Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:3 - ಪರಿಶುದ್ದ ಬೈಬಲ್‌

3 ಎಲ್ಕಾನನು ಪ್ರತಿ ವರ್ಷವೂ ತನ್ನ ಪಟ್ಟಣವಾದ ರಾಮಾತಯಿಮ್ ಬಿಟ್ಟು ಶೀಲೋವಿಗೆ ಹೋಗುತ್ತಿದ್ದನು. ಅವನು ಶೀಲೋವಿನಲ್ಲಿ ಸರ್ವಶಕ್ತನಾದ ಯೆಹೋವನನ್ನು ಆರಾಧಿಸಿ ಆತನಿಗೆ ಯಜ್ಞವನ್ನು ಅರ್ಪಿಸುತ್ತಿದ್ದನು. ಹೊಫ್ನಿ ಮತ್ತು ಫೀನೆಹಾಸರೆಂಬ ಯಾಜಕರು ಯೆಹೋವನ ಸೇವೆಮಾಡುವ ಸ್ಥಳವೇ ಶೀಲೋವ. ಹೊಫ್ನಿ ಮತ್ತು ಫೀನೆಹಾಸರು ಏಲಿಯನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಪ್ರತಿವರ್ಷವೂ ಸೇನಾಧೀಶ್ವರನಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸಿ ಆತನನ್ನು ಆರಾಧಿಸುವುದಕ್ಕೋಸ್ಕರ ತನ್ನ ಊರಿನಿಂದ ಶೀಲೋವಿಗೆ ಹೋಗುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ್ ಎಂಬವರು ಯೆಹೋವನ ಯಾಜಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಎಲ್ಕಾನನು ಪ್ರತಿ ವರ್ಷ ರಾಮಾದಿಂದ ಶಿಲೋವಿಗೆ ಹೋಗಿ ಸೇನಾಧೀಶ್ವರರಾದ ಸರ್ವೇಶ್ವರಸ್ವಾಮಿಗೆ ಬಲಿದಾನವನ್ನು ಸಮರ್ಪಿಸಿ ಆರಾಧಿಸುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಫ್ನಿ, ಫೀನೆಹಾಸ ಎಂಬವರು ಸರ್ವೇಶ್ವರನ ಯಾಜಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ಪ್ರತಿವರುಷವೂ ಸೈನ್ಯಾಧೀಶ್ವರನಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸಿ ಆತನನ್ನು ಆರಾಧಿಸುವದಕ್ಕೋಸ್ಕರ ತನ್ನ ಊರಿನಿಂದ ಶೀಲೋವಿಗೆ ಹೋಗುತ್ತಿದ್ದನು. ಅಲ್ಲಿ ಏಲಿಯ ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ಯೆಹೋವನ ಯಾಜಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಶೀಲೋವಿನಲ್ಲಿ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸಲೂ, ಅವರಿಗೆ ಬಲಿಯನ್ನು ಅರ್ಪಿಸಲೂ ಪ್ರತಿವರ್ಷ ಪಟ್ಟಣದಿಂದ ಹೋಗುತ್ತಿದ್ದನು. ಯೆಹೋವ ದೇವರ ಯಾಜಕ ಏಲಿಯ ಮಕ್ಕಳಿಬ್ಬರಾದ ಹೊಫ್ನಿಯೂ, ಫೀನೆಹಾಸನೂ ಅಲ್ಲಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:3
22 ತಿಳಿವುಗಳ ಹೋಲಿಕೆ  

ಪ್ರತಿವರ್ಷ ಯೇಸುವಿನ ತಂದೆತಾಯಿಗಳು ಪಸ್ಕಹಬ್ಬಕ್ಕಾಗಿ ಜೆರುಸಲೇಮಿಗೆ ಹೋಗುತ್ತಿದ್ದರು.


ಇಸ್ರೇಲರೆಲ್ಲರು ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಆ ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ಆ ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು.


“ವರ್ಷದಲ್ಲಿ ಮೂರುಸಲ ನಿಮ್ಮಲ್ಲಿರುವ ಗಂಡಸರೆಲ್ಲರೂ, ಇಸ್ರೇಲರ ದೇವರಾಗಿರುವ ಒಡೆಯನಾದ ಯೆಹೋವನ ಸನ್ನಿಧಿಯಲ್ಲಿ ಸೇರಬೇಕು.


“ಪ್ರತಿವರ್ಷ ನೀವು ಮೂರುಜಾತ್ರೆಗಳನ್ನು ಮಾಡಬೇಕು.


ಎಲ್ಕಾನನು ಯಜ್ಞವನ್ನು ಅರ್ಪಿಸಲು ಮತ್ತು ಯೆಹೋವನಿಗೆ ಮಾಡಿದ ಹರಕೆಯನ್ನು ಸಲ್ಲಿಸಲು ಆ ವರ್ಷವೂ ಶೀಲೋವಿಗೆ ತನ್ನ ಕುಟುಂಬ ಸಮೇತವಾಗಿ ಹೋದನು.


ಹನ್ನಳು ಅನ್ನಪಾನಗಳನ್ನು ತೆಗೆದುಕೊಂಡು ಸದ್ದಿಲ್ಲದೆ ಮೇಲೆದ್ದು ಯೆಹೋವನಿಗೆ ಪ್ರಾರ್ಥಿಸಲು ಹೋದಳು. ಯೆಹೋವನ ಪವಿತ್ರ ಆಲಯದ ದ್ವಾರದ ಹತ್ತಿರ ಯಾಜಕನಾದ ಏಲಿಯು ಕುಳಿತಿದ್ದನು.


“ನಿಮ್ಮ ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸಿಕೊಳ್ಳುವ ಆ ವಿಶೇಷ ಸ್ಥಳಕ್ಕೆ ನೀವೆಲ್ಲಾ ವರ್ಷದಲ್ಲಿ ಮೂರು ಬಾರಿ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ, ಪಂಚಾಶತ್ತಮ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿ ಸೇರಿಬರಬೇಕು. ಯೆಹೋವನ ಬಳಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯೊಂದಿಗೆ ಬರಬೇಕು.


ಮೀಕನು ಮಾಡಿದ್ದ ಆ ವಿಗ್ರಹಗಳನ್ನು ದಾನ್ಯರು ಪೂಜಿಸಿದರು. ಶೀಲೋವಿನಲ್ಲಿ ದೇವಸ್ಥಾನವಿದ್ದ ಕಾಲದಲ್ಲೆಲ್ಲಾ ಅವರು ಆ ವಿಗ್ರಹಗಳನ್ನು ಪೂಜಿಸಿದರು.


ಶೀಲೋವಿನಲ್ಲಿದ್ದ ತನ್ನ ಪವಿತ್ರ ಗುಡಾರವನ್ನು ಆತನು ತೊರೆದುಬಿಟ್ಟನು. ಅವರ ಮಧ್ಯದಲ್ಲಿ ಆತನು ವಾಸಮಾಡಿದ್ದು ಆ ಗುಡಾರದಲ್ಲಿಯೇ.


ದೇವರ ಪವಿತ್ರ ಪೆಟ್ಟಿಗೆಯು ಫಿಲಿಷ್ಟಿಯರ ವಶವಾಯಿತು. ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರನ್ನು ಅವರು ಕೊಂದರು.


ಆ ಕಾರಣಕ್ಕಾಗಿ ಶೀಲೋವಿಗೆ ಜನರನ್ನು ಕಳುಹಿಸಿದರು. ಸರ್ವಶಕ್ತನಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಜನರು ತಂದರು. ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಅವುಗಳು ಯೆಹೋವನು ಕುಳಿತುಕೊಳ್ಳುವ ಸಿಂಹಾಸನದಂತಿದ್ದವು; ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರು ಪೆಟ್ಟಿಗೆಯ ಜೊತೆಯಲ್ಲಿ ಬಂದರು.


ಏಲಿಯ ಕುಟುಂಬವನ್ನು ನಿತ್ಯದಂಡನೆಗೆ ಗುರಿಪಡಿಸುತ್ತೇನೆಂದು ನಾನು ಏಲಿಗೆ ಹೇಳಿರುವೆನು. ಏಲಿಯ ಮಕ್ಕಳು ನನಗೆ ವಿರೋಧವಾಗಿ ಮಾತಾಡಿದ್ದರಿಂದ ಮತ್ತು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ನಾನು ಇದನ್ನು ಮಾಡುತ್ತೇನೆ. ಅಲ್ಲದೆ ಅವರನ್ನು ಹತೋಟಿಯಲ್ಲಿಡಲು ಏಲಿಗೆ ಸಾಧ್ಯವಾಗಲಿಲ್ಲ.


ಈ ಸಂಗತಿಗಳು ನಿಜವಾಗುತ್ತವೆಯೆಂದು ತೋರಿಸಲು ನಾನು ನಿನಗೊಂದು ಗುರುತನ್ನು ಕೊಡುವೆನು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರು ಒಂದೇ ದಿನದಲ್ಲಿ ಸಾಯುವರು. ಅದೇ ಆ ಗುರುತು.


“ಹೀಗೆ ಪ್ರತಿವರ್ಷ ಮೂರು ಸಲ ಗಂಡಸರೆಲ್ಲರೂ ಒಂದು ವಿಶೇಷ ಸ್ಥಳಕ್ಕೆ ದೇವರಾದ ಯೆಹೋವನ ಸನ್ನಿಧಿಗೆ ಬರಬೇಕು.


ನಮಗೊಂದು ವಿಚಾರಹೊಳೆದಿದೆ. ಇದು ಶೀಲೋವಿನಲ್ಲಿ ಯೆಹೋವನ ಉತ್ಸವ ನಡೆಯುವ ಕಾಲ. ಈ ಉತ್ಸವವನ್ನು ಅಲ್ಲಿ ಪ್ರತಿವರ್ಷ ಆಚರಿಸಲಾಗುತ್ತದೆ.” (ಶೀಲೋವ್ ನಗರವು ಬೇತೇಲ್ ನಗರದ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ದಾರಿಯ ಪೂರ್ವಕ್ಕೂ ಲೆಬೋನಿನ ದಕ್ಷಿಣಕ್ಕೂ ಇದೆ.)


ಸಮುವೇಲನ ತಾಯಿಯು ಪ್ರತಿವರ್ಷವೂ ಒಂದು ಚಿಕ್ಕ ಮೇಲಂಗಿಯನ್ನು ಅವನಿಗಾಗಿ ತಯಾರಿಸಿ, ಗಂಡನೊಡನೆ ವಾರ್ಷಿಕ ಯಜ್ಞವನ್ನು ಅರ್ಪಿಸಲು ಶೀಲೋವಿಗೆ ಹೋದಾಗ ಅವನಿಗೆ ಕೊಡುತ್ತಿದ್ದಳು.


ಅವರಲ್ಲಿ ಅಹೀಯನೂ ಒಬ್ಬನು. ಶೀಲೋವಿನಲ್ಲಿ ಏಲಿಯು ಯೆಹೋವನ ಯಾಜಕನಾಗಿದ್ದನು. ಏಫೋದನ್ನು ಧರಿಸಿದ್ದ ಅಹೀಯನು ಆಗ ಅಲ್ಲಿ ಯಾಜಕನಾಗಿದ್ದನು. ಅಹೀಯನು ಈಕಾಬೋದನ ಸೋದರನಾದ ಅಹೀಟೂಬನ ಮಗ. ಈಕಾಬೋದನು ಫೀನೆಹಾಸನ ಮಗ. ಫೀನೆಹಾಸನು ಏಲಿಯ ಮಗ. ಯೋನಾತಾನನು ಹೊರಟುಹೋದನೆಂಬುದು ಜನರಿಗೆ ಗೊತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು