Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:11 - ಪರಿಶುದ್ದ ಬೈಬಲ್‌

11 ಸೌಲನನ್ನು ಮೊದಲು ನೋಡಿದ್ದ ಜನರು, ಪ್ರವಾದಿಗಳ ಜೊತೆಯಲ್ಲಿ ಸೌಲನು ಪ್ರವಾದಿಸುತ್ತಿರುವುದನ್ನು ಕಂಡರು. ಈ ಜನರು, “ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನಾದನೇ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಪರವಶನಾಗಿ ಮಾತನಾಡುವುದನ್ನು ಅವನ ಪರಿಚಿತರು ಕಂಡು ತಮ್ಮ ತಮ್ಮೊಳಗೆ, “ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನೋ?” ಎಂದು ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವನು ಪರವಶನಾಗಿ ಮಾತಾಡುವುದನ್ನು ಪರಿಚಿತರು ಕಂಡು ತಮ್ಮತಮ್ಮೊಳಗೆ, “ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನೆ?” ಎಂದು ಮಾತಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ಪರವಶನಾಗಿ ಮಾತಾಡುವದನ್ನು ಗುರುತಿನವರು ಕಂಡು ತಮ್ಮ ತಮ್ಮೊಳಗೆ - ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿದ್ದಾನೋ ಎಂದು ಮಾತಾಡಿಕೊಳ್ಳುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಮುಂಚೆ ಅವನನ್ನು ತಿಳಿದವರೆಲ್ಲರು, ಅವನು ಪ್ರವಾದಿಗಳ ಸಂಗಡವಿದ್ದು ಪ್ರವಾದಿಸುವುದನ್ನು ಕಂಡಾಗ, ಅವರು ಒಬ್ಬರ ಸಂಗಡ ಒಬ್ಬರು, “ಕೀಷನ ಮಗನಿಗೆ ಆದದ್ದೇನು? ಸೌಲನೂ ಸಹ ಪ್ರವಾದಿಗಳಲ್ಲಿ ಇದ್ದಾನೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:11
10 ತಿಳಿವುಗಳ ಹೋಲಿಕೆ  

ಯೆಹೂದ್ಯರಿಗೆ ಆಶ್ಚರ್ಯವಾಯಿತು. “ಈ ಮನುಷ್ಯನು ಎಂದೂ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಲಿಲ್ಲ. ಇವನು ಇಷ್ಟೆಲ್ಲವನ್ನೂ ಹೇಗೆ ಕಲಿತನು?” ಎಂದು ವಿಚಾರಿಸತೊಡಗಿದರು.


ನಂತರ ಸೌಲನು ತಾನು ಧರಿಸಿದ್ದ ಬಟ್ಟೆಗಳನ್ನು ತೆಗೆದುಹಾಕಿದನು. ಸಮುವೇಲನ ಎದುರಿನಲ್ಲಿ ಸೌಲನೂ ಸಹ ಪ್ರವಾದಿಸುತ್ತಿದ್ದನು. ಅಂದು ಹಗಲು ರಾತ್ರಿಯೆಲ್ಲ ಸೌಲನು ಬೆತ್ತಲೆಯಾಗಿ ಅಲ್ಲಿಯೇ ಮಲಗಿದ್ದನು. ಆದ್ದರಿಂದಲೇ ಜನರು, “ಸೌಲನೂ ಪ್ರವಾದಿಗಳಲ್ಲಿ ಒಬ್ಬನೇ?” ಎಂದು ಹೇಳುತ್ತಾರೆ.


ಸೌಲನ ಮಾತನ್ನು ಕೇಳಿದ ಜನರೆಲ್ಲರೂ ವಿಸ್ಮಯಗೊಂಡು, “ಜೆರುಸಲೇಮಿನಲ್ಲಿದ್ದವನು ಈ ಮನುಷ್ಯನೇ. ಈ ಹೆಸರಿನಲ್ಲಿ (ಯೇಸುವಿನ) ನಂಬಿಕೆ ಇಡುವ ಜನರನ್ನು ನಾಶಮಾಡಲು ಇವನು ಪ್ರಯತ್ನಿಸುತ್ತಿದ್ದನು! ಯೇಸುವಿನ ಶಿಷ್ಯರನ್ನು ಬಂಧಿಸಿ ಜೆರುಸಲೇಮಿನಲ್ಲಿರುವ ಮಹಾಯಾಜಕರ ಬಳಿಗೆ ಕೊಂಡೊಯ್ಯಲು ಇವನು ಇಲ್ಲಿಗೂ ಬಂದಿದ್ದಾನೆ” ಎಂದು ಹೇಳಿದರು.


ಪೇತ್ರ ಮತ್ತು ಯೋಹಾನರಿಗೆ ವಿಶೇಷವಾದ ಯಾವ ತರಬೇತಿಯಾಗಲಿ ವಿದ್ಯೆಯಾಗಲಿ ಇಲ್ಲವೆಂಬುದು ಯೆಹೂದ್ಯನಾಯಕರಿಗೆ ಗೊತ್ತಿತ್ತು. ಅಲ್ಲದೆ ಅವರು ಹೆದರದೆ ಮಾತಾಡುವುದನ್ನು ಸಹ ನಾಯಕರು ಗಮನಿಸಿದರು. ಆದ್ದರಿಂದ ಆ ನಾಯಕರಿಗೆ ಬಹಳ ಆಶ್ಚರ್ಯವಾಯಿತು. ಪೇತ್ರ ಮತ್ತು ಯೋಹಾನರು ಯೋಸುವಿನೊಂದಿಗೆ ಇದ್ದರೆಂಬುದನ್ನು ಅವರು ಆ ಬಳಿಕ ಗ್ರಹಿಸಿಕೊಂಡರು.


ಅದಕ್ಕೆ ಅಮೋಸನು ಅಮಚ್ಯನಿಗೆ, “ಪ್ರವಾದಿಸುವದು ನನ್ನ ಕೆಲಸವಲ್ಲ. ಅಲ್ಲದೆ ನಾನು ಪ್ರವಾದಿಗಳ ಕುಟುಂಬಕ್ಕೂ ಸೇರಿದವನಲ್ಲ. ನಾನು ದನ ಮೇಯಿಸುವವನೂ, ಅತ್ತಿ ಮರಗಳನ್ನು ಹತ್ತಿ ಹಣ್ಣು ಕೀಳುವವನೂ ಆಗಿದ್ದೇನೆ.


ನಾನು ಕುರಿಕಾಯುತ್ತಿರುವಾಗ ಯೆಹೋವನು ನನ್ನನ್ನು ಕುರಿಗಳ ಹಿಂದೆ ಹೋಗಬೇಡ ಎಂದು ಕರೆದನು. ಆತನು ನನಗೆ, ‘ನನ್ನ ಜನರಾದ ಇಸ್ರೇಲರ ಬಳಿಗೆ ಹೋಗಿ ಪ್ರವಾದಿಸು’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು