1 ಸಮುಯೇಲ 1:5 - ಪರಿಶುದ್ದ ಬೈಬಲ್5 ಎಲ್ಕಾನನು ಹನ್ನಳಿಗೆ ಯಾವಾಗಲೂ ಎರಡು ಭಾಗವನ್ನು ಕೊಡುತ್ತಿದ್ದನು. ಯೆಹೋವನು ಹನ್ನಳಿಗೆ ಮಕ್ಕಳನ್ನು ಕೊಡದೇ ಇದ್ದರೂ, ಎಲ್ಕಾನನು ಎರಡು ಭಾಗವನ್ನು ಕೊಡುತ್ತಿದ್ದನು. ಎಲ್ಕಾನನು ಹನ್ನಳನ್ನು ಬಹಳವಾಗಿ ಪ್ರೀತಿಸುತ್ತಿದ್ದ ಕಾರಣ ಹೀಗೆ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ, ಯೆಹೋವನು ಆಕೆಯ ಗರ್ಭವನ್ನು ಮುಚ್ಚಿದ್ದರಿಂದ ಅವನು ಆಕೆಗೆ ಎರಡು ಭಾಗವನ್ನು ಕೊಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವನು ಹನ್ನಳನ್ನು ಬಹಳವಾಗಿ ಪ್ರೀತಿಸುತ್ತಿದ್ದರೂ ಒಂದು ಭಾಗವನ್ನು ಮಾತ್ರ ಆಕೆಗೆ ಕೊಡುತ್ತಾ ಇದ್ದನು. ಏಕೆಂದರೆ ಸರ್ವೇಶ್ವರ ಆಕೆಗೆ ಮಕ್ಕಳನ್ನು ಕೊಟ್ಟಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ ಯೆಹೋವನು ಆಕೆಗೆ ಮಕ್ಕಳನ್ನು ಕೊಡಲಿಲ್ಲವಾದದರಿಂದ ಆಕೆಗೆ ಒಂದು ಭಾಗವನ್ನು ಮಾತ್ರ ಕೊಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವನು ಹನ್ನಳನ್ನು ಪ್ರೀತಿಸಿದ್ದರಿಂದ ಹನ್ನಳಿಗೆ ಎರಡಷ್ಟು ಪಾಲನ್ನು ಕೊಡುತ್ತಿದ್ದನು. ಆದರೆ ಯೆಹೋವ ದೇವರು ಹನ್ನಳ ಗರ್ಭವನ್ನು ಮುಚ್ಚಿಬಿಟ್ಟಿದ್ದರು. ಅಧ್ಯಾಯವನ್ನು ನೋಡಿ |