1 ಸಮುಯೇಲ 10:27 - ಪರಿಶುದ್ದ ಬೈಬಲ್27 ಆದರೆ ಕೆಲವು ಕಿರುಕುಳಕಾರರು, “ಈ ಮನುಷ್ಯನು ಹೇಗೆ ತಾನೆ ನಮ್ಮನ್ನು ರಕ್ಷಿಸುವನು?” ಎಂದು ಹೇಳಿದರು. ಅವರು ಸೌಲನ ಬಗ್ಗೆ ಕೆಟ್ಟಮಾತುಗಳನ್ನು ಆಡಿದರು; ಅವನನ್ನು ತಿರಸ್ಕರಿಸಿ, ಕಾಣಿಕೆಗಳನ್ನು ತಂದುಕೊಡಲಿಲ್ಲ. ಆದರೆ ಸೌಲನು ಏನೂ ಮಾತನಾಡಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು, ಗಾದ್ ಮತ್ತು ರೂಬೆನ್ ಕುಲದವರಿಗೆ ಕಿರುಕುಳಕೊಡುತ್ತಿದ್ದನು. ನಾಹಾಷನು ಪ್ರತಿ ಮನುಷ್ಯನ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ನಾಹಾಷನು ಅವರಿಗೆ ಸಹಾಯಮಾಡಲು ಯಾರಿಗೂ ಅವಕಾಶಕೊಡುತ್ತಿರಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು ಜೋರ್ಡನ್ ನದಿಯ ಪೂರ್ವ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲ ಇಸ್ರೇಲರ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ಆದ್ದರಿಂದ ಅಮ್ಮೋನಿಯರಿಂದ ಏಳು ಸಾವಿರ ಮಂದಿ ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಓಡಿಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಕೆಲವು ಮಂದಿ ಅಯೋಗ್ಯರು, “ಇವನು ನಮ್ಮನ್ನು ರಕ್ಷಿಸುವನೋ?” ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಕೆಲವು ಮಂದಿ ಪುಂಡುಪೋಕರು, “ಇವನೇನೋ ನಮ್ಮನ್ನು ರಕ್ಷಿಸುವವನು!” ಎಂದು ತಾತ್ಸಾರಮಾಡಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಕೆಲವು ಮಂದಿ ಕಾಕಪೋಕರು - ಇವನೋ ನಮ್ಮನ್ನು ರಕ್ಷಿಸುವವನು ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದರೆ ಕೆಲವು ಪುಂಡಪೋಕರಿಗಳು, “ಇವನು ನಮ್ಮನ್ನು ರಕ್ಷಿಸುವುದೇನು?” ಎಂದು ಅವನನ್ನು ತಿರಸ್ಕರಿಸಿದರು. ಅವರು ಅವನಿಗೆ ಕಾಣಿಕೆಯನ್ನು ತೆಗೆದುಕೊಂಡು ಬರಲಿಲ್ಲ. ಅವನು ಕೇಳದ ಹಾಗೆ ಇದ್ದನು. ಅಧ್ಯಾಯವನ್ನು ನೋಡಿ |
“ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ.