12 ನೀವು ಕಾಯಿನನಂತಿರಬೇಡಿ. ಅವನು ಕೆಡುಕನಿಗೆ ಸೇರಿದವನಾಗಿದ್ದನು. ಅವನು ತನ್ನ ತಮ್ಮನನ್ನು (ಹೇಬೆಲ) ಕೊಂದುಹಾಕಿದನು. ಅವನು ತನ್ನ ತಮ್ಮನನ್ನು ಕೊಂದದ್ದೇಕೆ? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ಒಳ್ಳೆಯವುಗಳೂ ಆಗಿದ್ದರಿಂದಲೇ.
12 ಕೆಡುಕುನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಅವನು ಯಾಕೆ ತಮ್ಮನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟದ್ದು ಮತ್ತು ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ.
12 ತನ್ನ ಸಹೋದರನನ್ನೇ ಕೊಂದ ಕಾಯಿನನಂತೆ ನಾವು ಇರಬಾರದು. ಅವನು ಕಡುಕೇಡಿಗನ ಕುವರ. ಅವನು ಕೊಂದುದಾದರೂ ಏಕೆ? ತನ್ನ ಕೃತ್ಯಗಳು ದುಷ್ಟವಾಗಿದ್ದು ತನ್ನ ಸಹೋದರನ ಕೃತ್ಯಗಳು ಧರ್ಮಿಷ್ಠವಾಗಿದ್ದುದರಿಂದ ಅಲ್ಲವೇ?
12 ಕೆಡುಕನಿಂದ ಹುಟ್ಟಿ ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಯಾವ ಕಾರಣದಿಂದ ಅವನನ್ನು ಕೊಂದುಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಗೆ ಸರಿಯಾದವುಗಳೂ ಆಗಿದ್ದದರಿಂದಲೇ.
12 ಕೆಡುಕನಾಗಿದ್ದ ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ಅಲ್ಲ. ಅವನು ಯಾವ ಕಾರಣದಿಂದ ತಮ್ಮನನ್ನು ಕೊಂದುಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ ಅಲ್ಲವೇ?
ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.
ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಲು, ಆಕೆಗೆ ಮತ್ತೊಬ್ಬ ಮಗ ಹುಟ್ಟಿದನು. ಹವ್ವಳು, “ದೇವರು ನನಗೆ ಮತ್ತೊಬ್ಬ ಮಗನನ್ನು ಕೊಟ್ಟನು. ಕಾಯಿನನು ಕೊಂದ ಹೇಬೆಲನಿಗೆ ಬದಲಾಗಿ ದೇವರು ನನಗೆ ಗಂಡುಮಗುವನ್ನು ಕೊಟ್ಟನು” ಎಂದು ಹೇಳಿ ಆ ಮಗುವಿಗೆ ಸೇತ ಎಂದು ಹೆಸರಿಟ್ಟಳು.
ಅವರಿಗೆ ದುರ್ಗತಿಯಾಗುವುದು. ಈ ಜನರು ಕಾಯಿನನ ಮಾರ್ಗವನ್ನು ಅನುಸರಿಸುತ್ತಾರೆ. ಇವರು ದ್ರವ್ಯ ಸಂಪಾದನೆಗಾಗಿ, ಬಿಳಾಮನ ತಪ್ಪುಮಾರ್ಗದಲ್ಲಿ ನಡೆಯಲು ತಮ್ಮನ್ನೇ ಒಪ್ಪಿಸಿಕೊಟ್ಟಿದ್ದಾರೆ. ಕೋರಹನು ಮಾಡಿದಂತೆ ಈ ಜನರೂ ದೇವರ ವಿರುದ್ಧವಾಗಿ ಹೋರಾಡುತ್ತಿದ್ದಾರೆ. ಅವರು ಕೋರಹನಂತೆ ನಾಶವಾಗುತ್ತಾರೆ.
ಹೇಬೆಲನನ್ನು ಕೊಂದದ್ದಕ್ಕಾಗಿಯೂ ಜಕರೀಯನನ್ನು ಕೊಂದದ್ದಕ್ಕಾಗಿಯೂ ನಿಮಗೆ ದಂಡನೆಯಾಗುವುದು. ಜಕರೀಯನನ್ನು ಯಜ್ಞವೇದಿ ಮತ್ತು ದೇವಾಲಯದ ನಡುವೆ ಕೊಲ್ಲಲಾಯಿತು. ಹೌದು, ಅವರೆಲ್ಲರ ಕೊಲೆಗಳಿಗಾಗಿ ಈಗ ಜೀವಿಸುತ್ತಿರುವ ನಿಮಗೆ ದಂಡನೆ ಆಗುವುದು.
“ಆದ್ದರಿಂದ ಭೂಮಿಯ ಮೇಲೆ ಕೊಲ್ಲಲ್ಪಟ್ಟ ಎಲ್ಲಾ ಸತ್ಪುರುಷರ ಕೊಲೆಯ ಅಪರಾಧಕ್ಕೆ ನೀವು ಗುರಿಯಾಗುವಿರಿ. ಸತ್ಪುರುಷನಾದ ಹೇಬೆಲನನ್ನು ಮೊದಲುಗೊಂಡು ಬರಕೀಯನ ಮಗನಾದ ಜಕರೀಯನನ್ನು ಕೊಂದದ್ದಕ್ಕೆ ನೀವು ಅಪರಾಧಿಗಳಾಗುವಿರಿ. ಜಕರೀಯನು ದೇವಾಲಯಕ್ಕೂ ಯಜ್ಞವೇದಿಕೆಗೂ ನಡುವೆ ಕೊಲ್ಲಲ್ಪಟ್ಟನು.
ನೀವು ಅಸಹ್ಯಕರವಾದ ನಿರರ್ಥಕಗೋಷ್ಠಿಗಳನ್ನು ಮಾಡದಿರುವುದನ್ನು ಕಂಡ ಅವಿಶ್ವಾಸಿಗಳು ನಿಮ್ಮ ವಿಷಯದಲ್ಲಿ ಆಶ್ಚರ್ಯಪಡುವರು. ಆದ್ದರಿಂದಲೇ ಅವರು ನಿಮ್ಮ ಬಗ್ಗೆ ಕೆಟ್ಟ ಸಂಗತಿಗಳನ್ನು ಹೇಳುವರು.
ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ.
ಆದರೆ ಯೇಸು ಅವರಿಗೆ, “ನಾನು ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದ್ದೇನೆ. ನೀವು ಆ ಕಾರ್ಯಗಳನ್ನು ನೋಡಿದ್ದೀರಿ. ಆ ಒಳ್ಳೆಯ ಕಾರ್ಯಗಳಲ್ಲಿ ಯಾವುದರ ನಿಮಿತ್ತ ನೀವು ನನ್ನನ್ನು ಕೊಲ್ಲಬೇಕೆಂದಿದ್ದೀರಿ?” ಎಂದು ಹೇಳಿದನು.
“ಮಗ್ಗುಲಲ್ಲಿ ಬಿದ್ದ ಬೀಜ ಅಂದರೇನು? ಪರಲೋಕರಾಜ್ಯವನ್ನು ಕುರಿತು ಬೋಧಿಸಿದ್ದನ್ನು ಕೇಳಿ ಅದನ್ನು ಅರ್ಥಮಾಡಿಕೊಳ್ಳದೆ ಇರುವ ಮನುಷ್ಯನೇ ಬೀಜ ಬಿದ್ದ ದಾರಿ ಮಗ್ಗುಲಾಗಿರುವನು. ಕೆಡುಕನು (ಸೈತಾನನು) ಬಂದು ಆ ಮನುಷ್ಯನ ಹೃದಯದಲ್ಲಿ ಬಿತ್ತಿದ್ದ ಬೀಜಗಳನ್ನು ತೆಗೆದುಹಾಕುತ್ತಾನೆ.
ಆ ಸ್ತ್ರೀಯು ಕುಡಿದು ಮತ್ತಳಾಗಿರುವುದನ್ನು ನಾನು ನೋಡಿದೆನು. ಅವಳು ದೇವರ ಪರಿಶುದ್ಧ ಜನರ ರಕ್ತವನ್ನು ಕುಡಿದು ಮತ್ತಳಾಗಿದ್ದಳು. ಯೇಸುವಿನಲ್ಲಿ ತಮಗಿರುವ ನಂಬಿಕೆಯ ಕುರಿತಾಗಿ ತಿಳಿಸಿದ ಜನರ ರಕ್ತವನ್ನು ಅವಳು ಕುಡಿದು ಮತ್ತಳಾಗಿದ್ದಳು. ಆ ಸ್ತ್ರೀಯನ್ನು ನಾನು ನೋಡಿದಾಗ ನನಗೆ ತುಂಬಾ ಆಶ್ಚರ್ಯವಾಯಿತು.
ಸಹೋದರ ಸಹೋದರಿಯರೇ, ನೀವು ಜುದೇಯದಲ್ಲಿರುವ ದೇವರ ಸಭೆಗಳಂತಿದ್ದೀರಿ. ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಅವರು ಇತರ ಯೆಹೂದ್ಯರಿಂದ ಹಿಂಸಿಸಲ್ಪಟ್ಟರು. ಅದೇ ರೀತಿಯಲ್ಲಿ ನೀವೂ ನಿಮ್ಮ ದೇಶದ ಇತರ ಜನರಿಂದ ಹಿಂಸಿಸಲ್ಪಟ್ಟವರಾಗಿದ್ದೀರಿ.
ಆದ್ದರಿಂದ ನಿಮ್ಮ ಸ್ವಂತ ತಂದೆ ಮಾಡಿದ್ದನ್ನೇ ನೀವು ಮಾಡುತ್ತಿದ್ದೀರಿ” ಎಂದು ಹೇಳಿದನು. ಆದರೆ ಯೆಹೂದ್ಯರು, “ನಾವು ಹಾದರಕ್ಕೆ ಹುಟ್ಟಿದವರಲ್ಲ. ದೇವರೇ ನಮ್ಮ ತಂದೆ. ನಮಗಿರುವ ತಂದೆ ಆತನೊಬ್ಬನೇ” ಎಂದು ಹೇಳಿದರು.