನ್ನು ಬಳಸಿಕೊಂಡು ಈ ಸುಳ್ಳುಬೋಧಕರು ಅವರನ್ನು ದಾರಿ ತಪ್ಪಿಸುತ್ತಾರೆ.


ನೀವು ಮೊದಲು ಈ ಸಂಗತಿಗಳ ಕುರಿತು ಅರ್ಥಮಾಡಿಕೊಳ್ಳದಿದ್ದ ಕಾರಣ, ನೀವು ನಿಮ್ಮ ಇಚ್ಛೆಯಂತೆ ಕೆಟ್ಟಕಾರ್ಯಗಳನ್ನು ಮಾಡಿದಿರಿ. ಆದರೆ ಈಗ ನೀವು ವಿಧೇಯರಾಗಿರುವ ದೇವಮಕ್ಕಳು, ಆದ್ದರಿಂದ ಈಗ ಮೊದಲಿನಂತೆ ಜೀವಿಸಬೇಡಿ.


ಮೊದಲು ನಾವು ಸಹ ಅವಿವೇಕಿಗಳಾಗಿದ್ದೆವು. ನಾವು ವಿಧೇಯರಾಗಿರಲಿಲ್ಲ. ನಾವು ಮೋಸಹೋಗಿದ್ದೆವು. ಅನೇಕ ಬಗೆಯ ಆಸೆಗಳಿಗೆ ಮತ್ತು ಭೋಗಗಳಿಗೆ ದಾಸರಾಗಿದ್ದೆವು; ಕೆಟ್ಟದ್ದನ್ನು ಮಾಡುವವರೂ ಹೊಟ್ಟೆಕಿಚ್ಚುಳ್ಳವರೂ ಆಗಿದ್ದೆವು. ಜನರು ನಮ್ಮನ್ನು ದ್ವೇಷಿಸುತ್ತಿದ್ದರು. ನಾವು ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದೆವು.


ಆದರೆ ಒಬ್ಬನು ಪರಸ್ತ್ರೀಯನ್ನು ನೋಡಿ ಅವಳೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ಬಯಸಿದರೆ, ಅವನು ಆಗಲೇ ತನ್ನ ಮನಸ್ಸಿನಲ್ಲಿ ಅವಳೊಂದಿಗೆ ವ್ಯಭಿಚಾರವನ್ನು ಮಾಡಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ.


ಆದ್ದರಿಂದ ಗರ್ವವು ಅವರಿಗೆ ಆಭರಣವಾಗಿದೆ; ದ್ವೇಷವು ಅವರಿಗೆ ಉಡುಪಾಗಿದೆ.


“ಯುವತಿಯನ್ನು ಕಾಮದಾಶೆಯಿಂದ ನೋಡುವುದಿಲ್ಲವೆಂದು ನನ್ನ ಕಣ್ಣುಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇನೆ.


ಆಗ ಸೈತಾನನು ಯೇಸುವನ್ನು ಕರೆದುಕೊಂಡು ಹೋಗಿ, ಒಂದೇ ಕ್ಷಣದಲ್ಲಿ ಭೂಲೋಕದ ಎಲ್ಲಾ ರಾಜ್ಯಗಳನ್ನು ತೋರಿಸಿ,


ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಶಿಲುಬೆಗೇರಿಸಿದ್ದಾರೆ. ಅವರು ತಮ್ಮ ಹಳೆಯ ಸ್ವಾರ್ಥಪರವಾದ ಅಭಿಲಾಷೆಗಳನ್ನು ಮತ್ತು ತಾವು ಮಾಡಬೇಕೆಂದಿದ್ದ ಕೆಟ್ಟಕಾರ್ಯಗಳನ್ನು ಬಿಟ್ಟುಕೊಟ್ಟವರಾಗಿದ್ದಾರೆ.


ಅವರ ಮಧ್ಯದಲ್ಲಿದ್ದ ಕಿರುಕುಳಕೊಡುವ ಪರದೇಶಸ್ಥರು ಬೇರೆ ರೀತಿಯ ಆಹಾರಕ್ಕಾಗಿ ಬಹಳವಾಗಿ ಆಶಿಸಿದರು. ಇಸ್ರೇಲರು ಸಹ ಮತ್ತೆ ಅಳಲು ಆರಂಭಿಸಿ, “ನಮಗೆ ಯಾರು ಮಾಂಸವನ್ನು ಕೊಡುತ್ತಾರೆ?


ಬಳಿಕ ಸೈತಾನನು ಯೇಸುವನ್ನು ಎತ್ತರವಾದ ಬೆಟ್ಟದ ತುದಿಗೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಮತ್ತು ಅವುಗಳ ವೈಭವವನ್ನು ತೋರಿಸಿ,


ಅವರು ತಮ್ಮ ಆಸೆಗಳನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳಲಿಲ್ಲ. ಆ ಲಾವಕ್ಕಿಗಳ ರಕ್ತವನ್ನು ಪೂರ್ತಿಯಾಗಿ ತೆಗೆಯುವ ಮೊದಲೇ ಅವುಗಳ ಮಾಂಸವನ್ನು ತಿಂದುಬಿಟ್ಟರು.


ಈ ಕಾರಣದಿಂದ ಆ ಸ್ಥಳಕ್ಕೆ, “ಕಿಬ್ರೋತ್ ಹತಾವಾ” ಎಂದು ಹೆಸರಿಟ್ಟರು. ಮಾಂಸಕ್ಕಾಗಿ ಅತ್ಯಾಶೆಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ ಈ ಹೆಸರನ್ನು ಇಟ್ಟರು.


ಆಕೆಯ ಸೌಂದರ್ಯವನ್ನು ಕಂಡು ಹೃದಯದಲ್ಲಿ ಆಸೆಪಡಬೇಡ. ಆಕೆಯ ಕಣ್ಣುಗಳು ನಿನ್ನನ್ನು ವಶಮಾಡಿಕೊಳ್ಳಲು ಬಿಡಬೇಡ.


ಅವರು ಮಾಡಿದಂತೆ ನಾವು ಕೆಟ್ಟವುಗಳನ್ನು ಆಶಿಸಬಾರದೆಂಬುದಕ್ಕೆ ಈ ಘಟನೆಗಳು ನಮಗೆ ಎಚ್ಚರಿಕೆ ನೀಡುವ ನಿದರ್ಶನಗಳಾಗಿವೆ.


ಈ ಹೆಣ್ಣುಮಕ್ಕಳ ಸೌಂದರ್ಯವನ್ನು ಕಂಡ ದೇವಪುತ್ರರು ತಮಗೆ ಬೇಕಾದ ಸ್ತ್ರೀಯರನ್ನು ಆರಿಸಿಕೊಂಡು ಮದುವೆಯಾದರು. ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದ ನಂತರ ನೆಫೇಲಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಪ್ರಸಿದ್ಧರಾದ ಪರಾಕ್ರಮಶಾಲಿಗಳಾಗಿದ್ದರು. ಬಳಿಕ ಯೆಹೋವನು, “ಜನರು ಕೇವಲ ಮಾನವರಷ್ಟೆ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿಯಾಗಕೂಡದು. ಅವರು 120 ವರ್ಷ ಬದುಕುವಂತೆ ಮಾಡುವೆನು” ಅಂದುಕೊಂಡನು.


ಆದರೆ ನೀವೀಗ ಜಂಬಗಾರರಾಗಿ ಹೊಗಳಿಕೊಳ್ಳುತ್ತೀರಿ. ನಿಮ್ಮ ಹೊಗಳಿಕೆಯೆಲ್ಲವೂ ಕೆಟ್ಟದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು