Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:10 - ಪರಿಶುದ್ದ ಬೈಬಲ್‌

10 ದೇವರಿಗೆ ನಮ್ಮ ಮೇಲಿರುವ ಪ್ರೀತಿಯೇ ನಿಜವಾದ ಪ್ರೀತಿ. ನಮಗೆ ದೇವರ ಮೇಲಿರುವ ಪ್ರೀತಿ ನಿಜವಾದ ಪ್ರೀತಿಯಲ್ಲ. ನಮ್ಮ ಪಾಪ ನಿವಾರಣೆಗಾಗಿ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ಅವರು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತಮ್ಮ ಪುತ್ರನನ್ನು ಕಳುಹಿಸಿದ್ದರಲ್ಲಿಯೇ ಪ್ರೀತಿಯ ನಿಜಗುಣ ತೋರಿಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾವು ದೇವರನ್ನು ಪ್ರೀತಿಸಿದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟದರಲ್ಲಿಯೇ ಪ್ರೀತಿಯ ನಿಜ ಗುಣವು ತೋರಿ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಪ್ರೀತಿಯು ಇದಾಗಿರುತ್ತದೆ: ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ದೇವರೇ ನಮ್ಮನ್ನು ಪ್ರೀತಿಸಿ, ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿ ಕೊಟ್ಟಿದ್ದರಲ್ಲಿಯೇ ಅವರ ಸತ್ಯ ಪ್ರೀತಿಯು ತೋರಿಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಮಿ ದೆವಾಚೊ ಪ್ರೆಮ್ ಕರುಕ್ನಾವ್, ಜಾಲ್ಯಾರ್ಬಿ ತೆನಿ ಅಮ್ಕಾ ಪ್ರೆಮ್ ಕರುನ್ ಅಮ್ಚ್ಯಾ ಪಾಪಾಚೆ ಪರಿಹಾರ್ ಹೊವ್ನ್ ಅಪ್ನಾಚ್ಯಾ ಲೆಕಾಕ್ ಬಲಿ ಕರುನ್ ದಿಲ್ಲ್ಯಾತ್. ತೆಚೊ ಖರೊ ಪ್ರೆಮ್ ಅಮ್ಕಾ ದಿಸುನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:10
20 ತಿಳಿವುಗಳ ಹೋಲಿಕೆ  

ನಮ್ಮ ಪಾಪಗಳ ನಿವಾರಣೆಗೂ ಎಲ್ಲಾ ಜನರ ಪಾಪಗಳ ನಿವಾರಣೆಗೂ ಯೇಸುವೇ ಮಾರ್ಗವಾಗಿದ್ದಾನೆ.


ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.


“ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ; ನಾನು ನಿಮ್ಮನ್ನು ಆರಿಸಿಕೊಂಡೆನು. ನೀವು ಹೊರಟುಹೋಗಿ ಫಲಕೊಡಬೇಕು. ಇದೇ ನಾನು ನಿಮಗೆ ಕೊಟ್ಟಿರುವ ಕೆಲಸ. ಈ ಫಲವು ನಿಮ್ಮ ಜೀವನದಲ್ಲಿ ಶಾಶ್ವತವಾಗಿರಲಿ ಎಂಬುದೇ ನನ್ನ ಬಯಕೆ. ಹೀಗಿರಲಾಗಿ, ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.


ಹೌದು, ದೇವರು ಲೋಕವನ್ನು ಎಷ್ಟೋ ಪ್ರೀತಿಸಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಹೊಂದಬೇಕೆಂದು ಆತನನ್ನು ಕೊಟ್ಟನು.


ತಂದೆಯು ನಮ್ಮನ್ನು ಬಹಳವಾಗಿ ಪ್ರೀತಿಸಿದನು! ದೇವರ ಮಕ್ಕಳು ಎಂಬ ಹೆಸರನ್ನು ನಮಗೆ ಕೊಡುವಷ್ಟರ ಮಟ್ಟಿಗೆ ದೇವರು ನಮ್ಮನ್ನು ಪ್ರೀತಿಸಿದನು. ನಾವು ನಿಜವಾಗಿಯೂ ದೇವರ ಮಕ್ಕಳಾಗಿದ್ದೇವೆ. ಆದರೆ ಲೋಕದಲ್ಲಿರುವ ಜನರಾದರೋ ನಾವು ದೇವರ ಮಕ್ಕಳೆಂಬುದನ್ನು ಅರ್ಥ ಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವರು ದೇವರನ್ನು ತಿಳಿದಿಲ್ಲ.


ನಿಮ್ಮ ಪಾಪಗಳಿಗಾಗಿ ಕ್ರಿಸ್ತನು ಒಂದೇಸಾರಿ ಬಾಧೆ ಅನುಭವಿಸಿ ಸತ್ತನು. ನೀತಿವಂತನಾಗಿದ್ದ ಆತನು ಅಪರಾಧಿಗಳಿಗಾಗಿ ಪ್ರಾಣಕೊಟ್ಟನು. ನಿಮ್ಮೆಲ್ಲರನ್ನು ದೇವರ ಬಳಿಗೆ ನಡೆಸುವುದಕ್ಕಾಗಿ ಆತನು ಹೀಗೆ ಮಾಡಿದನು. ಆತನ ದೇಹವು ಕೊಲ್ಲಲ್ಪಟ್ಟಿತು, ಆದರೆ ಆತನು ಆತ್ಮಸಂಬಂಧದಲ್ಲಿ ಮತ್ತೆ ಜೀವಂತನಾದನು.


ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.


ಪರಲೋಕದಿಂದ ಇಳಿದುಬಂದ ಜೀವವುಳ್ಳ ರೊಟ್ಟಿ ನಾನೇ. ಈ ರೊಟ್ಟಿಯನ್ನು ತಿನ್ನುವವನು ಶಾಶ್ವತವಾಗಿ ಜೀವಿಸುವನು. ಈ ರೊಟ್ಟಿಯೇ ನನ್ನ ದೇಹ. ಈ ಲೋಕದಲ್ಲಿರುವ ಜನರು ಜೀವವನ್ನು ಹೊಂದಿಕೊಳ್ಳಲೆಂದು ನಾನು ನನ್ನ ದೇಹವನ್ನೇ ಕೊಡುತ್ತೇನೆ” ಎಂದು ಉತ್ತರಕೊಟ್ಟನು.


“ನಾನು ನಿಮಗೆ ಹೊಸ ಆಜ್ಞೆಯನ್ನು ಕೊಡುತ್ತೇನೆ. ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು.


ಈ ಕಾರಣದಿಂದಲೇ ಆತನು ಎಲ್ಲಾ ವಿಧದಲ್ಲಿಯೂ ತನ್ನ ಸಹೋದರ ಸಹೋದರಿಯರಿಗೆ ಸಮಾನನಾಗಬೇಕಾಯಿತು. ದೇವರ ಸೇವೆಯಲ್ಲಿ ಆತನು ಜನರಿಗೆ ಕರುಣೆಯುಳ್ಳವನೂ ನಂಬಿಗಸ್ತನೂ ಆದ ಪ್ರಧಾನ ಯಾಜಕನಾದನು. ಹೀಗೆ ಆತನು ಜನರ ಪಾಪಗಳಿಗೆ ಕ್ಷಮೆಯನ್ನು ತರಲು ಸಾಧ್ಯವಾಯಿತು.


ನಮಗೆ ನಿತ್ಯಜೀವವನ್ನು ತಾನು ದಯಪಾಲಿಸಿರುವುದಾಗಿ ದೇವರು ಹೇಳಿದನು. ಈ ನಿತ್ಯಜೀವವು ಆತನ ಮಗನಲ್ಲಿದೆ. (ಯೇಸು)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು