Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:4 - ಪರಿಶುದ್ದ ಬೈಬಲ್‌

4 ಎಲ್ಕಾನನು ಪ್ರತಿಸಲ ಯಜ್ಞವನ್ನು ಅರ್ಪಿಸುವಾಗ, ಪೆನಿನ್ನಳಿಗೆ ಯಜ್ಞದ ಒಂದು ಭಾಗವನ್ನೂ ಅವಳ ಮಕ್ಕಳಿಗೆ ಒಂದು ಭಾಗವನ್ನೂ ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಎಲ್ಕಾನನು ಯಜ್ಞವನ್ನರ್ಪಿಸಿದಾಗೆಲ್ಲಾ ತನ್ನ ಹೆಂಡತಿಯಾದ ಪೆನಿನ್ನಳಿಗೂ ಆಕೆಯ ಎಲ್ಲಾ ಗಂಡು ಹೆಣ್ಣುಮಕ್ಕಳಿಗೂ ಭಾಗಗಳನ್ನು ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಎಲ್ಕಾನನು ಬಲಿಯರ್ಪಿಸಿದಾಗಲೆಲ್ಲಾ ತನ್ನ ಹೆಂಡತಿಯಾದ ಪೆನಿನ್ನಳಿಗೂ ಆಕೆಯ ಎಲ್ಲ ಗಂಡು-ಹೆಣ್ಣು ಮಕ್ಕಳಿಗೂ ಬಲಿಭೋಜನದ ಒಂದೊಂದು ಭಾಗವನ್ನು ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಎಲ್ಕಾನನು ಯಜ್ಞವನ್ನರ್ಪಿಸಿದಾಗೆಲ್ಲಾ ತನ್ನ ಹೆಂಡತಿಯಾದ ಪೆನಿನ್ನಳಿಗೂ ಆಕೆಯ ಎಲ್ಲಾ ಗಂಡು ಹೆಣ್ಣು ಮಕ್ಕಳಿಗೂ ಭಾಗಗಳನ್ನು ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಎಲ್ಕಾನನು ಬಲಿ ಅರ್ಪಿಸುವ ಕಾಲದಲ್ಲಿ ಅವನು ತನ್ನ ಹೆಂಡತಿ ಪೆನಿನ್ನಳಿಗೂ, ಅವಳ ಸಮಸ್ತ ಪುತ್ರಪುತ್ರಿಯರಿಗೂ ಪಾಲನ್ನು ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:4
5 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಜನರೂ ಒಟ್ಟಾಗಿ ಸೇರಿ ದೇವರ ಸನ್ನಿಧಾನದಲ್ಲಿ ಸಂತೋಷಪಡಿರಿ. ನಿಮ್ಮ ಹೆಂಡತಿಮಕ್ಕಳನ್ನು ಅಲ್ಲದೆ ನಿಮ್ಮ ಸೇವಕಸೇವಕಿಯರನ್ನು ನಿಮ್ಮ ಪಟ್ಟಣದಲ್ಲಿರುವ ಲೇವಿಯರನ್ನು ಮತ್ತು ವಿಧವೆಯರನ್ನು, ಅನಾಥರನ್ನು, ಪರದೇಶಿಗಳನ್ನು ಕರೆದುಕೊಂಡು ಸಂತೋಷಪಡಿರಿ.


ಸಮಾಧಾನಯಜ್ಞದ ಮಾಂಸವನ್ನು ಅದು ಸಮರ್ಪಣೆಯಾದ ದಿನದಲ್ಲಿಯೇ ತಿನ್ನಬೇಕು. ಒಬ್ಬನು ದೇವರಿಗೆ ತನ್ನ ಕೃತಜ್ಞತೆಯನ್ನು ಸೂಚಿಸುವುದಕ್ಕಾಗಿ ಈ ಕಾಣಿಕೆಯನ್ನು ಅರ್ಪಿಸುತ್ತಾನೆ. ಅದರ ಮಾಂಸದಲ್ಲಿ ಮರುದಿನದ ಮುಂಜಾನೆಯವರೆಗೆ ಏನೂ ಉಳಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು