Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:6 - ಪರಿಶುದ್ದ ಬೈಬಲ್‌

6 ಆಗ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ನಿನ್ನ ಮೈಮೇಲೆ ಬರುತ್ತದೆ. ನೀನು ಮಾರ್ಪಾಟಾಗಿ ಬೇರೊಬ್ಬ ಮನುಷ್ಯನಾಗುವೆ. ನೀನೂ ಆ ಪ್ರವಾದಿಗಳಂತೆ ಪ್ರವಾದಿಸಲು ಆರಂಭಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಯೆಹೋವನ ಆತ್ಮವು ನಿನ್ನ ಮೇಲೆಯೂ ಬರುವುದರಿಂದ ನೀನೂ ಅವರೊಂದಿಗೆ ಪ್ರವಾದಿಸುವಿ. ನೀನು ಮಾರ್ಪಟ್ಟ ಮನುಷ್ಯನಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಸರ್ವೇಶ್ವರನ ಆತ್ಮ ನಿನ್ನ ಮೇಲೆ ಬರುವುದು. ನೀನೂ ಮಾರ್ಪಟ್ಟು ಪ್ರವಾದಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಯೆಹೋವನ ಆತ್ಮವು ನಿನ್ನ ಮೇಲೂ ಬರುವದರಿಂದ ನೀನೂ ಮಾರ್ಪಟ್ಟು ಪ್ರವಾದಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಯೆಹೋವ ದೇವರ ಆತ್ಮವು ನಿನ್ನ ಮೇಲೆ ಬರುವುದು. ನೀನು ಅವರ ಸಂಗಡ ಪ್ರವಾದಿಸುವೆ, ಬೇರೆ ಮನುಷ್ಯನಾಗಿ ಮಾರ್ಪಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:6
14 ತಿಳಿವುಗಳ ಹೋಲಿಕೆ  

ಸೌಲನು ಮತ್ತು ಅವನ ಸೇವಕನು ಗಿಬಿಯತ್ ಎಲೋಹಿಮಿಗೆ ಹೋದರು. ಸೌಲನು ಆ ಸ್ಥಳದಲ್ಲಿ ಪ್ರವಾದಿಗಳ ಸಮೂಹವನ್ನು ಸಂಧಿಸಿದನು. ದೇವರ ಆತ್ಮವು ಮಹಾಶಕ್ತಿಯೊಡನೆ ಸೌಲನ ಮೈಮೇಲೆ ಬಂದಿತು. ಆಗ ಸೌಲನು ಪ್ರವಾದಿಗಳ ಜೊತೆಯಲ್ಲಿ ಪ್ರವಾದಿಸಿದನು.


ಆಗ ಯೆಹೋವನು ಮೇಘದಲ್ಲಿ ಇಳಿದುಬಂದು ಮೋಶೆಯೊಡನೆ ಮಾತಾಡಿ ಅವನಲ್ಲಿದ್ದ ಆತ್ಮವನ್ನೇ ಆ ಎಪ್ಪತ್ತು ಮಂದಿ ಹಿರಿಯರಿಗೆ ಕೊಟ್ಟನು. ಆತ್ಮಿಕ ವರಗಳು ಅವರಿಗೆ ಕೊಡಲ್ಪಟ್ಟಾಗ ಅವರು ಪ್ರವಾದಿಗಳಂತೆ ಪ್ರವಾದಿಸಿದರು. ಆದರೆ ಮತ್ತೆ ಅವರು ಹಾಗೆ ಪ್ರವಾದಿಸಲಿಲ್ಲ.


ಸಮುವೇಲನು ಎಣ್ಣೆಯಿದ್ದ ಕೊಂಬನ್ನು ತೆಗೆದುಕೊಂಡು, ಅದರಲ್ಲಿದ್ದ ವಿಶೇಷವಾದ ಎಣ್ಣೆಯನ್ನು ಇಷಯನ ಕಿರಿಮಗನ ಮೇಲೆ, ಅವನ ಸೋದರರ ಎದುರಿನಲ್ಲೇ ಸುರಿದನು. ಆ ದಿನದಿಂದ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ದಾವೀದನಲ್ಲಿ ನೆಲೆಸಿತು. ಅನಂತರ ಸಮುವೇಲನು ರಾಮಕ್ಕೆ ಹಿಂದಿರುಗಿದನು.


ಯೆಹೋವನ ಆತ್ಮವು ಸಂಸೋನನ ಮೇಲೆ ಪ್ರಬಲವಾಗಿ ಬಂದುದರಿಂದ ಅವನು ಬರಿಗೈಯಿಂದಲೇ ಹೋತದ ಮರಿಯನ್ನೋ ಎಂಬಂತೆ ಅದನ್ನು ಎರಡು ಹೋಳಾಗಿ ಸೀಳಿಬಿಟ್ಟನು. ಆದರೆ ಸಂಸೋನನು ಇದನ್ನು ತನ್ನ ತಂದೆತಾಯಿಗಳಿಗೆ ಹೇಳಲಿಲ್ಲ.


ಒತ್ನೀಯೇಲನ ಮೇಲೆ ಯೆಹೋವನ ಆತ್ಮ ಬಂದಿತು; ಆದ್ದರಿಂದ ಅವನು ಇಸ್ರೇಲರ ನ್ಯಾಯಾಧೀಶನಾದನು. ಒತ್ನೀಯೇಲನು ಇಸ್ರೇಲರನ್ನು ಯುದ್ಧಕ್ಕೆ ಕರೆದೊಯ್ದನು. ಅರಾಮಿನ ಅರಸನಾದ ಕೂಷನ್ ರಿಷಾತಯಿಮ್‌ನನ್ನು ಸೋಲಿಸಲು ಯೆಹೋವನು ಒತ್ನೀಯೇಲನಿಗೆ ಸಹಾಯ ಮಾಡಿದನು.


ಕೊನೆಯ ದಿನಗಳಲ್ಲಿ ಅನೇಕರು ನನಗೆ, ‘ನೀನೇ ನಮ್ಮ ಪ್ರಭು! ನಿನ್ನ ವಿಷಯವಾಗಿ ನಾವು ಬೋಧಿಸಿದೆವು. ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸಿದೆವು ಮತ್ತು ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆವು’ ಎಂದು ಹೇಳುವರು.


ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿದ ಆತ್ಮವನ್ನೇ ಅವರ ಮೇಲೆ ಸುರಿಸುವೆನು. ಆಗ ಸ್ವತಃ ನೀನೇ ಈ ಜನರ ಭಾರವನ್ನು ವಹಿಸಬೇಕಾಗಿರುವುದಿಲ್ಲ. ಈ ಎಪ್ಪತ್ತು ಮಂದಿ ಹಿರಿಯರು ಆ ಭಾರವನ್ನು ಹೊರಲು ನಿನಗೆ ಸಹಾಯ ಮಾಡುವರು.


ಎಲ್ದಾದ್ ಮತ್ತು ಮೇದಾದ್ ಎಂಬ ಹಿರಿಯರಿಬ್ಬರು ಗುಡಾರದ ಬಳಿಗೆ ಹೋಗಲಿಲ್ಲ. ಹಿರಿಯರ ಹೆಸರುಗಳಿದ್ದ ಪಟ್ಟಿಯಲ್ಲಿ ಅವರ ಹೆಸರುಗಳಿದ್ದವು. ಆದರೆ ಅವರು ಪಾಳೆಯದಲ್ಲೇ ಉಳಿದುಕೊಂಡರು. ಆದರೆ ಅವರಿಗೆ ಆತ್ಮಿಕ ವರಗಳು ಕೊಡಲ್ಪಟ್ಟಿದ್ದರಿಂದ ಅವರು ಪಾಳೆಯದಲ್ಲಿ ಪ್ರವಾದಿಗಳಂತೆ ಪ್ರವಾದಿಸತೊಡಗಿದರು.


ಆದರೆ ಮೋಶೆಯು, “ನೀನು ನನ್ನ ವಿಷಯದಲ್ಲಿ ಚಿಂತೆಪಡುತ್ತಿರುವುದೇಕೆ? ಯೆಹೋವನ ಜನರೆಲ್ಲರೂ ಪ್ರವಾದಿಗಳಾಗಿರಬೇಕೆಂದು ನಾನು ಬಯಸುತ್ತೇನೆ. ಅವರೆಲ್ಲರ ಮೇಲೆ ಯೆಹೋವನು ತನ್ನ ಆತ್ಮನನ್ನು ಇರಿಸಬೇಕೆಂದು ನಾನು ಬಯಸುತ್ತೇನೆ” ಎಂದು ಉತ್ತರಿಸಿದನು.


ಸೌಲನು ಸಮುವೇಲನನ್ನು ಬಿಟ್ಟುಹೊರಡಲು ತಿರುಗಿದಂತೆಯೇ ದೇವರು ಸಹ ಸೌಲನ ಜೀವಿತವನ್ನು ಮಾರ್ಪಾಟು ಮಾಡಿದನು. ಅಂದು ಆ ಸಂಗತಿಗಳೆಲ್ಲಾ ಸಂಭವಿಸಿದವು.


ದಾವೀದನನ್ನು ಬಂಧಿಸಿ ತರಲು ಸೌಲನು ಜನರನ್ನು ಕಳುಹಿಸಿದನು. ಆದರೆ ಆ ಜನರು ಪಾಳೆಯಕ್ಕೆ ಬರುವಷ್ಟರಲ್ಲಿ ಪ್ರವಾದಿಗಳು ಅಲ್ಲಿ ಪ್ರವಾದಿಸುತ್ತಿದ್ದರು. ಸಮುವೇಲನು ಅವರ ನಾಯಕನಾಗಿ ನಿಂತಿದ್ದನು. ದೇವರಾತ್ಮವು ಸಂದೇಶಕರ ಮೇಲೆ ಬಂದದ್ದರಿಂದ ಅವರೂ ಪ್ರವಾದಿಸಲಾರಂಭಿಸಿದರು.


ಸಂಸೋನನನ್ನು ಲೆಹೀ ಎಂಬ ಸ್ಥಳಕ್ಕೆ ತಂದಾಗ ಫಿಲಿಷ್ಟಿಯರು ಅವನನ್ನು ನೋಡುವದಕ್ಕೆ ಬಂದರು. ಅವರು ಸಂತೋಷದಿಂದ ಆರ್ಭಟಿಸುತ್ತಿದ್ದರು. ಆಗ ಯೆಹೋವನ ಆತ್ಮವು ಪ್ರಬಲವಾಗಿ ಸಂಸೋನನ ಮೇಲೆ ಬಂದಿತು. ಸಂಸೋನನು ಹಗ್ಗಗಳನ್ನು ಸುಟ್ಟದಾರಗಳೊ ಎಂಬಂತೆ ಕಿತ್ತುಹಾಕಿದನು; ಕೈಗೆ ಕಟ್ಟಿದ್ದ ಹಗ್ಗಗಳು ಕಳಚಿಬಿದ್ದವು.


ಅವರು ಹೇಳಿದ್ದನ್ನು ಕೇಳಿದಾಗ ದೇವರಾತ್ಮನು ಸೌಲನ ಮೈಮೇಲೆ ಮಹಾಶಕ್ತಿಯೊಡನೆ ಬಂದಿತು. ಸೌಲನು ಬಹುಕೋಪಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು