1 ಸಮುಯೇಲ 1:8 - ಪರಿಶುದ್ದ ಬೈಬಲ್8 ಅವಳ ಗಂಡನಾದ ಎಲ್ಕಾನನು ಅವಳನ್ನು ಕುರಿತು, “ಹನ್ನಾ, ಯಾಕೆ ಅಳುತ್ತಿರುವೆ? ಯಾಕೆ ಊಟಮಾಡುತ್ತಿಲ್ಲ? ಯಾಕೆ ವ್ಯಸನದಿಂದಿರುವೆ? ನಿನಗೆ ನಾನಿಲ್ಲವೇ? ನಾನು ನಿನ್ನ ಗಂಡ. ನಾನು ನಿನಗೆ ಹತ್ತು ಗಂಡುಮಕ್ಕಳಿಗಿಂತಲೂ ಹೆಚ್ಚಾಗಿದ್ದೇನಲ್ಲಾ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಆಕೆಯ ಗಂಡನಾದ ಎಲ್ಕಾನನು ಆಕೆಗೆ “ಹನ್ನಾ, ಏಕೆ ಅಳುತ್ತೀ? ಊಟ ಮಾಡದಿರುವುದಕ್ಕೆ ಕಾರಣವೇನು? ನೀನು ವ್ಯಸನಪಡುವುದೇಕೆ? ನಾನು ನಿನಗೆ ಹತ್ತು ಮಂದಿ ಗಂಡು ಮಕ್ಕಳಿಗಿಂತ ಹೆಚ್ಚಾಗಿದ್ದೇನಲ್ಲಾ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ಆಕೆಯ ಗಂಡ ಎಲ್ಕಾನನು ಆಕೆಗೆ, “ಹನ್ನಾ, ಏಕೆ ಅಳುತ್ತಿರುವೆ? ಊಟಮಾಡದಿರುವುದಕ್ಕೆ ಕಾರಣ ಏನು? ವ್ಯಸನಪಡುವುದು ಏಕೆ? ಹತ್ತು ಮಕ್ಕಳಿಗಿಂತಲು ನಾನು ನಿನಗೆ ಹೆಚ್ಚಲ್ಲವೆ?” ಎಂದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಆಕೆಯ ಗಂಡನಾದ ಎಲ್ಕಾನನು ಆಕೆಗೆ - ಹನ್ನಾ, ಏಕೆ ಅಳುತ್ತೀ? ಉಣ್ಣದಿರುವದಕ್ಕೇನು ಕಾರಣ? ನೀನು ವ್ಯಸನಪಡುವದೇಕೆ? ನಾನು ನಿನಗೆ ಹತ್ತು ಮಂದಿ ಮಕ್ಕಳಿಗಿಂತ ಹೆಚ್ಚಾಗಿದ್ದೇನಲ್ಲಾ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಅವಳ ಗಂಡ ಎಲ್ಕಾನನು ಅವಳಿಗೆ, “ಹನ್ನಳೇ, ಏಕೆ ಅಳುತ್ತೀ? ಏಕೆ ಊಟಮಾಡದೆ ಇದ್ದೀ? ನಿನ್ನ ಮನ ಏಕೆ ಕುಂದಿದೆ? ಹತ್ತು ಮಂದಿ ಪುತ್ರರಿಗಿಂತ ನಾನು ನಿನಗೆ ಹೆಚ್ಚಲ್ಲವೆ?” ಎಂದನು. ಅಧ್ಯಾಯವನ್ನು ನೋಡಿ |
ಹಜಾಯೇಲನು, “ಸ್ವಾಮೀ, ನೀವು ಅಳುವುದೇಕೇ?” ಎಂದು ಕೇಳಿದನು. ಎಲೀಷನು, “ನಾನು ಅಳುತ್ತಿರುವುದೇಕೆಂದರೆ ನೀನು ಇಸ್ರೇಲರಿಗೆ ಮಾಡುವ ಕೆಟ್ಟಕಾರ್ಯಗಳು ನನಗೆ ತಿಳಿದಿವೆ. ನೀನು ಅವರ ನಗರಗಳ ಕೋಟೆಗಳನ್ನು ಸುಟ್ಟುಹಾಕುವೆ. ನೀನು ಅವರ ತರುಣರನ್ನು ಖಡ್ಗಗಳಿಂದ ಇರಿದುಕೊಲ್ಲುವೆ. ನೀನು ಅವರ ಮಕ್ಕಳನ್ನು ಕೊಂದುಹಾಕುವೆ. ನೀನು ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಹಾಕುವೆ” ಎಂದು ಹೇಳಿದನು.