1 ಸಮುಯೇಲ 1:23 - ಪರಿಶುದ್ದ ಬೈಬಲ್23 ಹನ್ನಳ ಗಂಡನಾದ ಎಲ್ಕಾನನು ಅವಳಿಗೆ, “ನಿನಗೆ ಸರಿತೋರಿದಂತೆ ಮಾಡು. ಮಗುವು ಗಟ್ಟಿಯಾದ ಊಟ ಮಾಡುವಷ್ಟು ವಯಸ್ಸಾಗುವ ತನಕ ಮನೆಯಲ್ಲಿಯೇ ಇರು. ನೀನು ಹೇಳಿದ್ದನ್ನು ಯೆಹೋವನು ನೆರವೇರಿಸಲಿ” ಎಂದು ಹೇಳಿದನು. ಆದ್ದರಿಂದ ಹನ್ನಳು ತನ್ನ ಮಗುವು ಗಟ್ಟಿಯಾದ ಆಹಾರವನ್ನು ತಿನ್ನಲು ಆರಂಭಿಸುವ ತನಕ ಆರೈಕೆಮಾಡಿ ಬೆಳೆಸಲು ಮನೆಯಲ್ಲಿಯೇ ಇದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಕೆಯ ಗಂಡನಾದ ಎಲ್ಕಾನನು ಆಕೆಗೆ “ನಿನಗೆ ಸರಿತೋರುವ ಹಾಗೆ ಆಗಲಿ; ಮಗನು ಮೊಲೆಬಿಡುವವರೆಗೆ ಇರು. ಯೆಹೋವನು ತನ್ನ ವಾಕ್ಯವನ್ನು ದೃಢಪಡಿಸಲಿ” ಅಂದನು. ಮಗನು ಮೊಲೆಬಿಡುವ ತನಕ ಹನ್ನಳು ಮನೆಯಲ್ಲೇ ಇದ್ದು ಅವನನ್ನು ಸಾಕಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಗಂಡನಾದ ಎಲ್ಕಾನನು, “ಹಾಗೆಯೇ ಆಗಲಿ; ನಿನಗೆ ಸರಿತೋರಿದಂತೆ ಮಾಡು. ಮಗು ಮೊಲೆಬಿಡುವವರೆಗೆ ಮನೆಯಲ್ಲೇ ಇರು. ಸರ್ವೇಶ್ವರ ನಿನ್ನ ಮಾತನ್ನು ದೃಢವಾಗಿಸಲಿ,” ಎಂದನು. ಮಗು ಮೊಲೆಬಿಡುವ ತನಕ ಹನ್ನಳು ಮನೆಯಲ್ಲೇ ಇದ್ದು ಅವನನ್ನು ಆರೈಕೆ ಮಾಡಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಕೆಯ ಗಂಡನಾದ ಎಲ್ಕಾನನು ಆಕೆಗೆ - ನಿನಗೆ ಸರಿತೋರುವ ಪ್ರಕಾರ ಆಗಲಿ; ಮಗನು ಮೊಲೆಬಿಡುವವರೆಗೆ ಇರು. ಯೆಹೋವನು ತನ್ನ ವಾಕ್ಯವನ್ನು ದೃಢಪಡಿಸಲಿ ಅಂದನು. ಮಗನು ಮೊಲೆಬಿಡುವ ತನಕ ಹನ್ನಳು ಮನೆಯಲ್ಲೇ ಇದ್ದು ಅವನನ್ನು ಸಾಕಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅದಕ್ಕೆ ಅವಳ ಗಂಡನಾದ ಎಲ್ಕಾನನು ಅವಳಿಗೆ, “ನೀನು ನಿನಗೆ ಒಳ್ಳೆಯದಾಗಿ ತೋರುವ ಹಾಗೆ ಮಾಡು. ಅವನು ಎದೆಹಾಲು ಕುಡಿಯುವುದನ್ನು ಬಿಡುವವರೆಗೂ ಕಾದುಕೊಂಡಿರು. ಯೆಹೋವ ದೇವರು ತಮ್ಮ ವಾಕ್ಯವನ್ನು ಪೂರೈಸಲಿ,” ಎಂದನು. ಹಾಗೆಯೇ ಅವಳು ನಿಂತು ತನ್ನ ಮಗುವು ಎದೆಹಾಲು ಬಿಡುವವರೆಗೂ ಅವನಿಗೆ ಎದೆಹಾಲು ಕೊಡುತ್ತಿದ್ದಳು. ಅಧ್ಯಾಯವನ್ನು ನೋಡಿ |
ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.