Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:11 - ಪರಿಶುದ್ದ ಬೈಬಲ್‌

11 “ಆದ್ದರಿಂದ ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ ಮತ್ತು ಸಮುವೇಲ ಎಂಬವರನ್ನು ಕಳುಹಿಸಿದನು. ನಿಮ್ಮನ್ನು ಸುತ್ತುವರಿದಿದ್ದ ಶತ್ರುಗಳಿಂದ ಯೆಹೋವನು ರಕ್ಷಿಸಿದನು. ನೀವು ಸುರಕ್ಷಿತವಾಗಿ ವಾಸಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ಬಿಡಿಸಿ ಸುರಕ್ಷಿತವಾಗಿ ಜೀವಿಸುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಸರ್ವೇಶ್ವರ ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಯೆಹೋವ ದೇವರು ಯೆರುಬ್ಬಾಳನನ್ನೂ, ಬಾರಾಕನನ್ನೂ, ಯೆಫ್ತಾಹನನ್ನೂ, ಸಮುಯೇಲನನ್ನೂ ಕಳುಹಿಸಿ, ನಿಮ್ಮ ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರುಗಳ ಕೈಯಿಂದ ಬಿಡಿಸಿ, ನೀವು ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:11
13 ತಿಳಿವುಗಳ ಹೋಲಿಕೆ  

ಯೋವಾಷನು, “ಗಿದ್ಯೋನನು ಬಾಳನ ಯಜ್ಞವೇದಿಕೆಯನ್ನು ಕೆಡವಿದ ಪಕ್ಷದಲ್ಲಿ ಬಾಳನು ಅವನೊಡನೆ ವಾದಿಸಲಿ” ಎಂದು ಹೇಳಿದನು. ಅಂದು ಯೋವಾಷನು ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೊಸ ಹೆಸರನ್ನು ಕೊಟ್ಟನು.


ದೆಬೋರಳು ತನ್ನನ್ನು ಬಂದು ಕಾಣಬೇಕೆಂದು ಬಾರಾಕನೆಂಬ ವ್ಯಕ್ತಿಗೆ ಹೇಳಿ ಕಳುಹಿಸಿದಳು. ಬಾರಾಕನು ಅಬೀನೋವಮನ ಮಗ. ಬಾರಾಕನು ನಫ್ತಾಲಿ ಪ್ರದೇಶದ ಕೆದೆಷ್ ಎಂಬ ಊರಲ್ಲಿ ವಾಸಮಾಡುತ್ತಿದ್ದನು. ದೆಬೋರಳು ಬಾರಾಕನಿಗೆ, “ಇಸ್ರೇಲಿನ ದೇವರಾದ ಯೆಹೋವನು, ‘ನೀನು ಹೋಗಿ ನಫ್ತಾಲಿ ಮತ್ತು ಜೆಬುಲೂನ್ ಕುಲಗಳವರ ಹತ್ತು ಸಾವಿರ ಜನರನ್ನು ಸೇರಿಸಿ ಅವರನ್ನು ತಾಬೋರ್ ಬೆಟ್ಟಕ್ಕೆ ಕರೆದುಕೊಂಡು ಹೋಗು.


ಯೆಹೋವನು ಗಿದ್ಯೋನನ ಕಡೆಗೆ ತಿರುಗಿ, “ನಿನ್ನ ಬಲವನ್ನು ಉಪಯೋಗಿಸು. ಹೋಗು, ಮಿದ್ಯಾನ್ಯರಿಂದ ಇಸ್ರೇಲರನ್ನು ರಕ್ಷಿಸು. ನಾನು ಅವರನ್ನು ರಕ್ಷಿಸುವುದಕ್ಕಾಗಿ ನಿನ್ನನ್ನು ಕಳುಹಿಸುತ್ತಿದ್ದೇನೆ” ಅಂದನು.


ಫಿಲಿಷ್ಟಿಯರು ಸೋತುಹೋದರು. ಅವರು ಮತ್ತೆ ಇಸ್ರೇಲರ ಭೂಮಿಯಲ್ಲಿ ಹೆಜ್ಜೆ ಇಡಲಿಲ್ಲ. ಸಮುವೇಲನ ಜೀವಿತದ ಉಳಿದ ಭಾಗದಲ್ಲಿ ಯೆಹೋವನು ಫಿಲಿಷ್ಟಿಯರಿಗೆ ವಿರುದ್ಧವಾಗಿದ್ದನು.


ಯೆರುಬ್ಬಾಳನು ಅನೇಕ ಸತ್ಕಾರ್ಯಗಳನ್ನು ಮಾಡಿದರೂ ಸಹ ಇಸ್ರೇಲರು ಅವನ ಕುಟುಂಬದವರಿಗೆ ಕೃತಜ್ಞತೆಯುಳ್ಳವರಾಗಿರಲಿಲ್ಲ.


ಯೋವಾಷನ ಮಗ ಯೆರುಬ್ಬಾಳನು (ಗಿದ್ಯೋನನು) ತನ್ನ ಮನೆಯಲ್ಲಿ ವಾಸವಾಗಿದ್ದನು.


ತನ್ನ ಸುತ್ತಲೂ ನಿಂತಿದ್ದ ಜನರಿಗೆ ಯೋವಾಷನು, “ನೀವು ಬಾಳನ ಪಕ್ಷವನ್ನು ವಹಿಸುವಿರಾ? ನೀವು ಬಾಳನನ್ನು ರಕ್ಷಿಸುವಿರಾ? ಬಾಳನ ಪಕ್ಷದವರನ್ನು ಬೆಳಗಾಗುವುದರೊಳಗೆ ಕೊಂದು ಬಿಡಲಾಗುವುದು. ಬಾಳನು ನಿಜವಾಗಿಯೂ ದೇವರಾಗಿದ್ದರೆ ಅವನ ಯಜ್ಞವೇದಿಕೆಯನ್ನು ಬೀಳಿಸುವಾಗ ಅವನು ತನ್ನ ರಕ್ಷಣೆಯನ್ನು ಏಕೆ ಮಾಡಿಕೊಳ್ಳಲಿಲ್ಲ?” ಅಂದನು.


ಬೆಳಗಿನ ಜಾವ ಯೆರುಬ್ಬಾಳನು (ಗಿದ್ಯೋನನು) ಮತ್ತು ಅವನ ಎಲ್ಲಾ ಜನರು ಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು. ಮಿದ್ಯಾನ್ಯರು ಮೋರೆ ಎಂಬ ಬೆಟ್ಟದ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡರು. ಇದು ಗಿದ್ಯೋನ ಮತ್ತು ಅವನ ಜನರ ಉತ್ತರಕ್ಕಿತ್ತು.


ಸಮುವೇಲನು ಯೆಹೋವನ ನಿಜಪ್ರವಾದಿಯೆಂಬುದು ದಾನಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರೇಲರಿಗೂ ಆಗ ತಿಳಿದು ಬಂದಿತು.


ಇಸ್ರೇಲನ್ನು ರಕ್ಷಿಸಲು ಒಬ್ಬನನ್ನು ಯೆಹೋವನು ಕಳುಹಿಸಿದನು. ಇಸ್ರೇಲರು ಅರಾಮ್ಯದಿಂದ ಬಿಡುಗಡೆಗೊಂಡು ಸ್ವತಂತ್ರರಾದರು. ಇಸ್ರೇಲರು ತಮ್ಮ ಸ್ವಂತ ಮನೆಗಳಿಗೆ ಹಿಂದಿರುಗಿ ಸುರಕ್ಷಿತವಾಗಿ ವಾಸಿಸಿದರು.


ಊಲಾಮನ ಮಗನು ಬೆದಾನ್. ಇವರೆಲ್ಲಾ ಗಿಲ್ಯಾದನ ಸಂತತಿಯವರು: ಗಿಲ್ಯಾದನು ಮಾಕೀರನ ಮಗ. ಮಾಕೀರನು ಮನಸ್ಸೆಯ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು