Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:5 - ಪರಿಶುದ್ದ ಬೈಬಲ್‌

5 ಕ್ರಿಸ್ತನು ಜನರ ಪಾಪಗಳನ್ನು ಹೋಗಲಾಡಿಸಲು ಬಂದನೆಂಬುದು ನಿಮಗೆ ತಿಳಿದಿದೆ. ಆತನಲ್ಲಿ ಪಾಪವೆಂಬುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಪಾಪರಹಿತರಾದ ಕ್ರಿಸ್ತಯೇಸು ಪಾಪಪರಿಹಾರ ಮಾಡಲೆಂದೇ ಕಾಣಿಸಿಕೊಂಡರೆಂದು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಪಾಪಗಳನ್ನು ಹೋಗಲಾಡಿಸುವದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾದರೆಂಬುದು ನಿಮಗೆ ಗೊತ್ತಾಗಿದೆ. ಕ್ರಿಸ್ತ ಯೇಸುವಿನಲ್ಲಿ ಪಾಪವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಪಾಪ್ ಕಾಡುನ್ ಟಾಕುಚೆ ಮನುನ್ ಕ್ರಿಸ್ತ್ ಯೆಲೊ ಮನ್ತಲೆ ತುಮ್ಕಾ ಗೊತ್ತ್ ಹಾಯ್, ತೆಚ್ಯಾಕ್ಡೆ ಕಸ್ಲೊಬಿ ಪಾಪ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:5
33 ತಿಳಿವುಗಳ ಹೋಲಿಕೆ  

ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ಅದರಂತೆಯೇ ಕ್ರಿಸ್ತನು ಅನೇಕ ಜನರ ಪಾಪಗಳನ್ನು ತೆಗೆದುಹಾಕಲು ಒಂದು ಸಲ ಮಾತ್ರ ತನ್ನನ್ನು ಯಜ್ಞವನ್ನಾಗಿ ಅರ್ಪಿಸಿಕೊಂಡನು. ಕ್ರಿಸ್ತನು ಎರಡನೆ ಸಲ ಪ್ರತ್ಯಕ್ಷನಾಗುವುದು ಜನರ ಪಾಪನಿವಾರಣೆಗೋಸ್ಕರವಲ್ಲ. ತನಗಾಗಿ ಕಾಯುತ್ತಿರುವ ಜನರನ್ನು ಬಿಡುಗಡೆ ಮಾಡುವುದಕ್ಕಾಗಿಯಷ್ಟೇ.


ನಿಮ್ಮ ಪಾಪಗಳಿಗಾಗಿ ಕ್ರಿಸ್ತನು ಒಂದೇಸಾರಿ ಬಾಧೆ ಅನುಭವಿಸಿ ಸತ್ತನು. ನೀತಿವಂತನಾಗಿದ್ದ ಆತನು ಅಪರಾಧಿಗಳಿಗಾಗಿ ಪ್ರಾಣಕೊಟ್ಟನು. ನಿಮ್ಮೆಲ್ಲರನ್ನು ದೇವರ ಬಳಿಗೆ ನಡೆಸುವುದಕ್ಕಾಗಿ ಆತನು ಹೀಗೆ ಮಾಡಿದನು. ಆತನ ದೇಹವು ಕೊಲ್ಲಲ್ಪಟ್ಟಿತು, ಆದರೆ ಆತನು ಆತ್ಮಸಂಬಂಧದಲ್ಲಿ ಮತ್ತೆ ಜೀವಂತನಾದನು.


ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಕ್ರಿಸ್ತನು ಅನೇಕ ಸಲ ತನ್ನನ್ನು ಅರ್ಪಿಸಿಕೊಂಡಿದ್ದರೆ, ಈ ಲೋಕವು ಸೃಷ್ಟಿಯಾದಂದಿನಿಂದ ಆತನು ಅನೇಕ ಸಲ ಸಂಕಟವನ್ನು ಅನಭವಿಸ ಬೇಕಾಗುತ್ತಿತ್ತು. ಆದರೆ ಕ್ರಿಸ್ತನು ಯುಗಾಂತ್ಯದಲ್ಲಿ ಪಾಪನಿವಾರಣೆ ಮಾಡುವುದಕ್ಕಾಗಿ ಬಂದು ಒಂದೇ ಸಲ ತನ್ನನ್ನು ಅರ್ಪಿಸಿಕೊಂಡನು.


ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.


ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು;


ದೇವರು ಬೆಳಕಿನಲ್ಲಿದ್ದಾನೆ. ಆದ್ದರಿಂದ ನಾವೂ ಬೆಳಕಿನಲ್ಲಿ ಜೀವಿಸಬೇಕಾಗಿದೆ. ನಾವು ಬೆಳಕಿನಲ್ಲಿ ಜೀವಿಸುವವರಾಗಿದ್ದರೆ ಪರಸ್ಪರ ಅನ್ಯೋನ್ಯತೆಯಲ್ಲಿದ್ದೇವೆ ಮತ್ತು ದೇವರ ಮಗನಾದ ಯೇಸುವಿನ ರಕ್ತವು ನಮ್ಮ ಪಾಪಗಳನ್ನೆಲ್ಲಾ ನಿವಾರಣೆ ಮಾಡುತ್ತದೆ.


ಆ ಜೀವವು ನಮಗೆ ಪ್ರತ್ಯಕ್ಷವಾಯಿತು. ನಾವು ಅದನ್ನು ನೋಡಿದ್ದರಿಂದ ಅದರ ಬಗ್ಗೆ ಸಾಕ್ಷಿ ಹೇಳ ಬಲ್ಲೆವು. ನಾವೀಗ ನಿಮಗೆ ಆ ಜೀವದ ಬಗ್ಗೆ ಸಾಕ್ಷಿ ಹೇಳುತ್ತೇವೆ. ಅದು ತಂದೆಯಾದ ದೇವರ ಸಂಗಡವಿದ್ದ ನಿತ್ಯವಾದ ಜೀವ. ದೇವರು ಈ ಜೀವವನ್ನು ನಮಗೆ ತೋರಿಸಿದನು.


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


“ಆತನು (ಕ್ರಿಸ್ತನು) ಪಾಪವನ್ನು ಮಾಡಲಿಲ್ಲ. ಆತನ ಬಾಯಿಂದ ಯಾವ ಸುಳ್ಳು ಮಾತೂ ಬರಲಿಲ್ಲ.”


ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ನಾನು ಹೇಳುತ್ತಿರುವ ಈ ಸಂಗತಿ ಸತ್ಯವಾದದ್ದು. ಆದ್ದರಿಂದ ನೀವು ಅದನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳಬೇಕು. ಅದೇನೆಂದರೆ: ಪಾಪಿಗಳನ್ನು ರಕ್ಷಿಸುವುದಕ್ಕೆ ಕ್ರಿಸ್ತ ಯೇಸು ಈ ಲೋಕದಲ್ಲಿ ಪ್ರತ್ಯಕ್ಷನಾದನು. ಆ ಪಾಪಿಗಳಲ್ಲಿ ನಾನೇ ಮುಖ್ಯನು.


ಆಕೆ ಒಬ್ಬ ಮಗನನ್ನು ಹೆರುವಳು. ನೀನು ಆ ಮಗುವಿಗೆ ಯೇಸು ಎಂದು ಹೆಸರಿಡುವೆ. ನೀನು ಆತನಿಗೆ ಆ ಹೆಸರನ್ನೇ ಇಡು; ಏಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು” ಎಂದು ಹೇಳಿದನು.


ನನ್ನ ಪ್ರಿಯ ಮಕ್ಕಳೇ, ನೀವು ಪಾಪಗಳನ್ನು ಮಾಡದಿರಲೆಂದು ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಆದರೆ ಯಾರಾದರೂ ಪಾಪವನ್ನು ಮಾಡಿದರೆ ನಮಗೆ ಸಹಾಯ ಮಾಡಲು ಯೇಸು ಕ್ರಿಸ್ತನಿದ್ದಾನೆ. ನೀತಿವಂತನಾಗಿರುವ ಆತನು ತಂದೆಯಾದ ದೇವರ ಬಳಿಯಲ್ಲಿದ್ದಾನೆ.


ಈ ಲೋಕವು ಸೃಷ್ಟಿಯಾಗುವುದಕ್ಕೆ ಮೊದಲೇ ಕ್ರಿಸ್ತನು ಆರಿಸಲ್ಪಟ್ಟನು. ಆದರೆ ಆತನು ನಿಮಗೋಸ್ಕರ ಈ ಅಂತ್ಯಕಾಲದಲ್ಲಿ ಪ್ರತ್ಯಕ್ಷನಾದನು.


ನಮ್ಮ ಪ್ರಧಾನ ಯಾಜಕನಾಗಿರುವ ಯೇಸು ನಮ್ಮ ದೌರ್ಬಲ್ಯವನ್ನು ಅರ್ಥಮಾಡಿಕೊಳ್ಳಲು ಸಮರ್ಥನಾಗಿದ್ದಾನೆ. ಆತನು ಈ ಲೋಕದಲ್ಲಿ ಜೀವಿಸಿದ್ದಾಗ, ಸರ್ವವಿಷಯಗಳಲ್ಲಿ ನಮ್ಮಂತೆಯೇ ಶೋಧನೆಗೆ ಗುರಿಯಾದರೂ ಪಾಪಮಾಡಲಿಲ್ಲ.


ಯೇಸುವೇ ನಮಗೆ ಬೇಕಾಗಿದ್ದ ಪ್ರಧಾನ ಯಾಜಕನು. ಆತನು ಪಾಪರಹಿತನೂ ಪರಿಶುದ್ಧನೂ ನಿಷ್ಕಳಂಕನೂ ಪಾಪಿಗಳ ಪ್ರಭಾವಕ್ಕೆ ಒಳಗಾಗದವನೂ ಆಕಾಶಮಂಡಲಕ್ಕಿಂತ ಉನ್ನತನೂ ಆಗಿದ್ದಾನೆ.


ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


“ನಾನು ನಿಮ್ಮೊಂದಿಗೆ ಇನ್ನು ಬಹಳ ಹೊತ್ತು ಮಾತಾಡುವುದಿಲ್ಲ. ಈ ಲೋಕದ ಅಧಿಪತಿಯು (ಸೈತಾನನು) ಬರುತ್ತಿದ್ದಾನೆ. ಅವನಿಗೆ ನನ್ನ ಮೇಲೆ ಯಾವ ಅಧಿಕಾರವೂ ಇಲ್ಲ.


ನನ್ನಲ್ಲಿ ಪಾಪವನ್ನು ತೋರಿಸಿಕೊಡುವವನು ನಿಮ್ಮಲ್ಲಿ ಯಾವನಾದರೂ ಇರುವನೇ? ನಾನು ಸತ್ಯವನ್ನು ಹೇಳಿದರೂ ನೀವೇಕೆ ನಂಬುವುದಿಲ್ಲ?


ಆತನು ಯಾರೆಂಬುದು ನನಗೂ ಗೊತ್ತಿರಲಿಲ್ಲ. ಆದರೆ ಆತನನ್ನು ಇಸ್ರೇಲರಿಗೆ ತಿಳಿಸುವುದಕ್ಕೋಸ್ಕರ ನಾನು ಜನರಿಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೆನು” ಎಂದು ಹೇಳಿದನು.


ಅಲ್ಲಿದ್ದ ಶತಾಧಿಪತಿ ನಡೆದದ್ದನ್ನು ನೋಡಿ, “ಈ ಮನುಷ್ಯನು ಒಳ್ಳೆಯವನೆಂದು ನನಗೆ ಗೊತ್ತಿತ್ತು” ಎಂದು ಹೇಳಿ ದೇವರನ್ನು ಸ್ತುತಿಸಿದನು.


ನೀನೂ ನಾನೂ ಅಪರಾಧಿಗಳಾಗಿದ್ದೇವೆ. ನಾವು ತಪ್ಪು ಮಾಡಿದ್ದರಿಂದ ಶಿಕ್ಷಿಸಲ್ಪಡಬೇಕು. ಆದರೆ ಈ ಮನುಷ್ಯನು (ಯೇಸು) ಯಾವ ತಪ್ಪನ್ನೂ ಮಾಡಲಿಲ್ಲ!” ಎಂದು ಹೇಳಿದನು.


ನೀನು ಹೇಳಬೇಕಾದ ವಿಷಯಗಳ ಕುರಿತು ನೀನು ಆಲೋಚಿಸು ಮತ್ತು ಯೆಹೋವನ ಬಳಿಗೆ ಹಿಂದಿರುಗಿ ಬಾ ಮತ್ತು ಆತನಿಗೆ ಹೀಗೆ ಹೇಳು: “ನಮ್ಮ ಪಾಪಗಳನ್ನು ನಮ್ಮಿಂದ ತೆಗೆ. ನಾವು ಮಾಡುವ ಒಳ್ಳೆಯ ಕಾರ್ಯಗಳನ್ನು ಸ್ವೀಕರಿಸು. ಆಗ ನಮ್ಮ ತುಟಿಗಳಿಂದ ನಿನಗೆ ಸ್ತೋತ್ರವೆಂಬ ಕಾಣಿಕೆಯನ್ನು ಸಮರ್ಪಿಸುವೆವು.


ಮೊದಲು ನೀವು ನಿರರ್ಥಕವಾದ ರೀತಿಯಲ್ಲಿ ಜೀವಿಸುತ್ತಿದ್ದಿರೆಂಬುದು ನಿಮಗೇ ತಿಳಿದಿದೆ. ನಿಮಗಿಂತಲೂ ಮೊದಲು ಜೀವಿಸಿದ್ದವರಿಂದ ಅಂತಹ ಜೀವಿತವನ್ನು ಕಲಿತುಕೊಂಡಿರಿ. ಆದರೆ ಅದರಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿಬಂಗಾರಗಳಿಂದಲ್ಲ.


ನಮ್ಮ ಪಾಪಗಳ ನಿವಾರಣೆಗೂ ಎಲ್ಲಾ ಜನರ ಪಾಪಗಳ ನಿವಾರಣೆಗೂ ಯೇಸುವೇ ಮಾರ್ಗವಾಗಿದ್ದಾನೆ.


ಕ್ರಿಸ್ತನು ನೀತಿವಂತನೆಂಬುದು ನಿಮಗೆ ತಿಳಿದಿದೆ. ಆದ್ದರಿಂದ ಯೋಗ್ಯವಾದುದನ್ನು ಮಾಡುವ ಜನರೆಲ್ಲರೂ ದೇವರ ಮಕ್ಕಳೆಂಬುದು ನಿಮಗೆ ತಿಳಿದಿದೆ.


ಸೈತಾನನು ಆರಂಭದಿಂದಲೂ ಪಾಪಗಳನ್ನು ಮಾಡುತ್ತಿದ್ದಾನೆ. ಪಾಪಗಳನ್ನು ಮಾಡುತ್ತಲೇ ಇರುವವನು ಸೈತಾನನಿಗೆ ಸೇರಿದವನಾಗಿದ್ದಾನೆ. ದೇವರ ಮಗನಾದ ಕ್ರಿಸ್ತನು ಸೈತಾನನ ಕಾರ್ಯವನ್ನು ನಾಶಪಡಿಸುವುದಕ್ಕಾಗಿಯೇ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು