Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:27 - ಪರಿಶುದ್ದ ಬೈಬಲ್‌

27 ಕ್ರಿಸ್ತನು ನಿಮಗೆ ವಿಶೇಷವಾದ ವರವನ್ನು ದಯಪಾಲಿಸಿರುವನು. ಅದು ನಿಮ್ಮಲ್ಲಿ ಇನ್ನೂ ಇದೆ. ಆದ್ದರಿಂದ ನಿಮಗೆ ಯಾವ ಉಪದೇಶಕರ ಅಗತ್ಯವೂ ಇಲ್ಲ. ಆತನು ನಿಮಗೆ ಕೊಟ್ಟಿರುವ ವರವು ನಿಮಗೆ ಎಲ್ಲವನ್ನೂ ಉಪದೇಶಿಸುತ್ತದೆ. ಅದು ನಿಜವಾದುದು, ಸುಳ್ಳಲ್ಲ. ಆದ್ದರಿಂದ ಅದರ ಉಪದೇಶಕ್ಕನುಸಾರವಾಗಿ ನೀವು ಆತನಲ್ಲಿ ನೆಲೆಗೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶ ಮಾಡುವದು ಅವಶ್ಯವಿಲ್ಲ. ಆತನು ಮಾಡಿದ ಅಭಿಷೇಕವು ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥದಾಗಿದ್ದು ಸತ್ಯವಾಗಿದೆ, ಸುಳ್ಳಲ್ಲ. ಅದು ನಿಮಗೆ ಉಪದೇಶ ಮಾಡಿದ ಪ್ರಕಾರ ಆತನಲ್ಲಿ ನೆಲೆಗೊಂಡಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೆ ಕ್ರಿಸ್ತ ಯೇಸುವಿನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುತ್ತದೆ. ಆದುದರಿಂದ ಬೇರೆ ಯಾರೂ ನಿಮಗೆ ಬೋಧಿಸುವ ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಬೋಧಿಸುವುದು. ಆ ಬೋಧನೆಯು ಸುಳ್ಳಲ್ಲ, ಸತ್ಯವಾದದ್ದು. ಆದ್ದರಿಂದ ಅದು ನಿಮಗೆ ಬೋಧಿಸಿದ ಪ್ರಕಾರವೇ, ಕ್ರಿಸ್ತ ಯೇಸುವಿನಲ್ಲಿ ನೀವು ನೆಲೆಗೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಖರೆ ಕ್ರಿಸ್ತಾನ್ ತುಮ್ಚ್ಯಾ ವರ್ತಿ ಅಪ್ನಾಚೊ ಪವಿತ್ರ್ ಆತ್ಮೊ ವೊತ್ಲ್ಯಾನಾಯ್ ತೆಚೊ ಪವಿತ್ರ್ ಆತ್ಮೊ ತುಮ್ಚ್ಯಾ ವಾಂಗ್ಡಾ ರ್‍ಹಾತಾನಾ, ಶಿಕ್ವುತಲ್ಯಾಚಿ ತುಮ್ಕಾ ಗರಜ್ ನಾ, ತೊಚ್ ತುಮ್ಕಾ ಶಿಕ್ವುತಾ ಅನಿ ತೆಚೆ ಶಿಕಾಪ್ ಖರೆ, ಝುಟೆ ನ್ಹಯ್.ತೆನಿ ತುಮ್ಕಾ ಶಿಕ್ವಲ್ಲ್ಯಾ ಸಾರ್ಕೆ ತುಮಿ ಕ್ರಿಸ್ತಾಚ್ಯಾ ವಾಂಗ್ಡಾ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:27
28 ತಿಳಿವುಗಳ ಹೋಲಿಕೆ  

ಆದರೆ ಆ ಸಹಾಯಕನು ನಿಮಗೆ ಪ್ರತಿಯೊಂದನ್ನೂ ಉಪದೇಶಿಸುವನು. ನಾನು ನಿಮಗೆ ಹೇಳಿದ ಸಂಗತಿಗಳನ್ನೆಲ್ಲಾ ಆ ಸಹಾಯಕನು ನಿಮ್ಮ ನೆನಪಿಗೆ ತರುವನು. ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪವಿತ್ರಾತ್ಮನೇ ಆ ಸಹಾಯಕನು.


ನಾವು ಈಸಂಗತಿಗಳನ್ನು ಹೇಳುವಾಗ ಮನುಷ್ಯರ ಜ್ಞಾನದಿಂದ ಕಲಿತುಕೊಂಡಿರುವ ವಾಕ್ಯಗಳನ್ನು ಉಪಯೋಗಿಸದೆ ಆತ್ಮನಿಂದ ಕಲಿತುಕೊಂಡ ವಾಕ್ಯಗಳನ್ನೇ ಉಪಯೋಗಿಸುತ್ತೇವೆ. ಆತ್ಮಿಕ ಸಂಗತಿಗಳನ್ನು ವಿವರಿಸಲು ಆತ್ಮಿಕ ಪದಗಳನ್ನೇ ಬಳಸುತ್ತೇವೆ.


ಆದರೆ ಸತ್ಯದ ಆತ್ಮನು ಬಂದಾಗ, ಆತನು ನಿಮ್ಮನ್ನು ಸಕಲ ವಿಷಯದಲ್ಲಿಯೂ ಸತ್ಯಕ್ಕೆ ನಡೆಸುವನು. ಸತ್ಯದ ಆತ್ಮನು ಹೇಳುವುದು ಆತನ ಸ್ವಂತ ಮಾತುಗಳಲ್ಲ. ತಾನು ಕೇಳಿದ್ದನ್ನು ಮಾತ್ರ ಆತನು ಹೇಳುತ್ತಾನೆ. ಸಂಭವಿಸಲಿರುವ ಸಂಗತಿಗಳನ್ನು ಆತನು ನಿಮಗೆ ತಿಳಿಸುತ್ತಾನೆ.


ನೀವು ದೇವರ ಸಂದೇಶವನ್ನು ಸ್ವೀಕರಿಸಿಕೊಂಡದ್ದಕ್ಕಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನೀವು ಆ ಸಂದೇಶವನ್ನು ನಮ್ಮಿಂದ ಕೇಳಿ, ಅದನ್ನು ದೇವರ ವಾಕ್ಯದಂತೆ ಒಪ್ಪಿಕೊಂಡಿರೇ ಹೊರತು ಮಾನವನ ವಾಕ್ಯಗಳೆಂದಲ್ಲ. ಅದು ನಿಜವಾಗಿಯೂ ದೇವರ ಸಂದೇಶ. ಆ ಸಂದೇಶವು ನಂಬುವವರಾದ ನಿಮ್ಮಲ್ಲಿ ಕಾರ್ಯಮಾಡುತ್ತದೆ.


ನಮ್ಮಲ್ಲಿ ನೆಲೆಗೊಂಡಿರುವ ಸತ್ಯದ ನಿಮಿತ್ತ ನಾವು ನಿಮ್ಮನ್ನು ಪ್ರೀತಿಸುತ್ತೇವೆ. ಈ ಸತ್ಯವು ನಮ್ಮಲ್ಲಿ ಸದಾಕಾಲ ಇರುವುದು.


ದೇವರ ಆಜ್ಞೆಗಳಿಗೆ ವಿಧೇಯನಾಗಿರುವವನು ದೇವರಲ್ಲಿ ನೆಲೆಸಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಸಿರುತ್ತಾನೆ. ದೇವರು ನಮ್ಮಲ್ಲಿ ನೆಲೆಸಿದ್ದಾನೆ ಎಂಬುದು ನಮಗೆ ಹೇಗೆ ತಿಳಿದದೆ? ದೇವರು ನಮಗೆ ದಯಪಾಲಿಸಿರುವ ಪವಿತ್ರಾತ್ಮನಿಂದಲೇ ನಮಗೆ ತಿಳಿದದೆ.


ಹೌದು, ನನ್ನ ಪ್ರಿಯ ಮಕ್ಕಳೇ, ಆತನಲ್ಲಿಯೇ ನೆಲೆಗೊಂಡಿರೋಣ. ನಾವು ಹೀಗೆ ಮಾಡಿದರೆ, ಕ್ರಿಸ್ತನು ಮರಳಿ ಬರುವ ದಿನದಂದು ನಾವು ಭಯಪಡಬೇಕಾಗಿಲ್ಲ; ಅಡಗಿಕೊಳ್ಳುವ ಅಗತ್ಯವಿರುವುದಿಲ್ಲ; ನಾಚಿಕೆಪಡುವ ಅಗತ್ಯವೂ ಇರುವುದಿಲ್ಲ.


ನೀವು ಹೊಸದಾಗಿ ಹುಟ್ಟಿದವರಾಗಿದ್ದೀರಿ. ಈ ಹೊಸಜೀವವು ನಾಶವಾಗುವಂಥದ್ದರಿಂದ ಬರದೆ ನಾಶವಾಗದೆ ಇರುವಂಥದ್ದರಿಂದ ಬಂದದ್ದಾಗಿದೆ. ಸಜೀವವೂ ಶಾಶ್ವತವೂ ಆಗಿರುವ ದೇವರ ವಾಕ್ಯದ ಮೂಲಕ ನೀವು ಹೊಸದಾಗಿ ಹುಟ್ಟಿದ್ದೀರಿ.


ಪ್ರಭುವಾದ ಕ್ರಿಸ್ತ ಯೇಸುವನ್ನು ನೀವು ಸ್ವೀಕರಿಸಿಕೊಂಡಿರುವುದರಿಂದ ಆತನಲ್ಲಿ ನೆಲೆಗೊಂಡಿದ್ದು ಜೀವಿಸಿರಿ.


ಸತ್ಯದ ಆತ್ಮನೇ ಈ ಸಹಾಯಕನು. ಈ ಲೋಕವು ಆತನನ್ನು ಸ್ವೀಕರಿಸಿಕೊಳ್ಳಲಾರದು. ಏಕೆಂದರೆ ಲೋಕವು ಆತನನ್ನು ಕಾಣುವುದೂ ಇಲ್ಲ, ತಿಳಿದುಕೊಳ್ಳುವುದೂ ಇಲ್ಲ. ಆದರೆ ನೀವು ಆತನನ್ನು ಬಲ್ಲಿರಿ. ಆತನು ನಿಮ್ಮೊಂದಿಗೆ ಮತ್ತು ನಿಮ್ಮೊಳಗೆ ವಾಸಿಸುವವನಾಗಿದ್ದಾನೆ.


ನೀವು ಆತನ ವಿಷಯವಾಗಿ ಕೇಳಿದ್ದೀರೆಂಬುದು ನನಗೆ ಗೊತ್ತಿದೆ. ನೀವು ಆತನಲ್ಲಿರುವುದರಿಂದ ಸತ್ಯವನ್ನು ಕಲಿತುಕೊಂಡಿರಿ. ಹೌದು, ಸತ್ಯವು ಯೇಸುವಿನಲ್ಲಿದೆ.


ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.


ಆದ ಕಾರಣವೇ ಸುವಾರ್ತೆಯನ್ನು ಸಾರುವುದಕ್ಕಾಗಿಯೂ ಅಪೊಸ್ತಲನಾಗುವುದಕ್ಕಾಗಿಯೂ ಯೆಹೂದ್ಯರಲ್ಲದ ಜನರಿಗೆ ಬೋಧಿಸುವುದಕ್ಕಾಗಿಯೂ ನನ್ನನ್ನು ಆರಿಸಿಕೊಳ್ಳಲಾಯಿತು. (ಇದು ಸತ್ಯ, ಖಂಡಿತವಾಗಿಯೂ ಸುಳ್ಳಲ್ಲ.) ಸತ್ಯವನ್ನು ತಿಳಿದುಕೊಳ್ಳಬೇಕೆಂತಲೂ ನಂಬಬೇಕೆಂತಲೂ ನಾನು ಅವರಿಗೆ ಬೋಧಿಸುತ್ತೇನೆ.


ಕೆಡುಕರು ನ್ಯಾಯವನ್ನು ಅರ್ಥಮಾಡಿಕೊಳ್ಳಲಾರರು; ಯೆಹೋವನನ್ನು ಪ್ರೀತಿಸುವ ಜನರಾದರೋ ಅದನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವರು.


ಯೇಸು, “ಪರಲೋಕರಾಜ್ಯದ ರಹಸ್ಯವಾದ ಸತ್ಯಗಳನ್ನು ನೀವು ಮಾತ್ರ ತಿಳಿದುಕೊಳ್ಳಬಲ್ಲಿರಿ. ಈ ಸತ್ಯಗಳ ರಹಸ್ಯವು ಬೇರೆ ಜನರಿಗೆ ತಿಳಿಯಲಾರದು.


‘ದೇವರು ಎಲ್ಲಾ ಜನರಿಗೆ ಉಪದೇಶಿಸುವನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಜನರು ತಂದೆಗೆ ಕಿವಿಗೊಟ್ಟು ಆತನಿಂದ ಕಲಿತುಕೊಳ್ಳುವರು. ಆ ಜನರು ನನ್ನ ಬಳಿಗೆ ಬರುವರು.


ನಾನು ತಂದೆಯನ್ನು ಕೇಳಿಕೊಳ್ಳುವೆನು. ಆಗ ಆತನು ಬೇರೊಬ್ಬ ಸಹಾಯಕನನ್ನು ನಿಮಗೆ ಕೊಡುವನು. ಆ ಸಹಾಯಕನು ಸದಾಕಾಲ ನಿಮ್ಮೊಂದಿಗಿರುವನು.


ನಾವು ಹೊಂದಿಕೊಂಡದ್ದು ದೇವರಿಂದ ಬಂದ ಪವಿತ್ರಾತ್ಮನನ್ನೇ ಹೊರತು ಪ್ರಾಪಂಚಿಕವಾದ ಆತ್ಮವನ್ನಲ್ಲ. ದೇವರು ನಮಗೆ ಉಚಿತವಾಗಿ ಕೊಟ್ಟಿರುವಂಥವುಗಳನ್ನು ತಿಳಿದುಕೊಳ್ಳುವುದಕ್ಕಾಗಿ ನಾವು ಆತನನ್ನು ಹೊಂದಿಕೊಂಡೆವು.


ನಿಮ್ಮನ್ನು ಮತ್ತು ನಮ್ಮನ್ನು ಕ್ರಿಸ್ತನಲ್ಲಿ ದೃಢಗೊಳಿಸುವಾತನು ದೇವರೇ. ದೇವರು ತನ್ನ ವಿಶೇಷವಾದ ಆಶೀರ್ವಾದವನ್ನು ನಮಗೆ ಕೊಟ್ಟಿದ್ದಾನೆ.


ಕ್ರಿಸ್ತನಲ್ಲಿ ಸಹೋದರ ಸಹೋದರಿಯರನ್ನು ಹೇಗೆ ಪ್ರೀತಿಸಬೇಕೆಂಬುದರ ಬಗ್ಗೆ ನಾವು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ಒಬ್ಬರನ್ನೊಬ್ಬರು ಹೇಗೆ ಪ್ರೀತಿಸಬೇಕೆಂಬುದನ್ನು ಈಗಾಗಲೇ ದೇವರು ನಿಮಗೆ ಕಲಿಸಿದ್ದಾನೆ.


ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಗಳಲ್ಲಿ ಇವೇ ಆರೋನನಿಗೂ ಅವನ ಪುತ್ರರಿಗೂ ಕೊಡಲ್ಪಟ್ಟ ಭಾಗಗಳಾಗಿವೆ. ಆರೋನನೂ ಅವನ ಪುತ್ರರೂ ಯೆಹೋವನ ಯಾಜಕರಾಗಿ ಸೇವೆ ಮಾಡುವಾಗಲೆಲ್ಲಾ ಯಜ್ಞಗಳಲ್ಲಿ ಆ ಪಾಲನ್ನು ಪಡೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು