1 ಸಮುಯೇಲ 10:8 - ಪರಿಶುದ್ದ ಬೈಬಲ್8 “ನನಗಿಂತ ಮೊದಲು ನೀನು ಗಿಲ್ಗಾಲಿಗೆ ಹೋಗು. ನಾನು ನಿನ್ನನ್ನು ಅಲ್ಲಿ ಭೇಟಿಯಾಗುತ್ತೇನೆ. ನಾನು ಅಲ್ಲಿ ಸರ್ವಾಂಗಹೋಮಗಳನ್ನು ಮತ್ತು ಸಮಾಧಾನಯಜ್ಞಗಳನ್ನು ಅರ್ಪಿಸುತ್ತೇನೆ. ಆದರೆ ನೀನು ಏಳು ದಿನಗಳವರೆಗೆ ಕಾಯಲೇಬೇಕು. ಅನಂತರ ನಾನು ನಿನ್ನ ಬಳಿಗೆ ಬಂದು ನೀನು ಮಾಡಬೇಕಾದದ್ದನ್ನು ತಿಳಿಸುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿನಗಳಾದ ನಂತರ ನಾನು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವುದಕ್ಕೋಸ್ಕರ ಅಲ್ಲಿಗೆ ಬಂದು ನೀನು ಮಾಡಬೇಕಾದದ್ದನ್ನು ನಿನಗೆ ತಿಳಿಸುವೆನು; ಅಲ್ಲಿಯ ವರೆಗೆ ಕಾದುಕೊಂಡಿರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿವಸಗಳಾದ ನಂತರ ನಾನು ದಹನಬಲಿಗಳನ್ನೂ ಶಾಂತಿಸಮಾಧಾನಬಲಿಗಳನ್ನೂ ಸಮರ್ಪಿಸುವುದಕ್ಕಾಗಿ ಅಲ್ಲಿಗೆ ಬಂದು ನೀನು ಮಾಡಬೇಕಾದುದನ್ನು ನಿನಗೆ ತಿಳಿಸುವೆನು; ಅಲ್ಲಿಯವರೆಗೆ ಕಾದುಕೊಂಡಿರು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿವಸಗಳಾದನಂತರ ನಾನು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವದಕ್ಕೋಸ್ಕರ ಅಲ್ಲಿಗೆ ಬಂದು ನೀನು ಮಾಡಬೇಕಾದದ್ದನ್ನು ನಿನಗೆ ತಿಳಿಸುವೆನು; ಅಲ್ಲಿಯವರೆಗೆ ಕಾದುಕೊಂಡಿರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದು ಹೋಗಬೇಕು. ನಾನು ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸುವುದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು,” ಎಂದನು. ಅಧ್ಯಾಯವನ್ನು ನೋಡಿ |