Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:7 - ಪರಿಶುದ್ದ ಬೈಬಲ್‌

7 ಪ್ರತಿ ವರ್ಷವೂ ಶೀಲೋವಿನಲ್ಲಿದ್ದ ಯೆಹೋವನ ಆಲಯಕ್ಕೆ ಅವರ ಕುಟುಂಬವು ಹೋದಾಗಲೆಲ್ಲ ಪೆನಿನ್ನಳು ಹನ್ನಳನ್ನು ಕೆಣಕಿ ನೋವು ಮಾಡುತ್ತಿದ್ದಳು. ಒಂದು ದಿನ ಎಲ್ಕಾನನು ಯಜ್ಞವನ್ನು ಅರ್ಪಿಸುವಾಗ, ಹನ್ನಳು ನೊಂದುಕೊಂಡು ಅಳಲಾರಂಭಿಸಿದಳು. ಹನ್ನಳು ಊಟಮಾಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಪ್ರತಿವರ್ಷವೂ ಕುಟುಂಬವಾಗಿ ಯೆಹೋವನ ಮಂದಿರಕ್ಕೆ ಹೋದಾಗೆಲ್ಲಾ ಪೆನಿನ್ನಳು ಆಕೆಯನ್ನು ಕೆಣಕುತ್ತಿದ್ದುದರಿಂದ ಹನ್ನಳು ಊಟ ಮಾಡದೆ ಅಳುತ್ತಾ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ವರ್ಷ ವರ್ಷವೂ ಇದು ಹಾಗೆಯೆ ನಡೆಯುತ್ತಿತ್ತು; “ಸರ್ವೇಶ್ವರನ ಮಂದಿರಕ್ಕೆ ಹೋದಾಗಲೆಲ್ಲ ಪೆನಿನ್ನಳು ಹನ್ನಳನ್ನು ಕೆಣಕುತ್ತಿದ್ದಳು. ಇದರಿಂದಾಗಿ ಒಮ್ಮೆ ಹನ್ನಳು ಊಟ ಮಾಡಲೊಲ್ಲದೆ ಅಳುತ್ತಾ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಪ್ರತಿವರ್ಷವೂ ಯೆಹೋವನ ಮಂದಿರಕ್ಕೆ ಹೋದಾಗೆಲ್ಲಾ ಎಲ್ಕಾನನು ಹಾಗೆಯೇ ಮಾಡುತ್ತಿದ್ದದರಿಂದಲೂ ಪೆನಿನ್ನಳು ಆಕೆಯನ್ನು ರೇಗಿಸುತ್ತಿದ್ದದರಿಂದಲೂ ಹನ್ನಳು ಒಂದಾನೊಂದು ಸಾರಿ ಉಣ್ಣಲೊಲ್ಲದೆ ಅಳುತ್ತಾ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹೀಗೆಯೇ ಅವನು ಪ್ರತಿ ಸಂವತ್ಸರದಲ್ಲಿಯೂ ಮಾಡುತ್ತಿದ್ದನು, ಇವಳು ಯೆಹೋವ ದೇವರ ಮನೆಗೆ ಹೋಗುತ್ತಿರುವಾಗ ಆ ರೀತಿಯಾಗಿ ಹನ್ನಳನ್ನು ಬಾಧಿಸುತ್ತಿದ್ದಳು. ಅದರಿಂದ ಹನ್ನಳು ಊಟಮಾಡದೆ ಅಳುತ್ತಾ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:7
7 ತಿಳಿವುಗಳ ಹೋಲಿಕೆ  

ಸಮುವೇಲನ ತಾಯಿಯು ಪ್ರತಿವರ್ಷವೂ ಒಂದು ಚಿಕ್ಕ ಮೇಲಂಗಿಯನ್ನು ಅವನಿಗಾಗಿ ತಯಾರಿಸಿ, ಗಂಡನೊಡನೆ ವಾರ್ಷಿಕ ಯಜ್ಞವನ್ನು ಅರ್ಪಿಸಲು ಶೀಲೋವಿಗೆ ಹೋದಾಗ ಅವನಿಗೆ ಕೊಡುತ್ತಿದ್ದಳು.


ಪೆನಿನ್ನಳು ಯಾವಾಗಲೂ ಹನ್ನಳನ್ನು ಕೆಣಕಿ ನೋವು ಮಾಡುತ್ತಿದ್ದಳು. ಹನ್ನಳು ಬಂಜೆಯಾಗಿದ್ದುದೇ ಅದಕ್ಕೆ ಕಾರಣ.


ಅವಳ ಗಂಡನಾದ ಎಲ್ಕಾನನು ಅವಳನ್ನು ಕುರಿತು, “ಹನ್ನಾ, ಯಾಕೆ ಅಳುತ್ತಿರುವೆ? ಯಾಕೆ ಊಟಮಾಡುತ್ತಿಲ್ಲ? ಯಾಕೆ ವ್ಯಸನದಿಂದಿರುವೆ? ನಿನಗೆ ನಾನಿಲ್ಲವೇ? ನಾನು ನಿನ್ನ ಗಂಡ. ನಾನು ನಿನಗೆ ಹತ್ತು ಗಂಡುಮಕ್ಕಳಿಗಿಂತಲೂ ಹೆಚ್ಚಾಗಿದ್ದೇನಲ್ಲಾ” ಎಂದು ಹೇಳಿದನು.


ನಾನು ನಿರ್ಬಲನಾಗಿ ಒಣಗಿಹೋಗುತ್ತಿರುವ ಹುಲ್ಲಿನಂತಿದ್ದೇನೆ. ನಾನು ಊಟವನ್ನೂ ಮರೆತುಬಿಡುವೆನು.


ಹನ್ನಳು ಇಂತೆಂದಳು: “ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ. ನಾನು ನನ್ನ ದೇವರಾದ ಯೆಹೋವನಲ್ಲಿ ಬಲಶಾಲಿಯಾಗಿದ್ದೇನೆ. ನಾನು ನನ್ನ ಶತ್ರುಗಳ ಬಗ್ಗೆ ನಗುವೆನು. ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.


ದೀರ್ಘ ದುಃಖದಿಂದಾಗಿ ನನ್ನ ಎಲುಬುಗಳು ಚರ್ಮಕ್ಕೆ ಅಂಟಿಕೊಂಡಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು