1 ಸಮುಯೇಲ 12:24 - ಪರಿಶುದ್ದ ಬೈಬಲ್24 ಆದರೆ ನೀವು ಯೆಹೋವನನ್ನು ಗೌರವಿಸಬೇಕು. ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವನ ಸೇವೆಯನ್ನು ನಿಜವಾಗಿಯೂ ಮಾಡಬೇಕು. ಆತನು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ನೆನಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಆತನನ್ನು ಸತ್ಯದಿಂದಲೂ, ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನೀವಾದರೋ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಅವರು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಅವರಿಗೆ ಶ್ರದ್ಧೆಯಿಂದಲೂ ಪೂರ್ಣಮನಸ್ಸಿನಿಂದಲೂ ಸೇವೆಸಲ್ಲಿಸುತ್ತಾ ಬರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ನೆನಸಿಕೊಂಡು ಆತನನ್ನು ಸತ್ಯದಿಂದಲೂ ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದರೆ ನೀವು ಯೆಹೋವ ದೇವರಿಗೆ ಭಯಪಟ್ಟು, ನಿಮ್ಮ ಪೂರ್ಣಹೃದಯದಿಂದ ನಂಬಿಗಸ್ತರಾಗಿ ಅವರನ್ನು ಸೇವಿಸಿರಿ. ಏಕೆಂದರೆ ಅವರು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದರೆಂದು ಆಲೋಚಿಸಿರಿ. ಅಧ್ಯಾಯವನ್ನು ನೋಡಿ |
ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.