1 ಸಮುಯೇಲ 1:16 - ಪರಿಶುದ್ದ ಬೈಬಲ್16 ನನ್ನನ್ನು ಅಯೋಗ್ಯ ಹೆಂಗಸೆಂದು ನೆನಸಬೇಡಿ. ನಾನು ಬಹು ದುಃಖಿತಳಾಗಿರುವುದರಿಂದ ಮತ್ತು ಹೆಚ್ಚು ನೊಂದಿರುವುದರಿಂದ ದೀರ್ಘಕಾಲ ಪ್ರಾರ್ಥನೆ ಮಾಡಿದೆ” ಎಂದು ಉತ್ತರಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿನ್ನ ದಾಸಿಯಾದ ನನ್ನನ್ನು ಅಯೋಗ್ಯಳೆಂದು ನೆನಸಬೇಡ; ಈವರೆಗೆ ನನ್ನ ಹೆಚ್ಚಾದ ಚಿಂತೆಯನ್ನೂ, ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆನು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿಮ್ಮ ದಾಸಿಯಾದ ನನ್ನನ್ನು ಅಯೋಗ್ಯಳೆಂದು ನೆನಸಬೇಡಿ. ಈವರೆಗೂ ನನ್ನ ಅತಿಯಾದ ಚಿಂತೆಯನ್ನೂ ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆ,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿನ್ನ ದಾಸಿಯಾದ ನನ್ನನ್ನು ಅಯೋಗ್ಯಳೆಂದು ನೆನಸಬೇಡ; ಈವರೆಗೆ ನನ್ನ ಹೆಚ್ಚಾದ ಚಿಂತೆಯನ್ನೂ ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆನು ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿನ್ನ ದಾಸಿಯನ್ನು ದುಷ್ಟಳೆಂದು ನೆನಸಬೇಡ. ನನ್ನ ಹೆಚ್ಚಾದ ಚಿಂತೆಯಿಂದಲೂ, ದುಃಖದಿಂದಲೂ ಈವರೆಗೂ ಮಾತನಾಡಿಕೊಳ್ಳುತ್ತಾ ಇದ್ದೆನು,” ಎಂದಳು. ಅಧ್ಯಾಯವನ್ನು ನೋಡಿ |
ಆದರೆ ಕೆಲವು ಕಿರುಕುಳಕಾರರು, “ಈ ಮನುಷ್ಯನು ಹೇಗೆ ತಾನೆ ನಮ್ಮನ್ನು ರಕ್ಷಿಸುವನು?” ಎಂದು ಹೇಳಿದರು. ಅವರು ಸೌಲನ ಬಗ್ಗೆ ಕೆಟ್ಟಮಾತುಗಳನ್ನು ಆಡಿದರು; ಅವನನ್ನು ತಿರಸ್ಕರಿಸಿ, ಕಾಣಿಕೆಗಳನ್ನು ತಂದುಕೊಡಲಿಲ್ಲ. ಆದರೆ ಸೌಲನು ಏನೂ ಮಾತನಾಡಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು, ಗಾದ್ ಮತ್ತು ರೂಬೆನ್ ಕುಲದವರಿಗೆ ಕಿರುಕುಳಕೊಡುತ್ತಿದ್ದನು. ನಾಹಾಷನು ಪ್ರತಿ ಮನುಷ್ಯನ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ನಾಹಾಷನು ಅವರಿಗೆ ಸಹಾಯಮಾಡಲು ಯಾರಿಗೂ ಅವಕಾಶಕೊಡುತ್ತಿರಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು ಜೋರ್ಡನ್ ನದಿಯ ಪೂರ್ವ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲ ಇಸ್ರೇಲರ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ಆದ್ದರಿಂದ ಅಮ್ಮೋನಿಯರಿಂದ ಏಳು ಸಾವಿರ ಮಂದಿ ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಓಡಿಹೋದರು.