1 ಸಮುಯೇಲ 12:4 - ಪರಿಶುದ್ದ ಬೈಬಲ್4 ಇಸ್ರೇಲರು, “ಇಲ್ಲ, ನೀನು ನಮಗೆ ಕೆಟ್ಟದ್ದೇನನ್ನೂ ಮಾಡಿಲ್ಲ. ನೀನು ನಮ್ಮನ್ನು ಎಂದೂ ವಂಚಿಸಿಲ್ಲ; ನಮ್ಮಿಂದ ಏನನ್ನೂ ತೆಗೆದುಕೊಂಡಿಲ್ಲ” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು, “ನೀನು ನಮ್ಮನ್ನು ವಂಚಿಸಿ ಪೀಡಿಸಿದ್ದಾಗಲಿ, ನಮ್ಮಿಂದ ಏನಾದರೂ ಕಸಿದುಕೊಂಡದ್ದಾಗಲಿ ಇರುವುದಿಲ್ಲ” ಎಂದು ಉತ್ತರ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವರು, “ಇಲ್ಲ, ನೀವು ನಮ್ಮನ್ನು ವಂಚಿಸಿ ಪೀಡಿಸಿ ನಮ್ಮಿಂದ ಏನೂ ಕಸಿದುಕೊಂಡಿಲ್ಲ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನು ನಮ್ಮನ್ನು ವಂಚಿಸಿ ಪೀಡಿಸಿದ್ದಾಗಲಿ ನಮ್ಮಿಂದ ಏನಾದರೂ ಕಸಕೊಂಡದ್ದಾಗಲಿ ಇರುವದಿಲ್ಲ ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು, “ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ, ನೀನು ಯಾರ ಕೈಯಿಂದಲೂ ಏನೂ ತೆಗೆದುಕೊಳ್ಳಲಿಲ್ಲ,” ಎಂದರು. ಅಧ್ಯಾಯವನ್ನು ನೋಡಿ |
ಆದರೆ ಬೇರೆ ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಈ ಸಮಾಚಾರವನ್ನು ತಿಳಿದು ಹೊಟ್ಟೆಕಿಚ್ಚುಪಟ್ಟರು. ಅವರು ದಾನಿಯೇಲನ ಮೇಲೆ ದೋಷಾರೋಪಣೆ ಮಾಡಲು ಕಾರಣಗಳನ್ನು ಹುಡುಕಲಾರಂಭಿಸಿದರು. ದಾನಿಯೇಲನು ಮಾಡುವ ರಾಜ್ಯದ ಎಲ್ಲ ಕೆಲಸಗಳ ಮೇಲೆ ಅವರು ಕಣ್ಣಿಟ್ಟರು. ಆದರೆ ದಾನಿಯೇಲನಲ್ಲಿ ಯಾವ ತಪ್ಪೂ ಅವರಿಗೆ ಸಿಕ್ಕಲಿಲ್ಲ. ಆದ್ದರಿಂದ ಅವರು ಅವನ ಮೇಲೆ ಯಾವ ದೋಷಾರೋಪಣೆಯನ್ನೂ ಮಾಡಲಾಗಲಿಲ್ಲ. ದಾನಿಯೇಲನು ಪ್ರಾಮಾಣಿಕನೂ ವಿಶ್ವಾಸಪಾತ್ರನೂ ಆಗಿದ್ದನು. ಅವನು ಬಹಳ ಕಷ್ಟಪಟ್ಟು ಕೆಲಸ ಮಾಡುತ್ತಿದ್ದನು; ಅರಸನಿಗೆ ಯಾವ ರೀತಿಯಲ್ಲೂ ವಂಚನೆ ಮಾಡುತ್ತಿರಲಿಲ್ಲ.
ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲಿ ಕತ್ತೆಯನ್ನಾಗಲಿ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.