Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:5 - ಪರಿಶುದ್ದ ಬೈಬಲ್‌

5 ನಂತರ ನೀನು ಗಿಬಿಯತ್ ಎಲೋಹಿಮಿಗೆ ಹೋಗುವೆ. ಅಲ್ಲಿ ಒಂದು ಫಿಲಿಷ್ಟಿಯರ ಕೋಟೆಯಿದೆ. ನೀನು ಆ ಪಟ್ಟಣಕ್ಕೆ ಬಂದಾಗ, ಪ್ರವಾದಿಗಳ ಗುಂಪೊಂದು ಹೊರಬರುತ್ತದೆ. ಈ ಪ್ರವಾದಿಗಳು ಆರಾಧನಾ ಸ್ಥಳದಿಂದ ಇಳಿದು ಬರುತ್ತಾರೆ, ಅವರು ಪ್ರವಾದಿಸುತ್ತಿರುತ್ತಾರೆ. ಅವರು ಸ್ವರಮಂಡಲವನ್ನೂ ದಮ್ಮಡಿಯನ್ನೂ ಕೊಳಲನ್ನೂ ಕಿನ್ನರಿಯನ್ನೂ ನುಡಿಸುತ್ತಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಲ್ಲಿಂದ ಫಿಲಿಷ್ಟಿಯರ ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಲ್ಲಿಂದ ದೇವಗಿರಿಯನ್ನು ಮುಟ್ಟಿದಾಗ ಫಿಲಿಷ್ಟಿಯರ ದಂಡುಪ್ರದೇಶವನ್ನು ಕಾಣುವೆ; ಮುಂಗಡೆಯಲ್ಲಿ ಸ್ವರಮಂಡಲ, ತಮ್ಮಟೆ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಗಳ ಒಂದು ಗುಂಪನ್ನು ಕಾಣುವೆ. ಅವರು ಪರವಶರಾಗಿ ಪ್ರವಾದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಲ್ಲಿಂದ ಫಿಲಿಷ್ಟಿಯರ ಠಾಣವಿರುವ ದೇವಗಿರಿಯನ್ನು ಮುಟ್ಟಿದಾಗ ಮುಂಗಡೆಯಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ತರುವಾಯ ಫಿಲಿಷ್ಟಿಯರ ತಾಣವಿರುವ ದೇವರ ಗಿಬೆಯ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣಕ್ಕೆ ಪ್ರವೇಶಿಸುವಾಗ, ನಿನಗೆದುರಾಗಿ ವೀಣೆ, ದಮ್ಮಡಿ, ಕೊಳಲು, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವುದು. ಅವರು ಪ್ರವಾದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:5
27 ತಿಳಿವುಗಳ ಹೋಲಿಕೆ  

ಆದರೆ ಈಗ ಕಿನ್ನರಿ ಬಾರಿಸುವ ಒಬ್ಬನನ್ನು ನನ್ನ ಬಳಿಗೆ ಕರೆತನ್ನಿ” ಎಂದು ಹೇಳಿದನು. ಅವನು ಕಿನ್ನರಿಯನ್ನು ಬಾರಿಸಿದಾಗ ಯೆಹೋವನ ಶಕ್ತಿಯು ಎಲೀಷನ ಮೇಲೆ ಬಂದಿತು.


ದಾವೀದನನ್ನು ಬಂಧಿಸಿ ತರಲು ಸೌಲನು ಜನರನ್ನು ಕಳುಹಿಸಿದನು. ಆದರೆ ಆ ಜನರು ಪಾಳೆಯಕ್ಕೆ ಬರುವಷ್ಟರಲ್ಲಿ ಪ್ರವಾದಿಗಳು ಅಲ್ಲಿ ಪ್ರವಾದಿಸುತ್ತಿದ್ದರು. ಸಮುವೇಲನು ಅವರ ನಾಯಕನಾಗಿ ನಿಂತಿದ್ದನು. ದೇವರಾತ್ಮವು ಸಂದೇಶಕರ ಮೇಲೆ ಬಂದದ್ದರಿಂದ ಅವರೂ ಪ್ರವಾದಿಸಲಾರಂಭಿಸಿದರು.


ಯೋನಾತಾನನು ಫಿಲಿಷ್ಟಿಯರನ್ನು ಅವರ ಶಿಬಿರವಿದ್ದ ಗೆಬದಲ್ಲಿ ಸೋಲಿಸಿದನು. ಫಿಲಿಷ್ಟಿಯರು ಈ ವಿಚಾರವನ್ನು ಕೇಳಿ, “ಇಬ್ರಿಯರು ದಂಗೆ ಎದ್ದಿದ್ದಾರೆ” ಎಂದು ಹೇಳಿದರು. ಸೌಲನು, “ಏನು ನಡೆಯಿತೆಂಬುದು ಇಬ್ರಿಯರಿಗೆ ತಿಳಿಯಲಿ” ಎಂದು ಹೇಳಿದನು. ಆದ್ದರಿಂದ ಸೌಲನು ಇಸ್ರೇಲ್ ದೇಶದಲ್ಲೆಲ್ಲಾ ಕೊಂಬೂದಿಸಬೇಕೆಂದು ಜನರಿಗೆ ಹೇಳಿದನು.


ಜೆರಿಕೊದಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನನ್ನು ಕಂಡು, “ಎಲೀಯನ ಆತ್ಮವು ಈಗ ಎಲೀಷನ ಮೇಲಿದೆ!” ಎಂದು ಹೇಳಿ ಎಲೀಷನನ್ನು ಭೇಟಿಮಾಡಲು ಬಂದರು. ಅವರು ಎಲೀಷನಿಗೆ ಸಾಷ್ಟಾಂಗನಮಸ್ಕಾರ ಮಾಡಿದರು.


ಜೆರಿಕೊದಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನ ಬಳಿಗೆ ಬಂದು ಅವನಿಗೆ, “ಯೆಹೋವನು ಈ ದಿನ ನಿನ್ನ ಒಡೆಯನನ್ನು ನಿನ್ನಿಂದ ತೆಗೆದುಕೊಳ್ಳುತ್ತಾನೆಂಬುದು ನಿನಗೆ ತಿಳಿದಿದೆಯೇ?” ಎಂದು ಕೇಳಿದರು. ಎಲೀಷನು, “ಹೌದು, ನನಗೆ ಅದು ತಿಳಿದಿದೆ. ಅದರ ಬಗ್ಗೆ ಮಾತನಾಡಬೇಡಿ” ಎಂದನು.


ಬೇತೇಲಿನಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನ ಬಳಿಗೆ ಬಂದು, ಅವನಿಗೆ, “ಯೆಹೋವನು ಈ ದಿನ ನಿನ್ನ ಒಡೆಯನನ್ನು ನಿನ್ನಿಂದ ತೆಗೆದುಕೊಳ್ಳುತ್ತಾನೆಂಬುದು ನಿನಗೆ ತಿಳಿದಿದೆಯೇ?” ಎಂದು ಕೇಳಿದರು. ಎಲೀಷನು, “ಹೌದು, ನನಗೆ ಅದು ತಿಳಿದಿದೆ. ಅದರ ಬಗ್ಗೆ ಮಾತನಾಡಬೇಡಿ” ಎಂದನು.


ಸೌಲನು ಮತ್ತು ಅವನ ಸೇವಕನು ಗಿಬಿಯತ್ ಎಲೋಹಿಮಿಗೆ ಹೋದರು. ಸೌಲನು ಆ ಸ್ಥಳದಲ್ಲಿ ಪ್ರವಾದಿಗಳ ಸಮೂಹವನ್ನು ಸಂಧಿಸಿದನು. ದೇವರ ಆತ್ಮವು ಮಹಾಶಕ್ತಿಯೊಡನೆ ಸೌಲನ ಮೈಮೇಲೆ ಬಂದಿತು. ಆಗ ಸೌಲನು ಪ್ರವಾದಿಗಳ ಜೊತೆಯಲ್ಲಿ ಪ್ರವಾದಿಸಿದನು.


ಪ್ರೀತಿಯೇ ನಿಮ್ಮ ಗುರಿಯಾಗಿರಲಿ. ಅಲ್ಲದೆ ಪವಿತ್ರಾತ್ಮನ ವರಗಳನ್ನು ಹೊಂದಿಕೊಳ್ಳಲು ವಿಶೇಷವಾಗಿ ಪ್ರವಾದಿಸುವ ವರವನ್ನು ಬಹಳವಾಗಿ ಅಪೇಕ್ಷಿಸಬೇಕು.


ನಾನು ಅವುಗಳನ್ನು ಕಿವುಗೊಟ್ಟು ಕೇಳಿದ್ದೇನೆ. ನಾನು ಹಾರ್ಪ್‌ವಾದ್ಯವನ್ನು ನುಡಿಸುತ್ತಾ ಅವುಗಳನ್ನು ನಿಮಗಾಗಿ ಹಾಡುವೆನು.


ಮೊದಲನೇ ಗುಂಪಿನ ಗಾಯಕರಿಗೆ ಆಸಾಫನು ಮುಖಂಡನಾಗಿದ್ದನು. ಆಸಾಫನ ಗುಂಪಿನವರು ತಾಳ ಬಾರಿಸಿದರು. ಜೆಕರ್ಯನು ಎರಡನೇ ಗುಂಪಿನ ನಾಯಕನು. ಬೇರೆ ಲೇವಿಯರು ಯಾರೆಂದರೆ: ಉಜ್ಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್ ಮತ್ತು ಯೆಗೀಯೇಲ್. ಇವರು ಲೈರ್ ಮತ್ತು ಹಾರ್ಪ್ ವಾದ್ಯಗಳನ್ನು ಬಾರಿಸಿದರು.


ದಾವೀದನೂ ಎಲ್ಲಾ ಇಸ್ರೇಲರೂ ದೇವರ ಮುಂದೆ ಸಂತೋಷದಿಂದ ಹಾಡುತ್ತಾ ಕುಣಿಯುತ್ತಾ ಹೋದರು. ಹಾರ್ಪ್‌ವಾದ್ಯವನ್ನು, ಲೈರ್‌ವಾದ್ಯವನ್ನು, ತಬಲವನ್ನು, ತಾಳವನ್ನು ಮತ್ತು ತುತ್ತೂರಿಯನ್ನು ಬಾರಿಸುತ್ತಾ ಹಾಡುತ್ತಾ ದೇವರಿಗೆ ಸ್ತೋತ್ರ ಮಾಡಿದರು.


ಪ್ರವಾದಿಗಳ ಗುಂಪು ಎಲೀಷನಿಗೆ, “ನಾವು ಈ ಸ್ಥಳದಲ್ಲಿಯೇ ವಾಸಮಾಡುತ್ತಿದ್ದೇವೆ. ಆದರೆ ಇದು ನಮಗೆ ತುಂಬಾ ಚಿಕ್ಕದಾಗಿದೆ.


ಎಲೀಷನು ಗಿಲ್ಗಾಲಿಗೆ ಮತ್ತೆ ಬಂದನು. ಆಗ ಆ ದೇಶದಲ್ಲಿ ಬರಗಾಲವಿತ್ತು. ಪ್ರವಾದಿಗಳ ಗುಂಪು ಎಲೀಷನ ಎದುರಿನಲ್ಲಿ ಕುಳಿತಿದ್ದರು. ಎಲೀಷನು ತನ್ನ ಸೇವಕನಿಗೆ, “ಒಂದು ದೊಡ್ಡ ಪಾತ್ರೆಯನ್ನು ಒಲೆಯ ಮೇಲಿಟ್ಟು ಪ್ರವಾದಿಗಳ ಗುಂಪಿಗೆಲ್ಲ ಸಾರನ್ನು ಮಾಡು” ಎಂದು ಹೇಳಿದನು.


ಆ ಯುವತಿಯರು, “ಹೌದು ದರ್ಶಿಯು ಇಲ್ಲಿದ್ದಾನೆ. ಅವನು ದಾರಿಯಲ್ಲಿ ನಿಮಗಿಂತ ಸ್ವಲ್ಪ ಮುಂದೆ ಹೋಗುತ್ತಿದ್ದಾನೆ. ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುವುದರಿಂದ ಅವನು ಇಲ್ಲಿಗೆ ಬಂದಿದ್ದಾನೆ.


ಈ ಮೂವರೂ ನಿನ್ನ ಕ್ಷೇಮವನ್ನು ವಿಚಾರಿಸುತ್ತಾರೆ. ಅವರು ನಿನಗೆ ಎರಡು ರೊಟ್ಟಿಗಳನ್ನು ಕೊಡುತ್ತಾರೆ. ನೀನು ಆ ಎರಡು ರೊಟ್ಟಿಗಳನ್ನು ಅವರಿಂದ ತೆಗೆದುಕೊಳ್ಳುವೆ.


ಅವನು ಮೂರು ಸಾವಿರ ಇಸ್ರೇಲ್ ಗಂಡಸರನ್ನು ಆರಿಸಿಕೊಂಡನು. ಅವರಲ್ಲಿ ಎರಡು ಸಾವಿರ ಗಂಡಸರು ಗುಡ್ಡಗಾಡು ಪ್ರದೇಶವಾದ ಬೇತೇಲಿನಲ್ಲಿಯೂ ಮಿಕ್ಮಾಷಿನಲ್ಲಿಯೂ ಅವನೊಂದಿಗೆ ಇದ್ದರು. ಉಳಿದ ಒಂದು ಸಾವಿರ ಗಂಡಸರು ಬೆನ್ಯಾಮೀನನ ಗಿಬೆಯದಲ್ಲಿ ಯೋನಾತಾನನೊಂದಿಗೆ ಇದ್ದರು. ಸೌಲನು ಸೈನ್ಯದಲ್ಲಿದ್ದ ಇತರರನ್ನು ಅವರವರ ಮನೆಗಳಿಗೆ ಮರಳಿ ಕಳುಹಿಸಿದನು.


ಇನ್ನೊಂದು ಸಮಯದಲ್ಲಿ ದಾವೀದನು ಕೋಟೆಯೊಳಗಿದ್ದನು. ಫಿಲಿಷ್ಟಿಯರ ಸೈನ್ಯ ಬೆತ್ಲೆಹೇಮಿನಲ್ಲಿತ್ತು.


ಮಧ್ಯಾಹ್ನದ ಸಮಯವು ಮೀರುತ್ತಾ ಬಂದರೂ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ. ಸಾಯಂಕಾಲದ ಯಜ್ಞಗಳನ್ನು ಅರ್ಪಿಸುವ ಸಮಯ ಬರುವ ತನಕ ಪ್ರವಾದಿಗಳು ಗಟ್ಟಿಯಾಗಿ ಕೂಗುತ್ತಲೇ ಇದ್ದರು. ಆದರೂ ಬಾಳನಿಂದ ಉತ್ತರವೇ ಬರಲಿಲ್ಲ. ಯಾವ ಶಬ್ದವೂ ಆಗಲಿಲ್ಲ; ಅವರ ಕೂಗಾಟವನ್ನು ಯಾರೂ ಲಕ್ಷಿಸಲಿಲ್ಲ.


ಅವರನ್ನು ಹಿಂಬಾಲಿಸಿಕೊಂಡು ಬಂದ ಪ್ರವಾದಿಗಳ ಗುಂಪಿನಲ್ಲಿ ಐವತ್ತು ಮಂದಿ ಅಲ್ಲಿದ್ದರು. ಎಲೀಯ ಮತ್ತು ಎಲೀಷರು ಜೋರ್ಡನ್ ನದಿಯ ಹತ್ತಿರ ನಿಂತುಕೊಂಡರು. ಆ ಐವತ್ತು ಮಂದಿ ಜನರು ಎಲೀಯ ಮತ್ತು ಎಲೀಷರಿಗಿಂತ ಬಹುದೂರದಲ್ಲಿ ನಿಂತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು