1 ಸಮುಯೇಲ 10:26 - ಪರಿಶುದ್ದ ಬೈಬಲ್26 ಸೌಲನು ಸಹ ಗಿಬೆಯದ ತನ್ನ ಮನೆಗೆ ಹೋದನು. ಕೆಲವು ಶೂರರು ದೈವಪ್ರೇರಣೆಯಿಂದ ಸೌಲನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಸೌಲನೂ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು; ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲಿ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸೌಲನೂ ಗಿಬೆಯದಲ್ಲಿದ್ದ ತನ್ನ ಮನೆಗೆ ಹೋದನು. ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲೇ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಸೌಲನೂ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು; ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲಿ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಸೌಲನು ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದರೋ, ಅವರ ಒಂದು ಗುಂಪು ಅವನ ಸಂಗಡ ಹೋಯಿತು. ಅಧ್ಯಾಯವನ್ನು ನೋಡಿ |
ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.