1 ಸಮುಯೇಲ 10:24 - ಪರಿಶುದ್ದ ಬೈಬಲ್24 ಸಮುವೇಲನು ಜನರೆಲ್ಲರಿಗೆ, “ಯೆಹೋವನು ಆರಿಸಿಕೊಂಡಿರುವ ಮನುಷ್ಯನನ್ನು ನೋಡಿದಿರಾ! ಸರ್ವಜನರಲ್ಲಿಯೂ ಸೌಲನಂತಹ ಮನುಷ್ಯನು ಇನ್ನೊಬ್ಬನಿಲ್ಲ!” ಎಂದು ಹೇಳಿದನು. ಆಗ ಜನರೆಲ್ಲ, “ರಾಜನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಗ ಸಮುವೇಲನು ಎಲ್ಲಾ ಜನರಿಗೆ, “ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ” ಎನ್ನಲು ಜನರೆಲ್ಲರೂ, “ಅರಸನು ಚಿರಂಜೀವಿಯಾಗಿರಲಿ” ಎಂದು ಘೋಷಣೆಗಳನ್ನು ಕೂಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆಗ ಸಮುವೇಲನು ಜನರೆಲ್ಲರಿಗೆ, “ನೋಡಿ, ಸರ್ವೇಶ್ವರನಿಂದ ಆಯ್ಕೆಯಾದವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ,” ಎಂದನು. ಜನರೆಲ್ಲರೂ, “ಅರಸನಿಗೆ ಜಯವಾಗಲಿ!” ಎಂದು ಘೋಷಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಗ ಸಮುವೇಲನು ಎಲ್ಲಾ ಜನರಿಗೆ - ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ ಎನ್ನಲು ಜನರೆಲ್ಲರೂ - ಅರಸನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಸಮುಯೇಲನು, “ಯೆಹೋವ ದೇವರು ಆಯ್ದುಕೊಂಡವನನ್ನು ನೋಡಿರಿ, ಸಮಸ್ತ ಜನರಿಗೆ ಎಲ್ಲಾ ಜನರಲ್ಲಿ ಇವನಿಗೆ ಸಮಾನವಾದವನು ಯಾವನೂ ಇಲ್ಲವಲ್ಲ,” ಎಂದನು. ಜನರೆಲ್ಲರು ಆರ್ಭಟಿಸಿ, “ಅರಸ ಬಾಳಲಿ,” ಎಂದರು. ಅಧ್ಯಾಯವನ್ನು ನೋಡಿ |