1 ಯೋಹಾನನು 2:18 - ಪರಿಶುದ್ದ ಬೈಬಲ್18 ನನ್ನ ಪ್ರಿಯ ಮಕ್ಕಳೇ, ಅಂತ್ಯವು ಸಮೀಪಿಸಿದೆ! ಕ್ರಿಸ್ತನ ಶತ್ರು ಬರುತ್ತಿದ್ದಾನೆಂಬುದನ್ನು ನೀವು ಕೇಳಿದ್ದೀರಿ. ಕ್ರಿಸ್ತನ ಅನೇಕ ಶತ್ರುಗಳು ಈಗಾಗಲೇ ಇಲ್ಲಿದ್ದಾರೆ. ಆದ್ದರಿಂದ ಅಂತ್ಯವು ಸಮೀಪಿಸಿದೆ ಎಂಬುದು ನಮಗೆ ತಿಳಿದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಕ್ರಿಸ್ತವಿರೋಧಿಗಳು ಅನೇಕರಿದ್ದಾರೆ. ಆದ್ದರಿಂದ ಇದು ಅಂತ್ಯ ಕಾಲವಾಗಿದೆ ಎಂದು ನಾವು ಬಲ್ಲವರಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನನ್ನ ಪ್ರಿಯ ಮಕ್ಕಳೇ, ಅಂತಿಮ ಕಾಲ ಸಮೀಪಿಸಿತು. ಕ್ರಿಸ್ತವಿರೋಧಿ ಬರುವನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳು ತಲೆದೋರಿದ್ದಾರೆ. ಇದರಿಂದ ಅಂತಿಮಕಾಲ ಸನ್ನಿಹಿತವಾಯಿತೆಂದು ನಮಗೆ ತಿಳಿದುಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಮಕ್ಕಳಿರಾ, ಇದು ಕಡೇ ಗಳಿಗೆಯಾಗಿದೆ; ಕ್ರಿಸ್ತವಿರೋಧಿ ಬರುತ್ತಾನೆಂದು ನೀವು ಕೇಳಿದ್ದೀರಷ್ಟೆ; ಈಗಲೂ ಕ್ರಿಸ್ತವಿರೋಧಿಗಳು ಬಹುಮಂದಿ ಎದ್ದಿದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ತಿಳುಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳಿದ್ದಾರೆ. ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಪೊರಾನು, ಅಂತ್ ಜಗ್ಗೊಳ್ ಯೆಲಾ! ಎಕ್ಲೊ ಕ್ರಿಸ್ತಾಚೊ ವೈರಿ ಯೆತಲೊ ಹಾಯ್ ಮನುನ್ ತುಮ್ಕಾ ಸಾಂಗಟಲ್ಲೆ ಹೊತ್ತೆ, ಅನಿ ಅತ್ತಾ ಲೈ ಕ್ರಿಸ್ತಾಚೆ ವಿರೊಧ್ ಕರ್ತಲೆ ಉಟ್ಲಾತ್,ತಸೆಹೊವ್ನ್, ಹ್ಯೊ ಆಕ್ರಿಚೊ ಎಳ್ ಮನ್ತಲೆ ಅಮಿ ಕಳ್ವುನ್ ಘೆವ್ಚೆ. ಅಧ್ಯಾಯವನ್ನು ನೋಡಿ |
ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.