1 ಯೋಹಾನನು 3:4 - ಪರಿಶುದ್ದ ಬೈಬಲ್4 ಪಾಪ ಮಾಡುವವನು ದೇವರ ಕಟ್ಟಳೆಗಳನ್ನು ಉಲ್ಲಂಘಿಸುವವನಾಗಿದ್ದಾನೆ. ಹೌದು, ಪಾಪಮಾಡುವುದಕ್ಕೂ ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ಜೀವಿಸುವುದಕ್ಕೂ ಯಾವ ವ್ಯತ್ಯಾಸವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಪಾಪಮಾಡುವ ಪ್ರತಿಯೊಬ್ಬನೂ ಅಧರ್ಮವನ್ನು ಮಾಡುವವನಾಗಿದ್ದಾನೆ; ಪಾಪವು ಅಧರ್ಮವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಪಾಪಮಾಡುವ ಪ್ರತಿಯೊಬ್ಬನೂ ದೇವರ ಆಜ್ಞೆಯನ್ನು ಮೀರುತ್ತಾನೆ. ದೇವರ ಆಜ್ಞೆಯನ್ನು ಉಲ್ಲಂಘಿಸುವುದೇ ಪಾಪ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಪಾಪಮಾಡುವ ಪ್ರತಿಯೊಬ್ಬನು ಅಧರ್ಮವನ್ನು ಮಾಡುವವನಾಗಿದ್ದಾನೆ; ಪಾಪವು ಅಧರ್ಮವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಪಾಪಮಾಡುವ ಪ್ರತಿಯೊಬ್ಬನೂ ನಿಯಮವನ್ನು ಮೀರುವವನಾಗಿದ್ದಾನೆ. ನಿಯಮವನ್ನು ಮೀರುವುದೇ ಪಾಪ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಜೊ ಕೊನ್ ಪಾಪ್ ಕರ್ತಾ ತೊ ದೆವಾಚೊ ಖಾಯ್ದೊ ಮೊಡ್ತಾ, ಕಶ್ಯಾಕ್ ಮಟ್ಲ್ಯಾರ್, ಖಾಯ್ದೊ ಮೊಡ್ತಲೆಚ್ ಪಾಪ್. ಅಧ್ಯಾಯವನ್ನು ನೋಡಿ |
ನಾನು ನಿಮ್ಮ ಬಳಿಗೆ ಮತ್ತೆ ಬಂದಾಗ ನನ್ನ ದೇವರು ನನ್ನನ್ನು ನಿಮ್ಮ ಮುಂದೆ ದೀನನನ್ನಾಗಿ ಮಾಡಬಹುದೆಂಬ ಭಯವಿದೆ. ನಿಮ್ಮಲ್ಲಿ ಪಾಪಕ್ಕೆ ಒಳಗಾಗಿರುವ ಅನೇಕರಿಂದ ನಾನು ದುಃಖಿತನಾಗಬಹುದು. ಏಕೆಂದರೆ, ಆ ಜನರು ತಮ್ಮ ದುಷ್ಟಜೀವಿತದ ಬಗ್ಗೆ, ತಮ್ಮ ಲೈಂಗಿಕ ಪಾಪಗಳ ಬಗ್ಗೆ ಮತ್ತು ನಾಚಿಕೆಕರವಾದ ಕಾರ್ಯಗಳ ಬಗ್ಗೆ ದುಃಖಪಟ್ಟಿಲ್ಲ ಮತ್ತು ತಮ್ಮ ಹೃದಯಗಳನ್ನು ಮಾರ್ಪಾಟು ಮಾಡಿಕೊಂಡಿಲ್ಲ.
ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಆ ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಆ ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.
“ಮನುಷ್ಯನು ಪ್ರತಿ ಆಜ್ಞೆಗೂ, ಅಂದರೆ ಸಣ್ಣಸಣ್ಣ ಆಜ್ಞೆಗೂ ವಿಧೇಯನಾಗಿರಬೇಕು. ಒಬ್ಬನು ಯಾವ ಆಜ್ಞೆಗಾದರೂ ಅವಿಧೇಯನಾಗಿ ಜೀವಿಸುತ್ತಾ ಆ ಆಜ್ಞೆಗೆ ಬೇರೆಯವರೂ ಅವಿಧೇಯರಾಗಿರಬೇಕೆಂದು ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅತ್ಯಲ್ಪನಾಗಿರುವನು. ಆದರೆ ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ಜೀವಿಸುತ್ತಾ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ಬೇರೆಯವರಿಗೂ ಬೋಧಿಸುವವನು ಪರಲೋಕರಾಜ್ಯದಲ್ಲಿ ಪ್ರಮುಖನಾಗಿರುವನು.