Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:6 - ಪರಿಶುದ್ದ ಬೈಬಲ್‌

6 ಪೆನಿನ್ನಳು ಯಾವಾಗಲೂ ಹನ್ನಳನ್ನು ಕೆಣಕಿ ನೋವು ಮಾಡುತ್ತಿದ್ದಳು. ಹನ್ನಳು ಬಂಜೆಯಾಗಿದ್ದುದೇ ಅದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಆಕೆಯ ಸವತಿಯಾದ ಪೆನಿನ್ನಳು, “ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ” ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ, “ಸರ್ವೇಶ್ವರ ನಿನ್ನನ್ನು ಬಂಜೆಯಾಗಿ ಮಾಡಿದ್ದಾರೆ,” ಎಂಬ ಚುಚ್ಚು ಮಾತುಗಳಿಂದ ನೋಯಿಸುತ್ತಿದ್ದಳು ಅವಳ ಸವತಿಯಾದ ಪೆನಿನ್ನಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಆಕೆಯ ಸವತಿಯು - ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಅವಳ ಗರ್ಭವನ್ನು ಮುಚ್ಚಿದ್ದರಿಂದ, ಅವಳ ಪ್ರತಿಸ್ಪರ್ಧಿಯಾದ ಪೆನಿನ್ನಳು ಹನ್ನಳಿಗೆ ಮನಗುಂದುವ ಹಾಗೆ ಬಹಳ ಕೆಣಕಿ ಬಾಧಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:6
8 ತಿಳಿವುಗಳ ಹೋಲಿಕೆ  

“ಕಷ್ಟದಲ್ಲಿರುವವನಿಗೆ ಅವನ ಸ್ನೇಹಿತನು ದಯೆತೋರಬೇಕು; ಒಂದುವೇಳೆ ಅವನು ಸರ್ವಶಕ್ತನಾದ ದೇವರಿಗೆ ವಿಮುಖನಾಗಿದ್ದರೂ ಅವನ ಸ್ನೇಹಿತನು ನಂಬಿಗಸ್ತನಾಗಿರಬೇಕು.


ದುಷ್ಟರು ಬಂಜೆಯರಿಗೆ ಕೇಡು ಮಾಡುವರು; ವಿಧವೆಯರಿಗೆ ಕರುಣೆ ತೋರರು.


“ಹೆಂಡತಿ ಇನ್ನೂ ಜೀವದಿಂದಿರುವಾಗ, ಆಕೆಯ ಸಹೋದರಿಯನ್ನು ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು. ಇಲ್ಲವಾದರೆ ಆ ಇಬ್ಬರು ಸಹೋದರಿಯರು ಒಬ್ಬರಿಗೊಬ್ಬರು ವೈರಿಗಳಾಗುವರು. ಹೆಂಡತಿಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು.


ರಾಹೇಲಳು ತನಗೆ ಮಕ್ಕಳಾಗದಿರುವುದನ್ನು ಗಮನಿಸಿದಳು. ರಾಹೇಲಳಿಗೆ ತನ್ನ ಅಕ್ಕ ಲೇಯಳ ಮೇಲೆ ಹೊಟ್ಟೆಕಿಚ್ಚಾಯಿತು. ಆದ್ದರಿಂದ ರಾಹೇಲಳು ಯಾಕೋಬನಿಗೆ, “ನನಗೆ ಮಕ್ಕಳನ್ನು ಕೊಡು, ಇಲ್ಲವಾದರೆ ನಾನು ಸಾಯುವೆ” ಎಂದು ಹೇಳಿದಳು.


ಪ್ರತಿ ವರ್ಷವೂ ಶೀಲೋವಿನಲ್ಲಿದ್ದ ಯೆಹೋವನ ಆಲಯಕ್ಕೆ ಅವರ ಕುಟುಂಬವು ಹೋದಾಗಲೆಲ್ಲ ಪೆನಿನ್ನಳು ಹನ್ನಳನ್ನು ಕೆಣಕಿ ನೋವು ಮಾಡುತ್ತಿದ್ದಳು. ಒಂದು ದಿನ ಎಲ್ಕಾನನು ಯಜ್ಞವನ್ನು ಅರ್ಪಿಸುವಾಗ, ಹನ್ನಳು ನೊಂದುಕೊಂಡು ಅಳಲಾರಂಭಿಸಿದಳು. ಹನ್ನಳು ಊಟಮಾಡಲೇ ಇಲ್ಲ.


ಯೆಫ್ತಾಹನ ಮಗಳು ತನ್ನ ತಂದೆಗೆ, “ನನಗೋಸ್ಕರ ಒಂದು ಕೆಲಸವನ್ನು ಮಾಡು. ಎರಡು ತಿಂಗಳುಗಳವರೆಗೆ ನನ್ನನ್ನು ಒಬ್ಬಂಟಿಗಳಾಗಿ ಇರಲು ಬಿಡು. ನಾನು ಬೆಟ್ಟಪ್ರದೇಶಕ್ಕೆ ಹೋಗುತ್ತೇನೆ. ನಾನು ಮದುವೆ ಮಾಡಿಕೊಳ್ಳುವುದಿಲ್ಲ ಮತ್ತು ಮಕ್ಕಳನ್ನು ಹೆರುವದಿಲ್ಲ. ನಾನು ಮತ್ತು ನನ್ನ ಗೆಳತಿಯರು ಹೋಗಿ ಒಟ್ಟಾಗಿ ಅಳುತ್ತೇವೆ” ಎಂದಳು.


ಹನ್ನಳು ಇಂತೆಂದಳು: “ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ. ನಾನು ನನ್ನ ದೇವರಾದ ಯೆಹೋವನಲ್ಲಿ ಬಲಶಾಲಿಯಾಗಿದ್ದೇನೆ. ನಾನು ನನ್ನ ಶತ್ರುಗಳ ಬಗ್ಗೆ ನಗುವೆನು. ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.


ಸೌಲನ ಮಗಳಾದ ಮೀಕಲಳು ಬಂಜೆಯಾಗಿ ಉಳಿದಳು. ಅವಳು ಮಕ್ಕಳೇ ಇಲ್ಲದೆ ಸತ್ತುಹೋದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು