Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:1 - ಪರಿಶುದ್ದ ಬೈಬಲ್‌

1 ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಆಳು ಮುಂದೆ ಹೋದಾಗ ಸಮುವೇಲನು ತೈಲದ ಕೊಂಬಿನಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವನು ತನ್ನ ಸ್ವತ್ತನ್ನು ಅಳುವುದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ಆಳು ಮುಂದೆ ಹೋದಾದ ಮೇಲೆ ಸಮುವೇಲನು ಓಲಿವ್ ಎಣ್ಣೇಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು, ಅವನನ್ನು ಮುದ್ದಿಟ್ಟು ಅವನಿಗೆ, “ಸರ್ವೇಶ್ವರ ತಮ್ಮ ಜನರ ಮೇಲೆ ರಾಜ್ಯ ಆಳಲು ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ಆಳು ಮುಂದೆ ಹೋದಾಗ ಸಮುವೇಲನು ಎಣ್ಣೇ ಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ - ಯೆಹೋವನು ತನ್ನ ಸ್ವಾಸ್ತ್ಯದ ಮೇಲೆ ಪ್ರಭುವಾಗಿರುವದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಸಮುಯೇಲನು ಎಣ್ಣೆಕುಪ್ಪಿಯಿಂದ ಅವನ ತಲೆಯ ಮೇಲೆ ಸುರಿದು, ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವ ದೇವರು ನಿನ್ನನ್ನು ತಮ್ಮ ಆಸ್ತಿಯಾಗಿರುವ ಜನರ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:1
38 ತಿಳಿವುಗಳ ಹೋಲಿಕೆ  

ಸಮುವೇಲನು ಎಣ್ಣೆಯಿದ್ದ ಕೊಂಬನ್ನು ತೆಗೆದುಕೊಂಡು, ಅದರಲ್ಲಿದ್ದ ವಿಶೇಷವಾದ ಎಣ್ಣೆಯನ್ನು ಇಷಯನ ಕಿರಿಮಗನ ಮೇಲೆ, ಅವನ ಸೋದರರ ಎದುರಿನಲ್ಲೇ ಸುರಿದನು. ಆ ದಿನದಿಂದ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ದಾವೀದನಲ್ಲಿ ನೆಲೆಸಿತು. ಅನಂತರ ಸಮುವೇಲನು ರಾಮಕ್ಕೆ ಹಿಂದಿರುಗಿದನು.


ಆತನು ದಾವೀದನಿಗೆ ಕುರಿಗಳನ್ನು ಪರಿಪಾಲನೆ ಮಾಡುವ ಕೆಲಸದಿಂದ ತೆಗೆದುಹಾಕಿ ತನ್ನ ಜನರಾದ ಯಾಕೋಬ್ಯರನ್ನೂ ತನ್ನ ಆಸ್ತಿಯಾದ ಇಸ್ರೇಲರನ್ನೂ ಪರಿಪಾಲಿಸುವ ಉದ್ಯೋಗವನ್ನು ಕೊಟ್ಟನು.


“ನಾಳೆ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ಒಬ್ಬ ಮನುಷ್ಯನನ್ನು ಕಳುಹಿಸುತ್ತೇನೆ. ಅವನು ಬೆನ್ಯಾಮೀನ್ ಕುಟುಂಬಕ್ಕೆ ಸೇರಿದವನು. ನೀನು ಅವನನ್ನು ಅಭಿಷೇಕಿಸು. ನನ್ನ ಜನರಾದ ಇಸ್ರೇಲರಿಗೆ ಅವನು ರಾಜನಾಗುತ್ತಾನೆ. ಈ ಮನುಷ್ಯನು ನನ್ನ ಜನರನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ. ನನ್ನ ಜನರ ಸಂಕಟವನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳನ್ನು ನಾನು ಆಲಿಸಿದ್ದೇನೆ” ಎಂದು ತಿಳಿಸಿದ್ದನು.


ಆತನ ಮಗನಿಗೆ ನಂಬಿಗಸ್ತರಾಗಿರಿ, ಇಲ್ಲವಾದರೆ ಆತನ ಕೋಪವು ಬೇಗನೆ ತೋರಿಬಂದು ನಿಮ್ಮನ್ನು ನಾಶಪಡಿಸುವುದು. ಯೆಹೋವನನ್ನು ಆಶ್ರಯಿಸಿಕೊಂಡಿರುವವರು ಭಾಗ್ಯವಂತರೇ ಸರಿ!


ಬಳಿಕ ಜನರು ತಮಗೆ ರಾಜನು ಬೇಕೆಂದು ಕೇಳಿಕೊಂಡರು. ದೇವರು ಅವರಿಗೆ ಕೀಷನ ಮಗನಾದ ಸೌಲನನ್ನು ಕೊಟ್ಟನು. ಸೌಲನು ಬೆನ್ಯಾಮಿನ್ ಕುಲದವನು. ಅವನು ನಲವತ್ತು ವರ್ಷಗಳ ಕಾಲ ರಾಜನಾಗಿದ್ದನು.


ಆದರೆ ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನನ್ನು ನಾನು ಕೊಲ್ಲುವಂತಹ ಪರಿಸ್ಥಿತಿಯನ್ನು ಎಂದಿಗೂ ನನಗೆ ಕೊಡದಂತೆ ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ! ಈಗ ಸೌಲನ ತಲೆಯ ಹತ್ತಿರವಿರುವ ಭರ್ಜಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೊಂಡ ನಂತರ ನಾವು ಹೋಗೋಣ” ಎಂದು ಹೇಳಿದನು.


ಯೆಹೋವನ ಪಾಲು ಆತನ ಜನರೇ. ಇಸ್ರೇಲನ ವಂಶಸ್ಥರು ದೇವಜನರಾಗಿದ್ದಾರೆ.


“ಹಿಂದಿರುಗಿ ಹೋಗಿ, ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಇದನ್ನು ಹೇಳು: ‘ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದೆನು; ನಿನ್ನ ಕಣ್ಣೀರನ್ನು ನೋಡಿದೆನು. ಆದ್ದರಿಂದ ನಾನು ನಿನ್ನನ್ನು ಗುಣಪಡಿಸುತ್ತೇನೆ. ಮೂರನೆಯ ದಿನ, ನೀನು ದೇವಾಲಯಕ್ಕೆ ಹೋಗುವೆ.


ಪ್ರವಾದಿಯಾದ ಎಲೀಷನು ಪ್ರವಾದಿಗಳ ಗುಂಪಿನಿಂದ ಒಬ್ಬನನ್ನು ಕರೆದು ಅವನಿಗೆ, “ಎಣ್ಣೆಯಿರುವ ಈ ಸಣ್ಣ ಸೀಸೆಯನ್ನು ನಿನ್ನ ಕೈಗಳಲ್ಲಿ ತೆಗೆದುಕೊಂಡು ರಾಮೋತ್‌ಗಿಲ್ಯಾದಿಗೆ ಹೋಗು.


ಆಗ ನಾಲ್ಕು ಜೀವಿಗಳು ಮತ್ತು ಇಪ್ಪತ್ನಾಲ್ಕು ಮಂದಿ ಹಿರಿಯರು ಆ ಕುರಿಮರಿಯ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. ಪ್ರತಿಯೊಬ್ಬರ ಕೈಯಲ್ಲೂ ಒಂದೊಂದು ತಂತಿವಾದ್ಯವಿತ್ತು. ಧೂಪವು ತುಂಬಿದ್ದ ಚಿನ್ನದ ಪಾತ್ರೆಗಳನ್ನು ಅವರು ಹಿಡಿದುಕೊಂಡಿದ್ದರು. ಪಾತ್ರೆಗಳು ದೇವರ ಪರಿಶುದ್ಧ ಜನರ ಪ್ರಾರ್ಥನೆಗಳಾಗಿದ್ದವು.


ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.


ಸಹೋದರ ಸಹೋದರಿಯರನ್ನು ಸಂಧಿಸಿದಾಗ ಪವಿತ್ರವಾದ ಮುದ್ದಿಟ್ಟು ವಂದಿಸಿರಿ.


ಈಗ ಇಸ್ರೇಲರು ಹೆಚ್ಚೆಚ್ಚಾಗಿ ಪಾಪ ಮಾಡುತ್ತಿರುತ್ತಾರೆ. ತಮಗಾಗಿ ವಿಗ್ರಹಗಳನ್ನು ಮಾಡಿಕೊಳ್ಳುತ್ತಾರೆ. ಅಕ್ಕಸಾಲಿಗರು ಬೆಳ್ಳಿಯಿಂದ ವಿಗ್ರಹಗಳನ್ನು ಮಾಡುವರು. ತಾವು ಮಾಡಿದ ಮೂರ್ತಿಗಳೊಂದಿಗೆ ಮಾತನಾಡುವರು. ಆ ವಿಗ್ರಹಗಳಿಗೆ ಯಜ್ಞವನ್ನರ್ಪಿಸುವರು. ಬಂಗಾರದ ಬಸವನ ವಿಗ್ರಹಕ್ಕೆ ಮುದ್ದು ಕೊಡುವರು.


ಆದರೆ ಯಾಕೋಬ್ಯರ ದೇವರು ಆ ವಿಗ್ರಹಗಳಂತಲ್ಲ. ಆತನು ಸಮಸ್ತವನ್ನೂ ನಿರ್ಮಿಸಿದಾತನಾಗಿದ್ದಾನೆ. ಇಸ್ರೇಲು ಆತನ ಸ್ವಾಸ್ತ್ಯವಾದ ಜನಾಂಗ. “ಸರ್ವಶಕ್ತನಾದ ಯೆಹೋವ” ಎಂಬುದು ಆತನ ನಾಮಧೇಯ.


ಯೆಹೋವನು ಯಾಕೋಬನನ್ನು ಆರಿಸಿಕೊಂಡನು. ಇಸ್ರೇಲ್, ಆತನಿಗೆ ಸೇರಿದ್ದು.


ಎಲೀಯನೇ, ಇಸ್ರೇಲಿನಲ್ಲಿ ನಂಬಿಗಸ್ಥನಾದ ವ್ಯಕ್ತಿಯು ನೀನೊಬ್ಬನು ಮಾತ್ರ ಅಲ್ಲ. ಆ ದುಷ್ಟಜನರು ಅನೇಕ ಜನರನ್ನು ಕೊಲ್ಲುತ್ತಾರೆ. ಆದರೂ, ಅದಾದ ನಂತರ, ಬಾಳನಿಗೆ ಎಂದೆಂದೂ ಬಾಗಿ ನಮಸ್ಕರಿಸದಿರುವ ಏಳು ಸಾವಿರ ಜನರು ಇನ್ನೂ ಇಸ್ರೇಲಿನಲ್ಲಿ ವಾಸಮಾಡುತ್ತಿದ್ದಾರೆ! ಬಾಳನ ವಿಗ್ರಹಕ್ಕೆ ಎಂದೂ ಮುದ್ದಿಡದ ಆ ಏಳು ಸಾವಿರ ಜನರನ್ನು ನಾನು ಅಲ್ಲಿ ಉಳಿಸುವೆನು.”


ರಾಜನು ಬರ್ಜಿಲ್ಲೈಯನಿಗೆ ಮುದ್ದಿಟ್ಟು ಆಶೀರ್ವದಿಸಿದನು. ಬರ್ಜಿಲ್ಲೈಯನು ಮನೆಗೆ ಹಿಂದಿರುಗಿದನು. ರಾಜನು ತನ್ನ ಜನರೆಲ್ಲರೊಂದಿಗೆ ನದಿಯನ್ನು ದಾಟಿದನು.


ಹಿಂದಿನ ದಿನಗಳಲ್ಲಿ, ಸೌಲನು ರಾಜನಾಗಿದ್ದಾಗಲೂ ನಮ್ಮನ್ನು ಯುದ್ಧದಲ್ಲಿ ಮುನ್ನಡೆಸಿದವನು ನೀನೇ. ಯೆಹೋವನು ನಿನ್ನನ್ನು ಕುರಿತು, ‘ನೀನು ನನ್ನ ಜನರಾದ ಇಸ್ರೇಲರ ನಾಯಕನೂ ಪಾಲಕನೂ ಆಗಿರುವೆ’ ಎಂದು ಹೇಳಿದ್ದಾನೆ” ಎಂದರು.


ದಾವೀದನು ತನ್ನ ಜನರಿಗೆ, “ಸೌಲನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ ನನ್ನ ರಾಜನೂ ಆಗಿರುವುದರಿಂದ ನಾನು ಅವನ ವಿರುದ್ಧವಾಗಿ ಏನೂ ಮಾಡಬಾರದು!” ಎಂದು ಹೇಳಿದನು.


ಆದರೆ ಈಗ ನಿನ್ನ ಆಳ್ವಿಕೆಯು ಮುಂದುವರಿಯುವುದಿಲ್ಲ. ಯೆಹೋವನು ತನಗೆ ವಿಧೇಯನಾಗಿರುವಂತಹ ಮನುಷ್ಯನಿಗಾಗಿ ಹುಡುಕುತ್ತಿದ್ದನು. ಯೆಹೋವನಿಗೆ ಅಂತಹ ಮನುಷ್ಯನು ಸಿಕ್ಕಿದ್ದಾನೆ. ತನ್ನ ಜನರನ್ನು ಆಳಲು ಯೆಹೋವನು ಅವನನ್ನು ಹೊಸ ನಾಯಕನನ್ನಾಗಿ ನೇಮಿಸುತ್ತಾನೆ. ನೀನು ಯೆಹೋವನ ಆಜ್ಞೆಗೆ ವಿಧೇಯನಾಗಲಿಲ್ಲ. ಆದ್ದರಿಂದ ಯೆಹೋವನು ಹೊಸ ನಾಯಕನನ್ನು ಆರಿಸಿಕೊಳ್ಳುವನು” ಎಂದು ಹೇಳಿದನು.


ಆದರೆ ಸಮುವೇಲನ ಮಾತುಗಳಿಗೆ ಜನರು ಕಿವಿಗೊಡಲಿಲ್ಲ. ಅವರು, “ಇಲ್ಲ, ನಮ್ಮನ್ನಾಳಲು ಒಬ್ಬ ರಾಜನು ಇರಲೇ ಬೇಕು.


ಆದ್ದರಿಂದ ಜನರ ಮಾತಿಗೆ ಕಿವಿಗೊಟ್ಟು ಅವರು ಹೇಳಿದಂತೆ ಮಾಡು. ಆದರೆ ಅವರಿಗೆ ಎಚ್ಚರಿಕೆಕೊಡು. ರಾಜನಾದವನು ಜನರಿಗೆ ಏನು ಮಾಡುತ್ತಾನೆ ಎಂಬುದನ್ನು ಅವರಿಗೆ ತಿಳಿಸಿ ಹೇಳು! ರಾಜನಾದವನು ಜನರನ್ನು ಹೇಗೆ ಆಳುತ್ತಾನೆಂಬುದನ್ನೂ ಅವರಿಗೆ ತಿಳಿಸಿಕೊಡು” ಎಂದು ಹೇಳಿದನು.


ಯೆಹೋವನು ತನ್ನ ಶತ್ರುಗಳನ್ನು ನಾಶಗೊಳಿಸುವನು. ಮಹೋನ್ನತನಾದ ದೇವರು ಪರಲೋಕದಲ್ಲಿ ಜನರಿಗೆ ವಿರುದ್ಧವಾಗಿ ಗುಡುಗುವನು. ಯೆಹೋವನು ಬಹುದೂರದ ದೇಶಗಳಿಗೂ ತೀರ್ಪನ್ನು ಕೊಡುವನು. ಆತನು ತನ್ನ ರಾಜನಿಗೆ ಶಕ್ತಿಯನ್ನು ಕೊಡುವನು. ತಾನು ಅಭಿಷೇಕಿಸಿದ ರಾಜನನ್ನು ಬಲಗೊಳಿಸುವನು.”


“ಶ್ರೇಷ್ಠವಾದ ಸುಗಂಧದ್ರವ್ಯಗಳನ್ನು ಮಾಡಿಸು. ಹನ್ನೆರಡು ಪೌಂಡುಗಳಷ್ಟು ಅಚ್ಚ ರಕ್ತಬೋಳ, ಅದರ ಅರ್ಧದಷ್ಟು ಅಂದರೆ ಆರು ಪೌಂಡು ಸುವಾಸನೆಯುಳ್ಳ ದಾಲ್ಚಿನ್ನಿ, ಹನ್ನೆರಡು ಪೌಂಡುಗಳಷ್ಟು ಸುವಾಸನೆಯುಳ್ಳ ಬಜೆ,


ಸೌಲನೂ ಅವನ ಸೇವಕನೂ ಸಮುವೇಲನೂ ಪಟ್ಟಣದ ಅಂಚಿನಲ್ಲಿ ಒಟ್ಟಾಗಿ ನಡೆಯುತ್ತಿದ್ದಾಗ, ಸಮುವೇಲನು ಸೌಲನಿಗೆ, “ನಿನ್ನ ಸೇವಕನಿಗೆ ನಮ್ಮಿಂದ ಮುಂದೆ ಹೋಗಲು ತಿಳಿಸು. ನಾನು ದೇವರ ಸಂದೇಶವನ್ನು ನಿನಗೆ ತಿಳಿಸಬೇಕಾಗಿದೆ” ಎಂದು ಹೇಳಿದನು. ಆದಕಾರಣ ಸೇವಕನು ಅವರಿಂದ ಮುಂದೆ ನಡೆದನು.


ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲಿ ಕತ್ತೆಯನ್ನಾಗಲಿ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.


ಒಂದು ದಿನ ಸಮುವೇಲನು ಸೌಲನಿಗೆ, “ಯೆಹೋವನು ಇಸ್ರೇಲರ ಮೇಲೆ ನಿನ್ನನ್ನು ರಾಜನನ್ನಾಗಿ ಅಭಿಷೇಕಿಸಲು ನನ್ನನ್ನು ಕಳುಹಿಸಿದನು. ಈಗ ಯೆಹೋವನ ಸಂದೇಶವನ್ನು ಕೇಳು.


ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.


ಆದರೆ ದಾವೀದನು ಅಬೀಷೈಗೆ, “ಸೌಲನನ್ನು ಕೊಲ್ಲಬೇಡ! ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಿಗೆ ಯಾರೇ ಕೇಡುಮಾಡಿದರೂ ಅವರನ್ನು ದಂಡಿಸಲೇಬೇಕು!


ದಾವೀದನು ಆ ಯುವಕನಿಗೆ, “ಯೆಹೋವನಿಂದ ಆರಿಸಲ್ಪಟ್ಟ ರಾಜನನ್ನು ಕೊಲ್ಲಲು ನೀನು ಹೆದರಲಿಲ್ಲವೇಕೆ?” ಎಂದು ಕೇಳಿದನು.


ಅಲ್ಲಿ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಅವನನ್ನು ಇಸ್ರೇಲಿನ ನೂತನ ರಾಜನನ್ನಾಗಿ ಅಭಿಷೇಕಿಸಲಿ. ಅನಂತರ ತುತ್ತೂರಿಯನ್ನು ಊದಿರಿ; ಎಲ್ಲರೂ ‘ರಾಜನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಆರ್ಭಟಿಸಲಿ.


ನಿನ್ನ ಚಿನ್ನ, ಬೆಳ್ಳಿ, ಆಭರಣ, ನಾರುಮಡಿ, ರೇಷ್ಮೆ ಮತ್ತು ಕಸೂತಿ ಹಾಕಿದ ಬಟ್ಟೆಗಳಲ್ಲಿ ನೀನು ಸುಂದರಳಾಗಿ ಕಾಣಿಸುತ್ತಿದ್ದೆ. ನೀನು ಉತ್ತಮವಾದ ಆಹಾರವನ್ನು ಊಟ ಮಾಡಿದೆ: ಉತ್ತಮ ಗೋಧಿಹಿಟ್ಟು, ಜೇನುತುಪ್ಪ ಮತ್ತು ಆಲೀವ್ ಎಣ್ಣೆ. ನೀನು ಅತ್ಯಂತ ಸುಂದರಿಯಾದೆ. ಮತ್ತು ನೀನು ರಾಣಿಯಾಗಿದ್ದೆ.


ಸಮುವೇಲನು, “ನೀನು ಮೊದಲು ನಿನ್ನನ್ನು ಅಲ್ಪನೆಂದು ತಿಳಿದಿದ್ದೆ. ಯೆಹೋವನು ನಿನ್ನನ್ನು ಇಸ್ರೇಲರಿಗೆ ರಾಜನನ್ನಾಗಿ ಆರಿಸಿಕೊಂಡದ್ದರಿಂದ ಇಸ್ರೇಲ್ ಕುಲಗಳಿಗೆ ನಾಯಕನಾದೆ.


ನಮ್ಮ ಪಟ್ಟಣವು ಇಸ್ರೇಲರಲ್ಲಿ ಶಾಂತಿಯಿಂದಲೂ ರಾಜನಿಷ್ಠೆಯಿಂದಲೂ ಇದೆ. ಈ ಕಾರಣದಿಂದ ಈ ಪಟ್ಟಣವು ಇಸ್ರೇಲ್ ಪಟ್ಟಣಗಳಲ್ಲಿ ತಾಯಿ ಎನಿಸಿಕೊಂಡಿದೆ. ಇಂಥ ಪಟ್ಟಣವನ್ನು ನೀನು ನಾಶಮಾಡುವುದು ಸರಿಯೋ?” ಎಂದು ಕೇಳಿದಳು.


ಆ ಅಧಿಕಾರಿಗಳು, “ಇಲ್ಲ! ನಮಗೆ ನಿಜವನ್ನು ಹೇಳು. ಅವನು ಹೇಳಿದುದೇನು?” ಎಂದು ಕೇಳಿದರು. ಆ ತರುಣ ಪ್ರವಾದಿಯು ತಿಳಿಸಿದ್ದ ಸಂಗತಿಗಳನ್ನು ಯೇಹುವು ಆ ಅಧಿಕಾರಿಗಳಿಗೆ ಹೇಳಿದನು. ಯೇಹುವು ಅವರಿಗೆ, “ಅವನು ಹೇಳಿದ್ದೇನೆಂದರೆ, ಯೆಹೋವನು ಹೀಗೆನ್ನುವನು: ಇಸ್ರೇಲಿನ ನೂತನ ರಾಜನನ್ನಾಗಿ ನಿನ್ನನ್ನು ನಾನು ಅಭಿಷೇಕಿಸಿದ್ದೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು