Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 11:1 - ಪರಿಶುದ್ದ ಬೈಬಲ್‌

1 ಅಮ್ಮೋನಿಯನಾದ ನಾಹಾಷನು ಒಂದು ತಿಂಗಳ ನಂತರ, ತನ್ನ ಸೈನ್ಯದೊಂದಿಗೆ ಯಾಬೇಷ್‌ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯಾಬೇಷಿನ ಜನರೆಲ್ಲ ನಾಹಾಷನಿಗೆ, “ನೀನು ನಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುವುದಾದರೆ, ನಾವು ನಿನ್ನ ಸೇವೆಮಾಡುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು” ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಒಂದು ತಿಂಗಳ ನಂತರ ಅಮ್ಮೋನಿಯನಾದ ನಾಹಾಷನು ದಂಡೆತ್ತಿ ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಸಂಧಾನ ಮಾಡಿಕೋ; ನಾವು ನಿನಗೆ ಅಧೀನರಾಗಿರುತ್ತೇವೆ,” ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಮ್ಮೋನಿಯನಾದ ನಾಹಾಷನು ಹೊರಟುಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆಹಾಕಲು ಯಾಬೇಷಿನವರು ಅವನನ್ನು - ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನ ಸೇವಕರಾಗಿರುವೆವು ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಮ್ಮೋನಿಯನಾದ ನಾಹಾಷನು ದಂಡೆತ್ತಿ ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ಮುತ್ತಿಗೆಹಾಕಿದನು. ಆಗ ಯಾಬೇಷಿನ ಜನರೆಲ್ಲರು ನಾಹಾಷನಿಗೆ, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿದರೆ, ನಾವು ನಿನಗೆ ಅಧೀನರಾಗಿರುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 11:1
23 ತಿಳಿವುಗಳ ಹೋಲಿಕೆ  

ಆದರೆ ಅಮ್ಮೋನಿಯರ ರಾಜನಾದ ನಾಹಾಷನು ನಿಮ್ಮ ವಿರುದ್ಧ ಹೋರಾಡಲು ಬರುತ್ತಿರುವುದನ್ನು ಕಂಡು ನೀವು, ‘ನಮ್ಮನ್ನಾಳಲು ನಮಗೆ ಒಬ್ಬ ರಾಜ ಬೇಕು’ ಎಂದು ಕೇಳಿದಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ರಾಜನಾಗಿದ್ದರೂ ನೀವು ಹೀಗೆ ಕೇಳಿದಿರಿ.


ಯೆಹೂದದ ರಾಜನನ್ನಾಗಿ ಮಾಡುವುದಾಗಿ ನೆಬೂಕದ್ನೆಚ್ಚರನು ರಾಜನ ಕುಟುಂಬದವರಲ್ಲೊಬ್ಬನೊಡನೆ ಒಪ್ಪಂದಮಾಡಿಕೊಂಡು ತನಗೆ (ನೆಬೂಕದ್ನೆಚ್ಚರನಿಗೆ) ಆಧಿನವಾಗಿರುವದಾಗಿ ಅವನಿಂದ (ರಾಜನ ಕುಟುಂಬದವನಿಂದ) ಪ್ರಮಾಣ ಮಾಡಿಸಿಕೊಂಡನು. ಅವನು ಯೆಹೂದದ ಬಲಿಷ್ಠರೆಲ್ಲರನ್ನು ಸಹ ಈ ಒಪ್ಪಂದದಲ್ಲಿ ಸೇರಿಸಿದನು.


ಬೆನ್ಹದದನು ಅವನಿಗೆ, “ಅಹಾಬನೇ, ನನ್ನ ತಂದೆಯು ನಿನ್ನ ತಂದೆಯಿಂದ ವಶಪಡಿಸಿಕೊಂಡಿರುವ ಪಟ್ಟಣಗಳನ್ನು ನಿನಗೇ ಬಿಟ್ಟುಬಿಡುತ್ತೇನೆ. ನನ್ನ ತಂದೆಯು ಸಮಾರ್ಯದಲ್ಲಿ ಮಾಡಿದಂತೆ ನೀನೂ ದಮಸ್ಕದಲ್ಲಿ ಅಂಗಡಿಗಳನ್ನು ಹಾಕಬಹುದು” ಎಂದನು. ಅಹಾಬನು, “ನೀನು ಇದಕ್ಕೆ ಒಪ್ಪಿಕೊಂಡರೆ, ನಾನು ನಿನ್ನನ್ನು ಸ್ವತಂತ್ರವಾಗಿ ಹೋಗಲು ಬಿಡುತ್ತೇನೆ” ಎಂದನು. ಆ ಇಬ್ಬರು ರಾಜರುಗಳು ಶಾಂತಿಸಂಧಾನವನ್ನು ಮಾಡಿಕೊಂಡರು. ರಾಜನಾದ ಅಹಾಬನು ಬೆನ್ಹದದನಿಗೆ ಸ್ವತಂತ್ರವನ್ನು ಕೊಟ್ಟು ಕಳುಹಿಸಿದನು.


ಆಗ ಇಸ್ರೇಲರು, “ಇಲ್ಲಿ ಮಿಚ್ಛೆಗೆ ಇಸ್ರೇಲರಲ್ಲಿ ಬರದಿರುವವರು ಯಾರಾದರೂ ಇರುವರೇ?” ಎಂದು ವಿಚಾರ ಮಾಡಿದರು. ಆಗ ಯಾಬೇಷ್ ಗಿಲ್ಯಾದ್ ನಗರದವರಲ್ಲಿ ಯಾರೂ ಬಂದಿಲ್ಲವೆಂದು ಗೊತ್ತಾಯಿತು.


ಅವರು ಅವನಿಗೆ, “ನಿನ್ನ ಜೊತೆಯಲ್ಲಿ ಯೆಹೋವನು ಇದ್ದಾನೆಂಬುದು ಈಗ ನಮಗೆ ತಿಳಿಯಿತು. ನಾವು ಒಂದು ಒಪ್ಪಂದ ಮಾಡಿಕೊಳ್ಳಬೇಕೆಂಬುದು ನಮ್ಮ ಆಲೋಚನೆ. ನೀನು ನಮಗೆ ಒಂದು ಪ್ರಮಾಣ ಮಾಡಬೇಕಾಗಿದೆ.


ಅದು ನಿನ್ನೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುವುದೇ? ಸದಾಕಾಲ ನಿನ್ನ ಸೇವೆಮಾಡುವುದಾಗಿ ವಾಗ್ದಾನ ಮಾಡುವುದೇ?


“ನೀವು ಆ ಜನರೊಡನೆಯಾಗಲಿ ಅವರ ದೇವರುಗಳೊಡನೆಯಾಗಲಿ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು.


“‘ಹಿಜ್ಕೀಯನ ಮಾತುಗಳನ್ನು ಕೇಳಬೇಡಿ. ಅಶ್ಶೂರದ ಅರಸನ ಮಾತುಗಳಿಗೆ ಕಿವಿಗೊಡಿರಿ. ಅವನು ಹೇಳುವುದೇನೆಂದರೆ: “ನೀವು ನನ್ನೊಡನೆ ಒಪ್ಪಂದ ಮಾಡಿಕೊಂಡು ನಿಮ್ಮ ನಗರದಿಂದ ಹೊರಗೆ ಬಂದು ನನ್ನನ್ನು ಸಂಧಿಸಬೇಕು. ಆಗ ನೀವೆಲ್ಲರೂ ನಿಮ್ಮ ಮನೆಗಳಿಗೆ ಹೋಗಬಹುದು; ನಿಮ್ಮ ಸ್ವಂತ ದ್ರಾಕ್ಷಿತೋಟದ ದ್ರಾಕ್ಷಿಹಣ್ಣುಗಳನ್ನು ತಿನ್ನಬಹುದು; ಅಂಜೂರದ ಮರದ ಹಣ್ಣನ್ನು ತಿನ್ನಬಹುದು ನೀವೆಲ್ಲರೂ ನಿಮ್ಮ ಬಾವಿಯ ನೀರನ್ನು ಕುಡಿಯಬಹುದು.


ಆದ್ದರಿಂದ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಫಿಲಿಷ್ಟಿಯರು ಮತ್ತು ಅಮ್ಮೋನಿಯರು ಅವರನ್ನು ಸೋಲಿಸುವಂತೆ ಮಾಡಿದನು.


“ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ಇಸ್ರೇಲರೊಂದಿಗೆ ಸೇರಿ ದೇವಾರಾಧನೆ ಮಾಡಕೂಡದು. ಅವರ ಸಂತತಿಯ ಹತ್ತನೆಯ ತಲೆಮಾರಿನವರೆಗೂ ಆರಾಧನೆ ಮಾಡಬಾರದು.


ಸೌಲನು ಇಸ್ರೇಲನ್ನು ಪೂರ್ಣವಾಗಿ ಹತೋಟಿಯಲ್ಲಿಟ್ಟುಕೊಂಡು ತಾನು ರಾಜನೆಂಬುದನ್ನು ತೋರಿಸಿಕೊಟ್ಟನು. ಸೌಲನು ಇಸ್ರೇಲಿನ ಸುತ್ತಲೂ ವಾಸಿಸುತ್ತಿದ್ದ ಶತ್ರುಗಳೊಡನೆ ಅಂದರೆ ಮೋವಾಬ್ಯರೊಡನೆ, ಅಮ್ಮೋನಿಯರೊಡನೆ, ಎದೋಮ್ಯರೊಡನೆ, ಚೋಬದ ಅರಸರೊಡನೆ ಮತ್ತು ಫಿಲಿಷ್ಟಿಯರೊಡನೆ ಹೋರಾಡಿದನು. ಸೌಲನು ತಾನು ಹೋದ ಕಡೆಯಲ್ಲೆಲ್ಲಾ ಇಸ್ರೇಲರ ಶತ್ರುಗಳನ್ನು ಸೋಲಿಸಿದನು.


ತರುವಾಯ, ಅಮ್ಮೋನಿಯರ ರಾಜನಾದ ನಾಹಾಷನು ಸತ್ತನು. ಅವನ ನಂತರ ಅವನ ಮಗನಾದ ಹಾನೂನನು ರಾಜನಾದನು.


ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದನು. ಆದ್ದರಿಂದ ಅವನ ಮಗನಿಗೆ ನಾನು ದಯೆತೋರಿಸುವೆನು” ಎಂದು ಹೇಳಿದನು. ಆದ್ದರಿಂದ ತಂದೆಯ ಸಾವಿನಿಂದ ಶೋಕತಪ್ತನಾಗಿರುವ ಹಾನೂನನನ್ನು ಸಂತೈಸಲು ದಾವೀದನು ತನ್ನ ಅಧಿಕಾರಿಗಳನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಹೋದರು.


ದಾವೀದನು ಮಹನಯಿಮಿಗೆ ಬಂದನು. ಶೋಬಿ, ಮಾಕೀರ್ ಮತ್ತು ಬರ್ಜಿಲ್ಲೈಯರು ಆ ಸ್ಥಳದಲ್ಲಿದ್ದರು. (ಶೋಬಿಯು ಅಮ್ಮೋನಿಯರ ಪಟ್ಟಣವಾದ ರಬ್ಬಾದ ಊರಿನ ನಾಹಾಷನ ಮಗ. ಮಾಕೀರನು ಲೋದೆಬಾರಿನ ಅಮ್ಮೀಯೇಲನ ಮಗ. ಬರ್ಜಿಲ್ಲೈಯು ಗಿಲ್ಯಾದ್ ನಾಡಿನ ರೋಗೆಲೀಮ್ ನಗರದವನು.)


ಬಾಬಿಲೋನಿನ ರಾಜನು ಕೆಲವು ಜನ ಯೆಹೂದಿಯರನ್ನು ಆ ಪ್ರದೇಶದಲ್ಲಿ ಬಿಟ್ಟುಹೋಗಿದ್ದಾನೆ ಮತ್ತು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರ ಅಧಿಪತಿಯನ್ನಾಗಿ ನೇಮಿಸಿದ್ದಾನೆ ಎಂಬ ಸಮಾಚಾರವನ್ನು ಮೋವಾಬ್, ಎದೋಮ್, ಅಮ್ಮೋನ್ ಮೊದಲಾದ ದೇಶಗಳಲ್ಲಿ ಚದುರಿಹೋಗಿದ್ದ ಯೆಹೂದಿಯರು ಕೇಳಿದರು.


ಯೋಹಾನಾನ ಮತ್ತು ಅವನ ಸಂಗಡ ಇದ್ದ ಅಧಿಕಾರಿಗಳು ಹೀಗೆಂದರು: “ಅಮ್ಮೋನ್ಯರ ರಾಜನಾದ ಬಾಲೀಸನು ನಿನ್ನನ್ನು ಕೊಲ್ಲಬಯಸುತ್ತಾನೆ. ಅವನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆ ಎಂಬುದು ನಿನಗೆ ಗೊತ್ತಿದೆಯೇ?” ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.


ಸ್ವಲ್ಪಕಾಲದ ತರುವಾಯ ಅಮ್ಮೋನಿಯರು ಇಸ್ರೇಲರ ವಿರುದ್ಧ ಯುದ್ಧ ಪ್ರಾರಂಭಿಸಿದರು.


ಯಾಬೇಷ್ ಗಿಲ್ಯಾದಿನ ಜನರಿಗೆ ದಾವೀದನು ಸಂದೇಶಕರನ್ನು ಕಳುಹಿಸಿ, “ಸೌಲನ ದೇಹದ ಬೂದಿಯನ್ನು ಸಮಾಧಿಮಾಡುವುದರ ಮೂಲಕ ನೀವು ನಿಮ್ಮ ಒಡೆಯನಾದ ಸೌಲನಿಗೆ ಕರುಣೆ ತೋರಿದ್ದೀರಿ. ಅದಕ್ಕಾಗಿ ಯೆಹೋವನು ನಿಮ್ಮನ್ನು ಆಶೀರ್ವದಿಸಲಿ.


ಫಿಲಿಷ್ಟಿಯರು ಸೌಲನಿಗೆ ಮಾಡಿದ್ದು ಯಾಬೇಷ್ ಗಿಲ್ಯಾದಿನ ಜನರಿಗೆ ತಿಳಿಯಿತು.


ಆಗ ಯಾಬೇಷ್ ಗಿಲ್ಯಾದಿನ ರಣವೀರರು ಹೊರಟು ಸೌಲನ ಮತ್ತು ಅವನ ಗಂಡುಮಕ್ಕಳ ಶವಗಳನ್ನು ಯಾಬೇಷ್ ಗಿಲ್ಯಾದಿಗೆ ತಂದರು. ಆ ರಣವೀರರು ಸೌಲನ ಮತ್ತು ಅವನ ಗಂಡುಮಕ್ಕಳ ಎಲುಬುಗಳನ್ನು ಯಾಬೇಷಿನಲ್ಲಿದ್ದ ಒಂದು ದೊಡ್ಡ ಮರದ ಬುಡದಲ್ಲಿ ಹೂಳಿಟ್ಟರು. ಅನಂತರ ಏಳು ದಿವಸಗಳ ತನಕ ಅವರು ಶೋಕಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು