1 ಸಮುಯೇಲ 10:3 - ಪರಿಶುದ್ದ ಬೈಬಲ್3 ಸಮುವೇಲನು, “ನೀನು ಅಲ್ಲಿಂದ ಮುಂದೆ ಹೋಗುತ್ತಾ ತಾಬೋರಿನ ಹತ್ತಿರವಿರುವ ಒಂದು ದೊಡ್ಡ ಓಕ್ ವೃಕ್ಷದ ಬಳಿಗೆ ಬರುವೆ. ಅಲ್ಲಿ ನಿನ್ನನ್ನು ಮೂರು ಜನರು ಭೇಟಿಯಾಗುತ್ತಾರೆ. ಆ ಮೂರು ಜನರು ದೇವರ ಆರಾಧನೆಗಾಗಿ ಬೇತೇಲಿಗೆ ಹೋಗುತ್ತಿರುತ್ತಾರೆ. ಮೊದಲನೆಯವನು ಮೂರು ಮರಿ ಹೋತಗಳನ್ನೂ ಎರಡನೆಯವನು ಮೂರು ರೊಟ್ಟಿಗಳನ್ನೂ ಮೂರನೆಯವನು ಒಂದು ಸೀಸೆ ದ್ರಾಕ್ಷಾರಸವನ್ನೂ ತೆಗೆದುಕೊಂಡು ಹೋಗುತ್ತಿರುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನ್ನನ್ನು ಎದುರುಗೊಳ್ಳುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನಗೆದುರಾಗುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡು ಇರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನಗೆದುರಾಗುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ನೀನು ಆ ಸ್ಥಳವನ್ನು ಬಿಟ್ಟು, ಆ ಕಡೆ ದಾಟಿ, ತಾಬೋರಿನ ಹತ್ತಿರವಿರುವ ಅಲ್ಲೋನ್ ವೃಕ್ಷದ ಬಳಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವೆ. ಅಧ್ಯಾಯವನ್ನು ನೋಡಿ |
ದೆಬೋರಳು ತನ್ನನ್ನು ಬಂದು ಕಾಣಬೇಕೆಂದು ಬಾರಾಕನೆಂಬ ವ್ಯಕ್ತಿಗೆ ಹೇಳಿ ಕಳುಹಿಸಿದಳು. ಬಾರಾಕನು ಅಬೀನೋವಮನ ಮಗ. ಬಾರಾಕನು ನಫ್ತಾಲಿ ಪ್ರದೇಶದ ಕೆದೆಷ್ ಎಂಬ ಊರಲ್ಲಿ ವಾಸಮಾಡುತ್ತಿದ್ದನು. ದೆಬೋರಳು ಬಾರಾಕನಿಗೆ, “ಇಸ್ರೇಲಿನ ದೇವರಾದ ಯೆಹೋವನು, ‘ನೀನು ಹೋಗಿ ನಫ್ತಾಲಿ ಮತ್ತು ಜೆಬುಲೂನ್ ಕುಲಗಳವರ ಹತ್ತು ಸಾವಿರ ಜನರನ್ನು ಸೇರಿಸಿ ಅವರನ್ನು ತಾಬೋರ್ ಬೆಟ್ಟಕ್ಕೆ ಕರೆದುಕೊಂಡು ಹೋಗು.