1 ಸಮುಯೇಲ 11:15 - ಪರಿಶುದ್ದ ಬೈಬಲ್15 ಜನರೆಲ್ಲ ಗಿಲ್ಗಾಲಿಗೆ ಹೋದರು. ಅಲ್ಲಿ ಯೆಹೋವನ ಸಮ್ಮುಖದಲ್ಲಿ ಜನರೆಲ್ಲ ಸೌಲನನ್ನು ರಾಜನನ್ನಾಗಿ ಮಾಡಿದರು. ಅವರೆಲ್ಲರು ಯೆಹೋವನಿಗೆ ಸಮಾಧಾನಯಜ್ಞಗಳನ್ನು ಅರ್ಪಿಸಿದರು. ಸೌಲನು ಮತ್ತು ಇಸ್ರೇಲರೆಲ್ಲಾ ಒಂದು ದೊಡ್ಡ ಉತ್ಸವವನ್ನೇ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ, ಯೆಹೋವನಿಗೆ ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ಸೌಲನೊಡನೆ ಬಹಳವಾಗಿ ಆನಂದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವರೆಲ್ಲರು ಅಲ್ಲಿಗೆ ಹೋಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಘೋಷಿಸಿ ಸ್ಥಿರಪಡಿಸಿದರು. ಸರ್ವೇಶ್ವರನಿಗೆ ಶಾಂತಿಸಮಾಧಾನದ ಬಲಿಗಳನ್ನು ಸಮರ್ಪಿಸಿದರು. ಸೌಲನೊಡನೆ ಸೇರಿ ಬಹಳವಾಗಿ ಆನಂದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ ಯೆಹೋವನಿಗೆ ಸಮಾಧಾನಯಜ್ಞಗಳನ್ನು ಸಮರ್ಪಿಸಿ ಸೌಲನೊಡನೆ ಬಹಳವಾಗಿ ಆನಂದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ, ಆ ಸ್ಥಳದಲ್ಲಿ ಯೆಹೋವ ದೇವರ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ, ಯೆಹೋವ ದೇವರಿಗೆ ಸಮಾಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲರೂ ಬಹಳವಾಗಿ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿ |