1 ಸಮುಯೇಲ 1:15 - ಪರಿಶುದ್ದ ಬೈಬಲ್15 ಹನ್ನಳು “ಸ್ವಾಮೀ, ನಾನು ಯಾವುದೇ ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿದಿಲ್ಲ. ನಾನು ಬಹುದುಃಖಿತಳು. ನಾನು ಯೆಹೋವನಲ್ಲಿ ನನ್ನ ಎಲ್ಲ ತೊಂದರೆಗಳನ್ನು ನಿವೇದಿಸಿಕೊಳ್ಳುತ್ತಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅದಕ್ಕೆ ಹನ್ನಳು “ಸ್ವಾಮೀ, ಹಾಗಲ್ಲ; ನಾನು ಬಹು ದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಕೆ, “ಇಲ್ಲ ಸ್ವಾಮಿ, ನಾನು ಕುಡಿದಿಲ್ಲ, ನಾನು ಬಹಳ ದುಃಖಪೀಡಿತಳು; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಸರ್ವೇಶ್ವರನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅದಕ್ಕೆ ಹನ್ನಳು - ಸ್ವಾಮೀ, ಹಾಗಲ್ಲ; ನಾನು ಬಹುದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ಹೊಯ್ದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅದಕ್ಕೆ ಹನ್ನಳು ಅವನಿಗೆ ಉತ್ತರವಾಗಿ, “ನನ್ನ ಒಡೆಯನೇ, ಹಾಗಲ್ಲ. ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ. ನಾನು ದ್ರಾಕ್ಷಾರಸವನ್ನಾದರೂ ಮದ್ಯಪಾನವನ್ನಾದರೂ ಕುಡಿದವಳಲ್ಲ. ನಾನು ಯೆಹೋವ ದೇವರ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ತೋಡಿಕೊಳ್ಳುತ್ತಾ ಇದ್ದೇನೆ. ಅಧ್ಯಾಯವನ್ನು ನೋಡಿ |
ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ. ನಿಮ್ಮ ಹೃದಯವು ನೀರಿನಂತೆ ಹರಿಯಲಿ. ನಿಮ್ಮ ಹೃದಯಸಾರವನ್ನು ಯೆಹೋವನ ಸಮ್ಮುಖದಲ್ಲಿ ಹೊಯ್ದುಬಿಡಿರಿ. ನಿಮ್ಮ ಕೈಗಳನ್ನು ಮೇಲೆತ್ತಿ ಯೆಹೋವನಿಗೆ ಪ್ರಾರ್ಥಿಸಿರಿ. ನಿಮ್ಮ ಮಕ್ಕಳು ಬದುಕಲಿ ಎಂದು ಆತನನ್ನು ಕೇಳಿಕೊಳ್ಳಿರಿ. ಹಸಿವೆಯಿಂದ ಮೂರ್ಛೆಹೋಗುತ್ತಿದ್ದ ನಿಮ್ಮ ಮಕ್ಕಳ ಪ್ರಾಣ ಉಳಿಯಲಿ ಎಂದು ಆತನನ್ನು ಪ್ರಾರ್ಥಿಸಿರಿ. ಹಸಿವೆಯಿಂದ ಅವರು ನಗರದ ಎಲ್ಲ ಬೀದಿಗಳಲ್ಲಿ ಮೂರ್ಛೆಹೋಗುತ್ತಿದ್ದಾರೆ.
ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ಈ ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು.