1 ಸಮುಯೇಲ 10:16 - ಪರಿಶುದ್ದ ಬೈಬಲ್16 ಸೌಲನು ಅವನಿಗೆ, “ಕತ್ತೆಗಳು ಈಗಾಗಲೇ ಸಿಕ್ಕಿವೆ ಎಂದು ಸಮುವೇಲನು ಹೇಳಿದನು” ಅಂದನು. ಸೌಲನು ತನ್ನ ಚಿಕ್ಕಪ್ಪನಿಗೆ ಎಲ್ಲವನ್ನೂ ತಿಳಿಸಲಿಲ್ಲ. ರಾಜ್ಯದ ಬಗ್ಗೆ ಸಮುವೇಲನು ಹೇಳಿದ ಮಾತುಗಳನ್ನು ಸೌಲನು ತನ್ನ ಚಿಕ್ಕಪ್ಪನಿಗೆ ತಿಳಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಸೌಲನು, “ಕತ್ತೆಗಳು ಸಿಕ್ಕಿವೇ ಎಂದು ತಿಳಿಸಿದನು” ಎಂಬುದಾಗಿ ಹೇಳಿದನೇ ಹೊರತು ಸಮುವೇಲನು ಹೇಳಿದ ರಾಜ್ಯಭಾರದ ಮಾತನ್ನು ತಿಳಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸೌಲನು, “ಕತ್ತೆಗಳು ಸಿಕ್ಕಿದವೆಂದು ತಿಳಿಸಿದನು,” ಎಂಬುದಾಗಿ ಹೇಳಿದನೇ ಹೊರತು ಸಮುವೇಲನು ಹೇಳಿದ ಆ ರಾಜ್ಯಭಾರದ ಮಾತನ್ನು ತಿಳಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಕತ್ತೆಗಳು ಸಿಕ್ಕಿದವೆಂದು ತಿಳಿಸಿದನು ಎಂಬದಾಗಿ ಹೇಳಿದನೇ ಹೊರತು ಅವನು ಹೇಳಿದ ರಾಜ್ಯದ ಮಾತನ್ನು ತಿಳಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಸೌಲನು ತನ್ನ ಚಿಕ್ಕಪ್ಪನಿಗೆ, “ಕತ್ತೆಗಳು ದೊರಕಿದವೆಂದು ಅವನು ನಮಗೆ ಸ್ಪಷ್ಟವಾಗಿ ತಿಳಿಸಿದನು,” ಎಂದನು. ಆದರೆ ಅವನು ಸಮುಯೇಲನು ಹೇಳಿದ ರಾಜ್ಯಭಾರದ ಮಾತನ್ನು ಅವನಿಗೆ ತಿಳಿಸಲಿಲ್ಲ. ಅಧ್ಯಾಯವನ್ನು ನೋಡಿ |