1 ಯೋಹಾನನು 3:8 - ಪರಿಶುದ್ದ ಬೈಬಲ್8 ಸೈತಾನನು ಆರಂಭದಿಂದಲೂ ಪಾಪಗಳನ್ನು ಮಾಡುತ್ತಿದ್ದಾನೆ. ಪಾಪಗಳನ್ನು ಮಾಡುತ್ತಲೇ ಇರುವವನು ಸೈತಾನನಿಗೆ ಸೇರಿದವನಾಗಿದ್ದಾನೆ. ದೇವರ ಮಗನಾದ ಕ್ರಿಸ್ತನು ಸೈತಾನನ ಕಾರ್ಯವನ್ನು ನಾಶಪಡಿಸುವುದಕ್ಕಾಗಿಯೇ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಪಾಪಮಾಡುವವನು ಸೈತಾನನ ಸಂತಾನದವನು. ಸೈತಾನನು ಆದಿಯಿಂದಲೂ ಪಾಪಮಾಡಿದವನೇ. ಅವನ ದುಷ್ಕೃತ್ಯಗಳನ್ನು ವಿನಾಶಗೊಳಿಸಲೆಂದೇ ದೇವರ ಪುತ್ರ ಕಾಣಿಸಿಕೊಂಡಿದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪಾಪಮಾಡುವವನು ಸೈತಾನನಿಂದ ಹುಟ್ಟಿದವನಾಗಿದ್ದಾನೆ; ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನಲ್ಲಾ. ಸೈತಾನನ ಕೆಲಸಗಳನ್ನು ಲಯ ಮಾಡುವದಕ್ಕೋಸ್ಕರವೇ ದೇವಕುಮಾರನು ಪ್ರತ್ಯಕ್ಷನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಪಾಪದಲ್ಲಿ ಮುಂದುವರೆಯುವವರು ಸೈತಾನನಿಗೆ ಸೇರಿದವರು. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ದೇವಪುತ್ರ ಯೇಸು ಸೈತಾನನ ಕೆಲಸಗಳನ್ನು ಲಯ ಮಾಡುವುದಕ್ಕೋಸ್ಕರವೇ ಪ್ರತ್ಯಕ್ಷರಾದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಜೆ ಕೊನ್ ಪಾಪ್ ಕರ್ತಾ, ತೊ ಸೈತಾನಾಕ್ ಸಮಂದ್ ಪಡಲ್ಲೊ, ಕಶ್ಯಾಕ್ ಮಟ್ಲ್ಯಾರ್ ಅದ್ದಿಚ್ಯಾನುಚ್ ಸೈತಾನ್ ಪಾಪ್ ಕರಿತ್ ಹಾಯ್, ತನ್ನಾ ಸೈತಾನಾಚಿ ಕಾಮಾ ನಾಸ್ ಕರುಕ್ ಮನುನ್ ದೆವಾಚೊ ಲೆಕ್ ಯೆಲೊ. ಅಧ್ಯಾಯವನ್ನು ನೋಡಿ |
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.