1 ಯೋಹಾನನು 4:18 - ಪರಿಶುದ್ದ ಬೈಬಲ್18 ದೇವರ ಪ್ರೀತಿಯು ಎಲ್ಲಿರುವುದೋ ಅಲ್ಲಿ ಭಯವಿರುವುದಿಲ್ಲ. ಏಕೆಂದರೆ ದೇವರ ಪರಿಪೂರ್ಣ ಪ್ರೀತಿಯು ಭಯವನ್ನು ತೆಗೆದುಹಾಕುತ್ತದೆ. ದೇವರ ದಂಡನೆಯೇ ಒಬ್ಬ ವ್ಯಕ್ತಿಯಲ್ಲಿ ಭಯವನ್ನು ಉಂಟುಮಾಡುವಂಥದ್ದು. ಆದ್ದರಿಂದ ಭಯವಿರುವವನಲ್ಲಿ ದೇವರ ಪ್ರೀತಿ ಪರಿಪೂರ್ಣವಾಗಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಪ್ರೀತಿ ಇರುವಲ್ಲಿ ಭೀತಿ ಇರುವುದಿಲ್ಲ. ಪೂರ್ಣ ಪ್ರೀತಿ ಭೀತಿಯನ್ನು ಹೊರದೂಡುತ್ತದೆ. ಭೀತಿ ಇರುವಲ್ಲಿ ಯಾತನೆ ಇರುತ್ತದೆ. ಭೀತಿಯಿಂದಿರುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಪ್ರೀತಿಯು ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯು ಯಾತನೆಯನ್ನು ಹೊಂದುತ್ತಾ ಇರುವದು; ಪೂರ್ಣಪ್ರೀತಿಯು ಹೆದರಿಕೆಯನ್ನು ಹೊರಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಪ್ರೀತಿಯಲ್ಲಿ ಹೆದರಿಕೆಯಿಲ್ಲ ಆದರೆ ಪೂರ್ಣ ಪ್ರೀತಿಯು ಹೆದರಿಕೆಯನ್ನು ಹೊರಡಿಸಿಬಿಡುತ್ತದೆ. ಏಕೆಂದರೆ ಭಯವಿರುವಲ್ಲಿ ಯಾತನೆಯಿರುವುದು. ಭಯಪಡುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಪ್ರೆಮ್ ಹೊತ್ತ್ಯಾಕ್ಡೆ ಭಿಂಯೆ ನಾ. ಭಿಂಯೆ ಹೊತ್ತ್ಯಾಕ್ಡೆ ತರಾಸ್ ರ್‍ಹಾತಾ, ಖರೆ, ಪುರಾ ಹೊಲ್ಲೊ ಪ್ರೆಮ್ ಭಿಂಯಾಕ್ ಪಳ್ಸುನ್ ಘಾಲ್ತಾ, ಭಿಂಯಾತಲೊ ಕನ್ನಾಚ್ ಪ್ರೆಮಾತ್ ಪುರಾ ಹೊಲ್ಲೊ ನಾ. ಅಧ್ಯಾಯವನ್ನು ನೋಡಿ |