1 ಸಮುಯೇಲ 12:12 - ಪರಿಶುದ್ದ ಬೈಬಲ್12 ಆದರೆ ಅಮ್ಮೋನಿಯರ ರಾಜನಾದ ನಾಹಾಷನು ನಿಮ್ಮ ವಿರುದ್ಧ ಹೋರಾಡಲು ಬರುತ್ತಿರುವುದನ್ನು ಕಂಡು ನೀವು, ‘ನಮ್ಮನ್ನಾಳಲು ನಮಗೆ ಒಬ್ಬ ರಾಜ ಬೇಕು’ ಎಂದು ಕೇಳಿದಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ರಾಜನಾಗಿದ್ದರೂ ನೀವು ಹೀಗೆ ಕೇಳಿದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು, ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ ನೀವು, ‘ನಮಗೊಬ್ಬ ಅರಸನನ್ನು ನೇಮಿಸು’ ಎಂದು ನನ್ನನ್ನು ಬೇಡಿಕೊಂಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು, ನಿಮ್ಮ ದೇವರಾದ ಸರ್ವೆಶ್ವರ ನಿಮ್ಮ ಅರಸನಾಗಿದ್ದರೂ ನೀವು, ‘ನಮಗೊಬ್ಬ ಅರಸನನ್ನು ನೇಮಿಸು’ ಎಂದು ನನ್ನನ್ನು ಬೇಡಿಕೊಂಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ ನೀವು - ನಮಗೊಬ್ಬ ಅರಸನನ್ನು ನೇವಿುಸೆಂದು ನನ್ನನ್ನು ಬೇಡಿಕೊಂಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಆದರೆ ಅಮ್ಮೋನ್ಯರ ಅರಸನಾದ ನಾಹಾಷನು ನಿಮಗೆ ವಿರೋಧವಾಗಿ ಯುದ್ಧಮಾಡಲು ಬರುವುದನ್ನು ಕಂಡಾಗ, ನಿಮ್ಮ ದೇವರಾದ ಯೆಹೋವ ದೇವರೇ ನಿಮಗೆ ಅರಸರಾಗಿದ್ದರು. ಆಗ ನೀವು, ‘ನಮಗೆ ಹಾಗೆ ಬೇಡ, ಒಬ್ಬ ಅರಸನು ನಮ್ಮನ್ನು ಆಳಬೇಕು,’ ಎಂದಿರಿ. ಅಧ್ಯಾಯವನ್ನು ನೋಡಿ |