1 ಯೋಹಾನನು 3:3 - ಪರಿಶುದ್ದ ಬೈಬಲ್3 ಕ್ರಿಸ್ತನಲ್ಲಿ ಈ ನಿರೀಕ್ಷೆಯನ್ನು ಹೊಂದಿರುವ ಪ್ರತಿಯೊಬ್ಬನೂ ಕ್ರಿಸ್ತನು ಶುದ್ಧನಾಗಿರುವಂತೆ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕ್ರಿಸ್ತಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯಾಕಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು. ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಕ್ರಿಸ್ತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಕ್ರಿಸ್ತ ಯೇಸುವಿನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಕ್ರಿಸ್ತಾಚ್ಯಾ ವರ್ತಿ ಬರೊಸೊ ಥವ್ನ್ ಹೊತ್ತೊ, ಹರ್ ಎಕ್ಲೊಬಿ ಕಸೊ ದೆವ್ ನಿತಳ್ ಹೊವ್ನ್ ಹಾಯ್ ತಸೊಚ್ ಅಪ್ನಿಬಿ ನಿತಳ್ ಹೊವ್ನ್ ರ್‍ಹಾವ್ಚೆ. ಅಧ್ಯಾಯವನ್ನು ನೋಡಿ |
ನಿಮಗೆ ನಿರೀಕ್ಷೆ ಇರುವುದರಿಂದಲೇ ಕ್ರಿಸ್ತನಲ್ಲಿ ನಂಬಿಕೆ ಇಟ್ಟಿದ್ದೀರಿ ಮತ್ತು ದೇವಜನರನ್ನು ಪ್ರೀತಿಸುತ್ತೀರಿ. ನೀವು ನಿರೀಕ್ಷಿಸುವಂಥವುಗಳು ನಿಮಗೋಸ್ಕರ ಪರಲೋಕದಲ್ಲಿ ಸಿದ್ಧ ಮಾಡಲ್ಪಟ್ಟಿವೆ ಎಂಬುದು ನಿಮಗೆ ತಿಳಿದಿದೆ. ನಿಮಗೆ ತಿಳಿಸಲಾದ ಸತ್ಯವಾಕ್ಯವನ್ನು ಅಂದರೆ ಸುವಾರ್ತೆಯನ್ನು ನೀವು ಕೇಳಿದಾಗ ಈ ನಿರೀಕ್ಷೆಯ ಬಗ್ಗೆ ತಿಳಿದುಕೊಂಡಿರಿ. ನೀವು ಸುವಾರ್ತೆಯನ್ನು ಕೇಳಿ ದೇವರ ಕೃಪೆಯ ಸತ್ಯಾರ್ಥವನ್ನು ತಿಳಿದುಕೊಂಡಂದಿನಿಂದ ಸುವಾರ್ತೆಯು ನಿಮ್ಮಲ್ಲಿ ವೃದ್ಧಿಯಾಗುತ್ತಿದೆ ಮತ್ತು ಜನರಿಗೆ ಆಶೀರ್ವಾದಕರವಾಗಿದೆ. ಅದೇ ರೀತಿ ಪ್ರಪಂಚದ ಎಲ್ಲಾ ಕಡೆಗಳಲ್ಲೂ ಸುವಾರ್ತೆಯು ವೃದ್ಧಿಯಾಗುತ್ತಿದೆ ಮತ್ತು ಆಶೀರ್ವಾದಕರವಾಗಿದೆ.