18 ಸಮುವೇಲನು ಅವರಿಗೆ, “ಇಸ್ರೇಲರ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಾನು ಇಸ್ರೇಲರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದೆನು. ನಾನು ಈಜಿಪ್ಟಿನವರ ಆಳ್ವಿಕೆಯಿಂದ ಮತ್ತು ನಿಮಗೆ ಹಾನಿಮಾಡಲು ಪ್ರಯತ್ನಿಸಿದ ಇತರ ರಾಜ್ಯಗಳಿಂದ ರಕ್ಷಿಸಿದೆನು’ ಎನ್ನುತ್ತಾನೆ.
18 ಆತನು ಅವರಿಗೆ, ಇಸ್ರಾಯೇಲ್ ದೇವರಾದ ಯೆಹೋವನು ಹೇಳುವುದನ್ನು ಕೇಳಿರಿ, “ನೀವು ಐಗುಪ್ತರ ಕೈಗೆ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಅವರ ದೇಶದಿಂದ ಬಿಡಿಸಿದವನೂ, ಬಾಧಿಸುತ್ತಿದ್ದ ಬೇರೆ ಎಲ್ಲಾ ಜನಾಂಗಗಳಿಂದ ನಿಮ್ಮನ್ನು ರಕ್ಷಿಸಿದವನೂ ನಾನೇ.
18 ಅವರಿಗೆ, “ಇಸ್ರಯೇಲ್ ದೇವರಾದ ಸರ್ವೇಶ್ವರ ಹೇಳುವುದನ್ನು ಕೇಳಿರಿ: ‘ನೀವು ಈಜಿಪ್ಟಿನವರ ಕೈಯಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಅವರ ದೇಶದಿಂದ ಬಿಡಿಸಿದವನು ಹಾಗು ಬಾಧಿಸುತ್ತಿದ್ದ ಬೇರೆ ಎಲ್ಲಾ ಜನಾಂಗಗಳಿಂದ ನಿಮ್ಮನ್ನು ರಕ್ಷಿಸಿದವನು ನಾನೇ.
ಯೆಹೋವನ ದೂತನು ಗಿಲ್ಗಾಲ್ ನಗರದಿಂದ ಬೋಕೀಮ್ ನಗರದವರೆಗೆ ಹೋದನು. ಆ ದೂತನು ಇಸ್ರೇಲರಿಗೆ ಯೆಹೋವನ ಒಂದು ಸಂದೇಶವನ್ನು ತಿಳಿಸಿದನು. ಆ ಸಂದೇಶವು ಹೀಗೆದೆ: “ನಾನು ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ಹೊರಗೆತಂದೆ. ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ‘ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದಿಗೂ ಮುರಿಯುವುದಿಲ್ಲ.
“ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ತುತ್ತೂರಿಗಳನ್ನು ಆರ್ಭಟ ಸ್ವರದಲ್ಲಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಮಾಡಿಕೊಂಡು ಶತ್ರುಗಳಿಂದ ನಿಮ್ಮನ್ನು ರಕ್ಷಿಸುವನು.
“ಯಾಕೋಬನು ಈಜಿಪ್ಟಿಗೆ ಹೋದನು. ತರುವಾಯ, ಈಜಿಪ್ಟಿನವರು ಅವನ ವಂಶದವರಿಗೆ ಜೀವನವನ್ನು ಕಠಿಣಗೊಳಿಸಿದರು. ಆದ್ದರಿಂದ ಅವರು ಯೆಹೋವನಲ್ಲಿ ಸಹಾಯಕ್ಕಾಗಿ ಮೊರೆಯಿಟ್ಟರು. ಯೆಹೋವನು ಮೋಶೆ ಆರೋನರನ್ನು ಕಳುಹಿಸಿದನು. ಮೋಶೆ ಆರೋನರು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದು ಇಲ್ಲಿ ನೆಲೆಗೊಳಿಸಿದರು.
ನಾನು ಅವರ ದೇವರಾದ ಯೆಹೋವನಾಗಿದ್ದೇನೆಂದು ಜನರು ತಿಳಿದುಕೊಳ್ಳುವರು. ಅವರ ಮಧ್ಯದಲ್ಲಿ ವಾಸಮಾಡುವುದಕ್ಕಾಗಿ ಈಜಿಪ್ಟಿನಿಂದ ಅವರನ್ನು ಕರೆದುಕೊಂಡು ಬಂದವನು ನಾನೇ ಎಂದು ಅವರು ತಿಳಿದುಕೊಳ್ಳುವರು. ನಾನು ಅವರ ದೇವರಾಗಿರುವ ಯೆಹೋವನೇ.”