1 ಸಮುಯೇಲ 11:13 - ಪರಿಶುದ್ದ ಬೈಬಲ್13 ಆದರೆ ಸೌಲನು, “ಯೆಹೋವನು ಇಸ್ರೇಲನ್ನು ರಕ್ಷಿಸಿದ್ದಾನೆ. ಈ ದಿನ ಯಾರನ್ನೂ ಕೊಲ್ಲುವುದು ಬೇಡ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸೌಲನು ಅವರಿಗೆ, “ಯೆಹೋವನು ಈ ದಿನ ಇಸ್ರಾಯೇಲ್ಯರಿಗೆ ಜಯವನ್ನು ಉಂಟುಮಾಡಿರುವುದರಿಂದ ಯಾರನ್ನೂ ಕೊಲ್ಲಬಾರದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಸರ್ವೇಶ್ವರ ಈ ದಿನ ಇಸ್ರಯೇಲರಿಗೆ ಜಯವನ್ನುಂಟುಮಾಡಿರುವರು. ಆದ್ದರಿಂದ ಯಾರನ್ನೂ ಕೊಲ್ಲಬಾರದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋವನು ಈ ಹೊತ್ತು ಇಸ್ರಾಯೇಲ್ಯರಿಗೆ ಜಯವನ್ನುಂಟುಮಾಡಿರುವದರಿಂದ ಯಾರನ್ನೂ ಕೊಲ್ಲಬಾರದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಸೌಲನು, “ಯೆಹೋವ ದೇವರು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನು ಉಂಟುಮಾಡಿದ್ದರಿಂದ, ಈ ಹೊತ್ತು ಯಾರನ್ನೂ ಕೊಲ್ಲಬಾರದು,” ಎಂದನು. ಅಧ್ಯಾಯವನ್ನು ನೋಡಿ |
ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.
ಆದರೆ ಕೆಲವು ಕಿರುಕುಳಕಾರರು, “ಈ ಮನುಷ್ಯನು ಹೇಗೆ ತಾನೆ ನಮ್ಮನ್ನು ರಕ್ಷಿಸುವನು?” ಎಂದು ಹೇಳಿದರು. ಅವರು ಸೌಲನ ಬಗ್ಗೆ ಕೆಟ್ಟಮಾತುಗಳನ್ನು ಆಡಿದರು; ಅವನನ್ನು ತಿರಸ್ಕರಿಸಿ, ಕಾಣಿಕೆಗಳನ್ನು ತಂದುಕೊಡಲಿಲ್ಲ. ಆದರೆ ಸೌಲನು ಏನೂ ಮಾತನಾಡಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು, ಗಾದ್ ಮತ್ತು ರೂಬೆನ್ ಕುಲದವರಿಗೆ ಕಿರುಕುಳಕೊಡುತ್ತಿದ್ದನು. ನಾಹಾಷನು ಪ್ರತಿ ಮನುಷ್ಯನ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ನಾಹಾಷನು ಅವರಿಗೆ ಸಹಾಯಮಾಡಲು ಯಾರಿಗೂ ಅವಕಾಶಕೊಡುತ್ತಿರಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು ಜೋರ್ಡನ್ ನದಿಯ ಪೂರ್ವ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲ ಇಸ್ರೇಲರ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ಆದ್ದರಿಂದ ಅಮ್ಮೋನಿಯರಿಂದ ಏಳು ಸಾವಿರ ಮಂದಿ ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಓಡಿಹೋದರು.