1 ಸಮುಯೇಲ 11:3 - ಪರಿಶುದ್ದ ಬೈಬಲ್3 ಯಾಬೇಷಿನ ಹಿರಿಯರು ನಾಹಾಷನಿಗೆ, “ನಮಗೆ ಏಳು ದಿನಗಳವರೆಗೆ ಸಮಯ ಕೊಡು. ನಾವು ಇಸ್ರೇಲಿನ ಎಲ್ಲಾ ಕಡೆಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ರಕ್ಷಿಸಲು ಯಾರೂ ಬರದಿದ್ದರೆ ನಾವೆಲ್ಲ ನಿನ್ನ ಬಳಿಗೆ ಬರುತ್ತೇವೆ ಹಾಗೂ ನಿನಗೆ ಅಧೀನರಾಗುತ್ತೇವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಯಾಬೇಷಿನ ಹಿರಿಯರು ಅವನಿಗೆ, “ಏಳು ದಿನಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ, ನಾವು ನಿನ್ನ ಬಳಿಗೆ ಹೊರಟು ಬಂದು ನಿನಗೆ ಅಧೀನರಾಗುತ್ತೇವೆ” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಯಾಬೇಷಿನ ಹಿರಿಯರು ಅವನಿಗೆ, “ಏಳು ದಿವಸಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಯೇಲರ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ ನಾವು ನಿನ್ನ ಬಳಿಗೆ ಬಂದು ಶರಣಾಗುತ್ತೇವೆ,” ಎಂದು ವಿನಂತಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಯಾಬೇಷಿನ ಹಿರಿಯರು ಅವನಿಗೆ - ಏಳು ದಿವಸಗಳವರೆಗೆ ತಡೆ; ಅಷ್ಟರೊಳಗೆ ನಾವು ಇಸ್ರಾಯೇಲ್ಯರ ಎಲ್ಲಾ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ ನಾವು ನಿನ್ನ ಬಳಿಗೆ ಹೊರಟುಬರುವೆವು ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ, “ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಅವಕಾಶವನ್ನು ಕೊಡು. ನಮ್ಮನ್ನು ರಕ್ಷಿಸುವವರು ಯಾರೂ ಇಲ್ಲದೆ ಹೋದರೆ, ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು,” ಎಂದರು. ಅಧ್ಯಾಯವನ್ನು ನೋಡಿ |
“‘ಹಿಜ್ಕೀಯನ ಮಾತುಗಳನ್ನು ಕೇಳಬೇಡಿ. ಅಶ್ಶೂರದ ಅರಸನ ಮಾತುಗಳಿಗೆ ಕಿವಿಗೊಡಿರಿ. ಅವನು ಹೇಳುವುದೇನೆಂದರೆ: “ನೀವು ನನ್ನೊಡನೆ ಒಪ್ಪಂದ ಮಾಡಿಕೊಂಡು ನಿಮ್ಮ ನಗರದಿಂದ ಹೊರಗೆ ಬಂದು ನನ್ನನ್ನು ಸಂಧಿಸಬೇಕು. ಆಗ ನೀವೆಲ್ಲರೂ ನಿಮ್ಮ ಮನೆಗಳಿಗೆ ಹೋಗಬಹುದು; ನಿಮ್ಮ ಸ್ವಂತ ದ್ರಾಕ್ಷಿತೋಟದ ದ್ರಾಕ್ಷಿಹಣ್ಣುಗಳನ್ನು ತಿನ್ನಬಹುದು; ಅಂಜೂರದ ಮರದ ಹಣ್ಣನ್ನು ತಿನ್ನಬಹುದು ನೀವೆಲ್ಲರೂ ನಿಮ್ಮ ಬಾವಿಯ ನೀರನ್ನು ಕುಡಿಯಬಹುದು.