1 ಸಮುಯೇಲ 10:20 - ಪರಿಶುದ್ದ ಬೈಬಲ್20 ಸಮುವೇಲನು ಇಸ್ರೇಲಿನ ಎಲ್ಲಾ ಕುಲದವರನ್ನು ಹತ್ತಿರಕ್ಕೆ ಕರೆದನು. ನಂತರ ಸಮುವೇಲನು ಹೊಸ ರಾಜನನ್ನು ಆರಿಸಲು ಚೀಟು ಹಾಕತೊಡಗಿದನು. ಮೊದಲನೆಯದಾಗಿ, ಬೆನ್ಯಾಮೀನ್ ಕುಲವು ಆರಿಸಲ್ಪಟ್ಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಸಮುವೇಲನು ಇಸ್ರಾಯೇಲ್ಯರ ಎಲ್ಲಾ ಕುಲಗಳನ್ನು ಸಮೀಪಕ್ಕೆ ಕರೆದಾಗ ಬೆನ್ಯಾಮೀನ್ ಕುಲಕ್ಕೆ ಚೀಟುಬಿದ್ದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಹೀಗೆ ಸಮುವೇಲನು ಇಸ್ರಯೇಲರ ಎಲ್ಲಾ ಕುಲಗಳನ್ನು ಸಮೀಪಕ್ಕೆ ಕರೆದಾಗ ಬೆನ್ಯಾಮೀನ್ ಕುಲಕ್ಕೆ ಚೀಟು ಬಿದ್ದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಸಮುವೇಲನು ಇಸ್ರಾಯೇಲ್ಯರ ಎಲ್ಲಾ ಕುಲಗಳನ್ನು ಸಮೀಪಕ್ಕೆ ಕರೆದಾಗ ಬೆನ್ಯಾಮೀನ್ ಕುಲಕ್ಕೆ ಚೀಟುಬಿದ್ದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಸಮುಯೇಲನು ಇಸ್ರಾಯೇಲಿನ ಗೋತ್ರಗಳನ್ನೆಲ್ಲಾ ಸಮೀಪಕ್ಕೆ ಬರಮಾಡಿದಾಗ, ಬೆನ್ಯಾಮೀನನ ಗೋತ್ರಕ್ಕೆ ಚೀಟು ಬಿದ್ದಿತು. ಅಧ್ಯಾಯವನ್ನು ನೋಡಿ |
ಬೆನ್ಯಾಮೀನ್ ಕುಲದಲ್ಲಿ ಒಂದು ಕುಟುಂಬವನ್ನು ಆರಿಸಿಕೊಳ್ಳುವುದಕ್ಕಾಗಿ ಮತ್ತೆ ಚೀಟು ಹಾಕಲಾಯಿತು. ಅದರಲ್ಲಿ ಮಟ್ರಿಯ ಕುಟುಂಬವು ಆರಿಸಲ್ಪಟ್ಟಿತು. ನಂತರ ಸಮುವೇಲನು ಮಟ್ರಿಯ ಕುಟುಂಬದ ಪ್ರತಿಯೊಬ್ಬನನ್ನು ಸಮೀಪಕ್ಕೆ ಕರೆದು ಅವರಲ್ಲಿ ಒಬ್ಬನನ್ನು ಆರಿಸಿಕೊಳ್ಳುವುದಕ್ಕಾಗಿ ಚೀಟು ಹಾಕಿದನು. ಅದರಲ್ಲಿ ಕೀಷನ ಮಗನಾದ ಸೌಲನು ಆರಿಸಲ್ಪಟ್ಟನು. ಆದರೆ ಜನರು ಸೌಲನನ್ನು ಹುಡುಕಿದಾಗ ಅವರಿಗೆ ಅವನು ಸಿಕ್ಕಲಿಲ್ಲ.