1 ಯೋಹಾನನು 5:18 - ಪರಿಶುದ್ದ ಬೈಬಲ್18 ದೇವರಿಂದ ಹೊಸದಾಗಿ ಹುಟ್ಟಿದವನು ಪಾಪದಲ್ಲೇ ಮುಂದುವರಿಯುವುದಿಲ್ಲವೆಂದು ನಮಗೆ ತಿಳಿದಿದೆ. ದೇವರ ಮಗನಾದ ಯೇಸು ಅವನನ್ನು ಸುರಕ್ಷಿತವಾಗಿ ಕಾಪಾಡುತ್ತಾನೆ. ಕೆಡುಕನು ಅವನಿಗೆ ಕೇಡುಮಾಡಲಾಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ದೇವರಿಂದ ಹುಟ್ಟಿರುವವನು ಪಾಪಮಾಡುವವನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದಾತನು ಅವನನ್ನು ಕಾಪಾಡುವನು; ಕೆಡುಕನು ಅವನನ್ನು ಹಿಡಿಯುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ದೇವರಿಂದ ಹುಟ್ಟಿರುವವರು ಪಾಪದಲ್ಲಿ ಮುಂದುವರೆಯುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವರನ್ನು ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ಅಂಥವರನ್ನು ಕಾಪಾಡುವರು, ಕೆಡುಕನು ಅಂಥವರನ್ನು ಮುಟ್ಟುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ದೆವಾಕ್ನಾ ಜಲ್ಮಲ್ಲೊ ಪಾಪ್ ಕರಿನಾ ಮನುನ್ ಅಮ್ಕಾ ಗೊತ್ತ್ ಹಾಯ್. ದೆವಾಕ್ನಾ ಜಲ್ಮಲ್ಲೊ ಅಪ್ನಾಕ್ ಅಪ್ನಿ ರಾಕುನ್ ಘೆತಾ, ಸೈತಾನ್ ತೆಕಾ ಆಪ್ಡುಕ್ ಹೊಯ್ನಾ. ಅಧ್ಯಾಯವನ್ನು ನೋಡಿ |
“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.
ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.