Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:20 - ಪರಿಶುದ್ದ ಬೈಬಲ್‌

20 ಸಮುವೇಲನು, “ಭಯಪಡಬೇಡಿ. ಅದೇನೋ ನಿಜ. ನೀವು ಆ ಕೆಟ್ಟಕಾರ್ಯಗಳನ್ನೆಲ್ಲಾ ಮಾಡಿದಿರಿ. ಆದರೆ ಯೆಹೋವನ ಮಾರ್ಗದಲ್ಲಿ ನಡೆಯುವುದನ್ನು ನಿಲ್ಲಿಸದಿರಿ. ಯೆಹೋವನ ಸೇವೆಯನ್ನು ಪೂರ್ಣಹೃದಯದಿಂದ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು, “ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು, ಯೆಹೋವನನ್ನು ಅಂಟಿಕೊಂಡು, ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಗ ಸಮುವೇಲನು, “ಭಯಪಡಬೇಡಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆ ಆದರೂ ಅದನ್ನು ಬಿಟ್ಟು, ಸರ್ವೇಶ್ವರನನ್ನು ಹೊಂದಿಕೊಂಡು ಪೂರ್ಣಮನಸ್ಸಿನಿಂದ ಅವರೊಬ್ಬರನ್ನೇ ಪೂಜಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು ಯೆಹೋವನನ್ನು ಅಂಟಿಕೊಂಡು ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಸಮುಯೇಲನು ಜನರಿಗೆ, “ನೀವು ಭಯಪಡಬೇಡಿರಿ. ಈ ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ. ಆದರೂ ಯೆಹೋವ ದೇವರನ್ನು ಬಿಟ್ಟು ತಿರುಗದೆ, ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರನ್ನು ಸೇವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:20
15 ತಿಳಿವುಗಳ ಹೋಲಿಕೆ  

“ಆದ್ದರಿಂದ ಜಾಗರೂಕರಾಗಿರಿ. ಬೇರೆ ದೇವರುಗಳನ್ನು ಸೇವೆಮಾಡಿ ಆರಾಧಿಸಬೇಡಿ.


ಆದರೆ ಸಾತ್ವಿಕತೆಯಿಂದ ಗೌರವಕರವಾದ ರೀತಿಯಲ್ಲಿ ಅವರಿಗೆ ಉತ್ತರವನ್ನು ಹೇಳಿ. ನೀವು ಮಾಡುತ್ತಿರುವುದು ಯೋಗ್ಯವಾದದ್ದೆಂಬುದು ನಿಮಗೆ ಯಾವಾಗಲೂ ಖಚಿತವಾಗಿ ತಿಳಿದಿರಬೇಕು. ಆಗ, ನೀವು ಕ್ರಿಸ್ತನಲ್ಲಿ ಒಳ್ಳೆಯವರಾಗಿ ಜೀವಿಸುವುದನ್ನು ನೋಡಿ ನಿಮ್ಮ ಬಗ್ಗೆ ಕೆಟ್ಟಮಾತುಗಳನ್ನು ಹೇಳುವವರು ತಾವು ಹೇಳಿದ ಕೆಟ್ಟ ಸಂಗತಿಗಳಿಗಾಗಿ ನಾಚಿಕೆಪಡುವರು.


ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.


ದುಷ್ಟರು ಕುತಂತ್ರಗಳನ್ನು ಮಾಡುವರು. ಯೆಹೋವನು ಅವರನ್ನು ದಂಡಿಸುವನು. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ.


ನನ್ನ ಎದುರಿನಲ್ಲಿ ಯಾವ ವಿಗ್ರಹಗಳೂ ಇಲ್ಲ. ನಿನಗೆ ದ್ರೋಹಮಾಡುವವರು ನನಗೆ ಅಸಹ್ಯ. ನಾನು ಅವರಂತೆ ಮಾಡುವುದಿಲ್ಲ!


ಯಾವನು ಯೆಹೋವನಲ್ಲಿ ಭರವಸವಿಟ್ಟಿದ್ದಾನೋ ಅವನೇ ಧನ್ಯನು. ಸಹಾಯಕ್ಕಾಗಿ ವಿಗ್ರಹಗಳ ಕಡೆಗೂ ಸುಳ್ಳುದೇವರುಗಳ ಕಡೆಗೂ ತಿರುಗಿಕೊಳ್ಳದವನೇ ಭಾಗ್ಯವಂತನು.


“ಯೆಹೋವನ ಆಜ್ಞೆಗಳನ್ನೆಲ್ಲಾ ಜಾಗರೂಕತೆಯಿಂದ ಕೈಕೊಂಡು ನಡೆಯಿರಿ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಎಲ್ಲವನ್ನು ಪಾಲಿಸಿರಿ. ಆ ಧರ್ಮಶಾಸ್ತ್ರಕ್ಕೆ ವಿಮುಖರಾಗಬೇಡಿ.


ನನ್ನ ಮರಣದ ಬಳಿಕ ನೀವು ಕೆಟ್ಟಕಾರ್ಯಗಳನ್ನು ಮಾಡುವಿರೆಂದು ನನಗೆ ಗೊತ್ತಿದೆ; ನನ್ನ ಅಪ್ಪಣೆಗಳನ್ನು ಮೀರುವಿರಿ. ನಿಮಗೆ ಭಯಂಕರ ಸಂಗತಿಗಳು ಸಂಭವಿಸುವವು. ಯಾಕೆಂದರೆ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸುವಿರಿ” ಎಂದು ಹೇಳಿದನು.


ನೀವು ನಿಮ್ಮ ದೇವರಾದ ಯೆಹೋವನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಾನು ನಿಮ್ಮೊಳಗಿಂದ ಎಲ್ಲಾ ವ್ಯಾಧಿಯನ್ನು ತೆಗೆದುಬಿಡುವೆನು.


ಮರುದಿನ ಮುಂಜಾನೆ ಮೋಶೆಯು ಜನರಿಗೆ, “ನೀವು ಭಯಂಕರವಾದ ಪಾಪವನ್ನು ಮಾಡಿದ್ದೀರಿ. ಆದರೆ ಈಗ ನಾನು ಯೆಹೋವನ ಬಳಿಗೆ ಹೋಗಿ, ಆತನು ನಿಮ್ಮ ಪಾಪಗಳನ್ನು ಕ್ಷಮಿಸುವಂತೆ ನಾನೇನಾದರೂ ಮಾಡಬಹುದೊ ಎಂದು ವಿಚಾರಿಸುತ್ತೇನೆ” ಎಂದನು.


ಜನರೆಲ್ಲಾ ಸಮುವೇಲನಿಗೆ, “ನಿನ್ನ ಸೇವಕರಾದ ನಮಗಾಗಿ, ನಿನ್ನ ದೇವರಾದ ಯೆಹೋವನಲ್ಲಿ ಪ್ರಾರ್ಥಿಸು. ನಮ್ಮನ್ನು ಸಾಯಲು ಬಿಡಬೇಡ. ನಾವು ಅನೇಕ ಸಲ ಪಾಪಗಳನ್ನು ಮಾಡಿದ್ದೇವೆ. ಈಗ ನಾವು ರಾಜನನ್ನು ಕೇಳಿಕೊಂಡಿದ್ದು ನಮ್ಮ ಪಾಪಗಳೊಂದಿಗೆ ಮತ್ತೊಂದು ಪಾಪವನ್ನು ಮಾಡಿದಂತಾಯಿತು” ಎಂದು ಹೇಳಿದರು.


“ಇಸ್ರೇಲ್ ಜನರೇ, ಕೇಳಿರಿ! ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ನಿಜವಾಗಿಯೂ ಅಪೇಕ್ಷಿಸುವುದೇನು? ನೀವು ಆತನನ್ನು ಗೌರವಿಸಬೇಕೆಂದೂ ಆತನ ಆಜ್ಞಾವಿಧಿಗಳಿಗೆ ವಿಧೇಯರಾಗಬೇಕೆಂದೂ ಅಪೇಕ್ಷಿಸುತ್ತಾನೆ. ನೀವು ಆತನನ್ನು ಪ್ರೀತಿಸಿ, ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಆತನ ಸೇವೆ ಮಾಡಬೇಕೆಂದು ಆತನು ಅಪೇಕ್ಷಿಸುತ್ತಾನೆ.


“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.


ಯೆಹೋವನು ಹೇಳುವುದೇನೆಂದರೆ, “‘ನೀವು ಈಜಿಪ್ಟ್ ದೇಶವನ್ನು ಬಿಟ್ಟಾಗ ನಾನು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ನಾನು ಆ ವಾಗ್ದಾನವನ್ನು ನೆರವೇರಿಸಿದ್ದೇನೆ! ನನ್ನ ಆತ್ಮವು ನಿಮ್ಮೊಂದಿಗಿದೆ. ಆದ್ದರಿಂದ ಭಯಪಡಬೇಡಿ!’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು