1 ಸಮುಯೇಲ 12:21 - ಪರಿಶುದ್ದ ಬೈಬಲ್21 ವಿಗ್ರಹಗಳು ಕೇವಲ ಪ್ರತಿಮೆಗಳಷ್ಟೇ. ಅವು ನಿಮಗೆ ಸಹಾಯ ಮಾಡಲಾರವು. ಆದ್ದರಿಂದ ಅವುಗಳನ್ನು ಪೂಜಿಸಬೇಡಿ. ವಿಗ್ರಹಗಳು ನಿಮಗೆ ಸಹಾಯ ಮಾಡಲಾರವು ಮತ್ತು ರಕ್ಷಿಸಲಾರವು. ಅವುಗಳಿಂದ ಪ್ರಯೋಜನವೇನೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ದೇವರಿಗೆ ಇಷ್ಟವಿಲ್ಲದ ವಿಷಯಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ, ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ದೇವರಲ್ಲದವುಗಳನ್ನು ಹಿಂಬಾಲಿಸಬೇಡಿ; ಅವುಗಳಿಂದ ನಿಮಗೆ ಲಾಭವಿಲ್ಲ; ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ದೇವರಲ್ಲದವುಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ ರಕ್ಷಣೆಯೂ ಸಿಕ್ಕುವದಿಲ್ಲ. ಅವು ವ್ಯರ್ಥವಾದವುಗಳೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ವ್ಯರ್ಥವಾದ ವಸ್ತುಗಳ ಹಿಂದೆ ಹೋಗಬೇಡಿರಿ. ಅವು ನಿಮಗೆ ಒಳ್ಳೆಯದನ್ನು ಮಾಡಲಾರದವುಗಳೂ ನಿಮ್ಮನ್ನು ಬಿಡಿಸಲಾರದವುಗಳೂ ಆಗಿವೆ. ಏಕೆಂದರೆ ಅವು ವ್ಯರ್ಥವಾದವುಗಳಾಗಿವೆ. ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.
ಅವರು ಆ ವಿಗ್ರಹವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೊರುತ್ತಾರೆ. ಆ ಸುಳ್ಳುದೇವರುಗಳು ನಿಷ್ಪ್ರಯೋಜಕವಾಗಿವೆ. ಜನರೇ ಅವುಗಳನ್ನು ಹೊತ್ತುಕೊಳ್ಳಬೇಕು. ಜನರು ಅವುಗಳನ್ನು ನೆಲದ ಮೇಲೆ ಇಟ್ಟಾಗ ಅವು ಅಲ್ಲಾಡುವದಿಲ್ಲ. ತಮ್ಮ ಸ್ಥಳದಿಂದ ಆ ಸುಳ್ಳುದೇವರುಗಳು ಎದ್ದುಹೋಗುವದಿಲ್ಲ. ಜನರು ಅದರ ಮುಂದೆ ಕೂಗಿಕೊಂಡರೂ ಅವು ಕೇಳಿಸಿಕೊಳ್ಳುವದಿಲ್ಲ. ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳಷ್ಟೇ. ಅವು ಜನರನ್ನು ಅವರ ಕಷ್ಟಗಳಿಂದ ಬಿಡಿಸಲಾರವು.
“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.
ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.