1 ಸಮುಯೇಲ 1:12 - ಪರಿಶುದ್ದ ಬೈಬಲ್12 ಹನ್ನಳು ಬಹಳ ಹೊತ್ತಿನವರೆಗೆ ಯೆಹೋವನಿಗೆ ಪ್ರಾರ್ಥನೆ ಮಾಡಿದಳು. ಅವಳು ಪ್ರಾರ್ಥನೆ ಮಾಡುತ್ತಿದ್ದಾಗ ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಕೆಯು ಬಹಳ ಹೊತ್ತಿನ ವರೆಗೆ ಯೆಹೋವನ ಮುಂದೆ ಪ್ರಾರ್ಥನೆಮಾಡುತ್ತಿರುವಾಗ ಏಲಿಯು ಆಕೆಯ ಬಾಯನ್ನೇ ನೋಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹನ್ನಳು ಬಹಳ ಹೊತ್ತಿನವರೆಗೆ ಸರ್ವೇಶ್ವರನ ಮುಂದೆ ಪ್ರಾರ್ಥನೆ ಸಲ್ಲಿಸುತ್ತಾ ಇದ್ದಳು. ಏಲಿ ಆಕೆಯ ಬಾಯನ್ನು ಗಮನಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆಕೆಯು ಬಲು ಹೊತ್ತಿನವರೆಗೆ ಯೆಹೋವನ ಮುಂದೆ ಪ್ರಾರ್ಥನೆ ಮಾಡುತ್ತಿರುವಾಗ ಏಲಿಯು ಆಕೆಯ ಬಾಯನ್ನೇ ನೋಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವಳು ಯೆಹೋವ ದೇವರ ಮುಂದೆ ಹೆಚ್ಚಾಗಿ ಪ್ರಾರ್ಥನೆ ಮಾಡುತ್ತಿರುವಾಗ, ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು. ಅಧ್ಯಾಯವನ್ನು ನೋಡಿ |
ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು