Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:1 - ಪರಿಶುದ್ದ ಬೈಬಲ್‌

1 ಎಲ್ಕಾನ ಎಂಬ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ರಾಮಾತಯಿಮ್ ಎಂಬ ಊರಿನವನು. ಅವನು ಚೋಫೀಮ್ ಕುಟುಂಬದವನೂ ಯೆರೋಹಾಮನ ಮಗನೂ ಆಗಿದ್ದನು. ಯೆರೋಹಾಮನು ಎಲೀಹುವಿನ ಮಗ. ಎಲೀಹುವನು ತೋಹುವನ ಮಗ. ತೋಹುವನು ಚೂಫನ ಮಗ. ಇವರೆಲ್ಲ ಎಫ್ರಾಯೀಮ್ ಕುಲದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ರಾಮಾತಯಿಮ್ ಚೋಫೀಮ್ ಊರಿನಲ್ಲಿ ಎಲ್ಕಾನನೆಂಬ ಒಬ್ಬ ಮನುಷ್ಯನಿದ್ದನು. ಇವನು ಯೆರೋಹಾಮನ ಮಗನೂ ಎಲೀಹುವಿನ ಮೊಮ್ಮಗನೂ ತೋಹುವಿನ ಮರಿಮಗನೂ ಆಗಿದ್ದನು. ತೋಹು ಎಂಬವನು ಎಫ್ರಾಯೀಮ್ಯನಾದ ಚೂಫನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಎಫ್ರಯಿಮ್ ಬೆಟ್ಟದ ಪ್ರದೇಶದಲ್ಲಿ ರಾಮಾ ಒಂದು ಊರು. ಆ ಊರಲ್ಲಿ ‘ಎಲ್ಕಾನ’ ಎಂಬ ಒಬ್ಬ ಮನುಷ್ಯನಿದ್ದ. ಇವನು ಯೆರೋಹಾಮನ ಮಗ, ಎಲೀಹುವಿನ ಮೊಮ್ಮಗ ಹಾಗು ತೋಹುವಿನ ಮರಿಮಗ. ಈ ತೋಹು ಎಂಬುವನು ಎಫ್ರಯಿಮ್ಯನಾದ ಚೂಫನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ರಾಮಾತಯಿಮ್ ಚೋಫೀಮ್ ಊರಿನಲ್ಲಿ ಎಲ್ಕಾನನೆಂಬ ಒಬ್ಬ ಮನುಷ್ಯನಿದ್ದನು. ಇವನು ಯೆರೋಹಾಮನ ಮಗನೂ ಎಲೀಹುವಿನ ಮೊಮ್ಮಗನೂ ತೋಹುವಿನ ಮರಿಮಗನೂ ಆಗಿದ್ದನು. ತೋಹು ಎಂಬವನು ಎಫ್ರಾಯೀಮ್ಯನಾದ ಚೂಫನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಎಫ್ರಾಯೀಮ್ ಬೆಟ್ಟದ ಪ್ರದೇಶ ರಾಮತಾಯೀಮ್ ಚೋಫಿಮಿನಲ್ಲಿ ಎಲ್ಕಾನ ಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾಯೀಮ್ಯನಾದ ಚೂಫನ ಮೊಮ್ಮಗನೂ ತೋಹುವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:1
21 ತಿಳಿವುಗಳ ಹೋಲಿಕೆ  

ಸಮುವೇಲನು ಎಲ್ಕಾನನ ಮಗ. ಎಲ್ಕಾನನು ಯೆರೋಹಾಮನ ಮಗ. ಯೆರೋಹಾಮನು ಎಲೀಯೇಲನ ಮಗ. ಎಲೀಯೇಲನು ತೋಹನ ಮಗ.


ಎಲ್ಕಾನನ ಕುಟುಂಬದವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ, ರಾಮಾತಯಿಮಿನಲ್ಲಿದ್ದ ತಮ್ಮ ಮನೆಗೆ ಹಿಂದಿರುಗಿದರು. ಎಲ್ಕಾನನು ಹನ್ನಳನ್ನು ಕೂಡಿದನು. ಯೆಹೋವನು ಹನ್ನಳನ್ನು ಜ್ಞಾಪಿಸಿಕೊಂಡನು.


ಅವನ ಹೆಂಡತಿಯ ಹೆಸರು “ನೊವೊಮಿ.” ಅವನ ಇಬ್ಬರು ಗಂಡುಮಕ್ಕಳ ಹೆಸರುಗಳು: ಮಹ್ಲೋನ್ ಮತ್ತು ಕಿಲ್ಯೋನ್. ಅವರು ಯೆಹೂದಪ್ರಾಂತದ ಎಫ್ರಾತಿಗೆ ಸೇರಿದ ಬೆತ್ಲೆಹೇಮಿನ ನಿವಾಸಿಗಳು. ಇವರು ಮೋವಾಬ್ ಬೆಟ್ಟಪ್ರದೇಶಕ್ಕೆ ಹೋಗಿ ಅಲ್ಲಿಯೇ ನೆಲೆಸಿದರು.


ದಾವೀದನು ಇಷಯನ ಮಗ. ಇಷಯನು ಯೆಹೂದ ಪ್ರಾಂತ್ಯದ ಬೆತ್ಲೆಹೇಮಿನ ಎಫ್ರಾತ ವಂಶದವನು. ಇಷಯನಿಗೆ ಎಂಟು ಜನ ಮಕ್ಕಳಿದ್ದರು. ಸೌಲನ ಕಾಲಕ್ಕಾಗಲೇ ಇಷಯನು ಮುದುಕನಾಗಿದ್ದನು.


ಕೊನೆಗೆ, ಸೌಲನು ಮತ್ತು ಅವನ ಸೇವಕನು ಚೂಫ್ ಎಂಬ ಹೆಸರಿನ ಪಟ್ಟಣಕ್ಕೆ ಬಂದರು. ಸೌಲನು ಸೇವಕನಿಗೆ, “ನಾವು ಮರಳಿ ಹೋಗೋಣ. ನಮ್ಮ ತಂದೆಯು ಕತ್ತೆಗಳ ಬಗ್ಗೆ ಯೋಚಿಸುವುದನ್ನು ಬಿಟ್ಟು ನಮ್ಮ ಬಗ್ಗೆ ಚಿಂತಿಸಲಾರಂಭಿಸುತ್ತಾನೆ” ಎಂದು ಹೇಳಿದನು.


ಆಗಿನ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಎಫ್ರಾಯೀಮ್ ಬೆಟ್ಟಪ್ರದೇಶದ ಒಂದು ಮೂಲೆಯಲ್ಲಿ ಒಬ್ಬ ಲೇವಿಯು ವಾಸಮಾಡುತ್ತಿದ್ದನು. ಆ ಮನುಷ್ಯನಿಗೆ ಒಬ್ಬ ಉಪಪತ್ನಿ ಇದ್ದಳು. ಅವಳು ಯೆಹೂದದ ಬೆತ್ಲೆಹೇಮಿನವಳಾಗಿದ್ದಳು.


ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಮೀಕ ಎಂಬ ಮನುಷ್ಯನಿದ್ದನು.


ಆ ಸಂಜೆ ಯೋಸೇಫ ಎಂಬ ಶ್ರೀಮಂತ ವ್ಯಕ್ತಿ ಜೆರುಸಲೇಮಿಗೆ ಬಂದನು. ಅರಿಮತಾಯ ಪಟ್ಟಣದವನಾದ ಇವನು ಯೇಸುವಿನ ಶಿಷ್ಯನಾಗಿದ್ದನು.


ಗಿಲ್ಯಾದಿನ ಜನರು ಜೋರ್ಡನ್ ನದಿಯನ್ನು ದಾಟಲು ಅನುಕೂಲವಾದ ಸ್ಥಳಗಳನ್ನೆಲ್ಲಾ ವಶಪಡಿಸಿಕೊಂಡರು. ಅವು ಎಫ್ರಾಯೀಮ್ ಪ್ರದೇಶದೊಳಕ್ಕೆ ಹೋಗುವ ಮಾರ್ಗದಲ್ಲಿಯೇ ಇದ್ದವು. ಯಾವಾಗಲಾದರೂ ಎಫ್ರಾಯೀಮ್ ಕುಲದವರಲ್ಲಿ ಅಳಿದುಳಿದವನೊಬ್ಬ ಅಲ್ಲಿಗೆ ಬಂದು, “ನನ್ನನ್ನು ದಾಟಗೊಡಿರಿ” ಎಂದು ಕೇಳಿದರೆ ಗಿಲ್ಯಾದಿನವರು, “ನೀನು ಎಫ್ರಾಯೀಮಿನವನೇ?” ಎಂದು ಕೇಳುತ್ತಿದ್ದರು. ಅವನು “ಅಲ್ಲ” ಎಂದು ಉತ್ತರಿಸಿದರೆ,


ಆರೋನನ ಮಗನಾದ ಎಲ್ಲಾಜಾರನು ಮರಣಹೊಂದಿದನು. ಗಿಬೇತ್‌ನಲ್ಲಿ ಎಲ್ಲಾಜಾರನನ್ನು ಸಮಾಧಿ ಮಾಡಲಾಯಿತು. ಗಿಬೇತ್ ಊರು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿತ್ತು. ಆ ಊರನ್ನು ಎಲ್ಲಾಜಾರನ ಮಗನಾದ ಫೀನೆಹಾಸನಿಗೆ ಕೊಡಲಾಗಿತ್ತು.


ಸೊಲೊಮೋನನ ಸೇವಕರಲ್ಲಿ ನೆಬಾಟನ ಮಗನಾದ ಯಾರೊಬ್ಬಾಮನೂ ಒಬ್ಬನಾಗಿದ್ದನು. ಯಾರೊಬ್ಬಾಮನು ಎಫ್ರಾಯೀಮ್ ಕುಲದವನು, ಅವನು ಚರೇದ ಪಟ್ಟಣದವನು. ಯಾರೊಬ್ಬಾಮನ ತಾಯಿಯ ಹೆಸರು ಜೆರೂಗ, ಆಕೆ ವಿಧವೆಯಾಗಿದ್ದಳು. ಯಾರೊಬ್ಬಾಮನು ರಾಜನ ವಿರುದ್ಧ ತಿರುಗಿಬಿದ್ದನು.


ಓಬೇದನು ಇಷಯನ ತಂದೆ. ಇಷಯನು ದಾವೀದನ ತಂದೆ.


ಎಲ್ಕಾನ ಮತ್ತು ಅವನ ಕುಟುಂಬದವರು ರಾಮಾತಯಿಮಿನಲ್ಲಿದ್ದ ತಮ್ಮ ಮನೆಗೆ ಹಿಂತಿರುಗಿದರು. ಬಾಲಕನು ಶೀಲೋವಿನಲ್ಲಿಯೇ ಉಳಿದುಕೊಂಡನು ಮತ್ತು ಯಾಜಕನಾದ ಏಲಿಯ ಮಾರ್ಗದರ್ಶನದಲ್ಲಿ ಯೆಹೋವನ ಸೇವೆಮಾಡಿದನು.


ಆದರೆ ಸಮುವೇಲನ ಮನೆಯು ರಾಮದಲ್ಲಿತ್ತು. ಆದ್ದರಿಂದ ಸಮುವೇಲನು ಯಾವಾಗಲೂ ರಾಮಕ್ಕೆ ಹಿಂತಿರುಗುತ್ತಿದ್ದನು. ಸಮುವೇಲನು ರಾಮದಿಂದ ಇಸ್ರೇಲರಿಗೆ ನ್ಯಾಯತೀರ್ಪು ನೀಡುತ್ತಾ ಆಳಿದನು; ರಾಮದಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು.


ಕೆಹಾತನ ಸಂತತಿಯವರು: ಕೆಹಾತನ ಮಗ ಅಮ್ಮೀನಾದಾಬ್. ಅಮ್ಮೀನಾದಾಬನ ಮಗ ಕೋರಹ. ಕೋರಹನ ಮಗನು ಅಸ್ಸೀರ್.


ಗಾಯನದ ಮೂಲಕ ಸೇವೆಮಾಡಿದ ತಂದೆಗಳ ಮತ್ತು ಅವರ ಗಂಡುಮಕ್ಕಳ ಪಟ್ಟಿ: ಕೆಹಾತ್ಯನ ಸಂತತಿಯವರಿಂದ ಗಾಯಕನಾದ ಹೇಮಾನ. ಇವನು ಯೋವೇಲನ ಮಗ. ಯೋವೇಲನು ಸಮುವೇಲನ ಮಗ.


ಒಂದು ದಿನ, ಆಕೆ ದೆಬೋರಳ ಖರ್ಜೂರದ ಮರವೆಂದು ಪ್ರಸಿದ್ಧವಾದ ಮರದ ಕೆಳಗೆ ಕುಳಿತಿದ್ದಳು. ಆಗ ಇಸ್ರೇಲಿನ ಜನರು ಆಕೆಯ ಹತ್ತಿರ ಬಂದು, “ಸೀಸೆರನ ಬಗ್ಗೆ ಏನು ಮಾಡಬೇಕು?” ಎಂದು ಕೇಳಿದರು. ದೆಬೋರಳ ಖರ್ಜೂರಮರವು ಎಫ್ರಾಯೀಮ್ ಬೆಟ್ಟಪ್ರದೇಶದ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿ ಇದೆ.


ಸೌಲನು ಕತ್ತೆಗಳನ್ನು ಹುಡುಕಲು ಆರಂಭಿಸಿದನು. ಸೌಲನು ಮತ್ತು ಅವನ ಸೇವಕನು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿ ಹುಡುಕಿದರೂ ಅವರಿಗೆ ಕತ್ತೆಗಳು ಸಿಗಲಿಲ್ಲ. ಆದ್ದರಿಂದ ಅವರು ಶಾಲೀಮ್ ಪ್ರದೇಶದಲ್ಲೆಲ್ಲಾ ಹುಡುಕಿದರು; ಅಲ್ಲಿಯೂ ಅವರ ಕತ್ತೆಗಳು ಸಿಕ್ಕಲಿಲ್ಲ. ಆದ್ದರಿಂದ ಅವರು ಬೆನ್ಯಾಮೀನನ ಪ್ರದೇಶದಲ್ಲೆಲ್ಲಾ ಹುಡುಕಿದರು; ಅಲ್ಲಿಯೂ ಅವರ ಕತ್ತೆಗಳು ಸಿಗಲಿಲ್ಲ.


ಅಹೀಟೂಬನು ಚಾದೋಕನ ತಂದೆ. ಚಾದೋಕನು ಶಲ್ಲೂಮನ ತಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು